ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ: ಡಿಸಿಎಂ ಡಿ. ಕೆ. ಶಿವಕುಮಾರ್ ಪ್ರಶ್ನೆ

Date:

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪಾದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

- Advertisement -

ಫೋನ್ ಟ್ಯಾಪ್ ಬಗ್ಗೆ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾಧ್ಯಮದವರು  ಪ್ರಶ್ನಿಸಿದಾಗ, “ಭಯೋತ್ಪಾದಕರ ಫೋನನ್ನು ಅನುಮತಿ ಪಡೆದು ಟ್ಯಾಪ್ ಮಾಡಲಾಗುತ್ತದೆ. ಇವರು ನಮ್ಮ ರಾಜ್ಯದ ನಾಯಕರು, ಇವರ ಫೋನ್ ಟ್ಯಾಪ್ ಮಾಡುವ ಅವಶ್ಯಕತೆ ನಮ್ಮ ಸರ್ಕಾರಕ್ಕಿಲ್ಲ. ಕೇವಲ ಪ್ರಚಾರಕ್ಕಾಗಿ ಇಂತಹ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸರ್ಕಾರ ಒಂದು ವರ್ಷ ಐಸಿಯುನಲ್ಲಿ ಇತ್ತು ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ “ಪಾಪ ಅವರು ಇನ್ನೇನು ಮಾಡಲು, ಇನ್ನೇನು ಹೇಳಲು ಸಾಧ್ಯ. ಅಧಿಕಾರದಲ್ಲಿ ಇದ್ದಾಗ ಏನೂ ಮಾಡಲಿಲ್ಲ. ಸರ್ಕಾರ ಐಸಿಯುನಲ್ಲಿ ಇತ್ತೋ ಇರಲಿಲ್ಲವೋ ಎಂದು ಜನ ಹೇಳಬೇಕು, ನಾಯಕರುಗಳಲ್ಲ” ಎಂದರು.

“ಹಿಂದಿನ ಸರ್ಕಾರದ ಕೆಟ್ಟ ಆಡಳಿತದಿಂದ, ಬೆಲೆ ಏರಿಕೆಯಿಂದ ತತ್ತರಿಸಿದ್ದ ಮಹಿಳೆಯರ ಜೀವನದಲ್ಲಿ ನಮ್ಮ ಸರ್ಕಾರದ ಆಡಳಿತದಿಂದ ಬದಲಾವಣೆ ಉಂಟಾಗಿದೆ. ಕೆಟ್ಟ ಆಡಳಿತ ಎಂದು ಚುನಾವಣೆಗೆ ಮುಂಚಿತವಾಗಿ ಕುಮಾರಸ್ವಾಮಿ ಹಾಗೂ ಅವರ ಪಕ್ಷದವರ ನುಡಿಮುತ್ತುಗಳ ಬಗ್ಗೆ ಮಾಧ್ಯಮದವರ ಬಳಿಯೇ ದಾಖಲೆಗಳು ಇದ್ದಾವಲ್ಲವೇ? ಅವರು ನಮ್ಮ ಬಗ್ಗೆ ಮಾತನಾಡಲೇ ಬೇಕಲ್ಲವೇ!. ಅವರಿಂದ ನಾನು ಶಹಬಾಸ್‌ಗಿರಿ ನಿರೀಕ್ಷಿಸಲು ಸಾಧ್ಯವೇ? ಇದನ್ನು ನಾನು ನಿರೀಕ್ಷೆ ಮಾಡುವುದೂ ಇಲ್ಲ” ಎಂದು ಹೇಳಿದರು.

ನನಗೂ ಪೆನ್ ಡ್ರೈವ್‌ಗೂ ಸಂಬಂಧವಿಲ್ಲ

ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ಅವರ ಪಾತ್ರದ ಬಗ್ಗೆ ಆರೋಪ ಮಾಡಿರುವ ಕುರಿತು ಕೇಳಿದಾಗ, “ನನಗೂ ಈ ಪ್ರಕರಣಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ನನ್ನ ಹೆಸರನ್ನು ಪ್ರಸ್ತಾಪ ಮಾಡದಿದ್ದರೆ ಅವರಿಗೆಲ್ಲ ನಿದ್ದೆ ಬರುವುದಿಲ್ಲ. ಮಾಧ್ಯಮಗಳು ಸಹ ಈ ವಿಚಾರದಲ್ಲಿ ನೈತಿಕತೆಯ ಗಡಿ ಮೀರಬಾರದು. ಉಪ್ಪು ತಿಂದವನು ನೀರು ಕುಡಿಯಬೇಕು ಎಂದು ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ” ಎಂದು ತಿಳಿಸಿದರು.

ಯಾರ ಜೊತೆಯೂ ಮಾತನಾಡಿಲ್ಲ

ಡಿ.ಕೆ.ಶಿವಕುಮಾರ್, ದೇವರಾಜೇಗೌಡ ಮತ್ತು ಶಿವರಾಮೇಗೌಡ ಅವರ ನಡುವಿನ ಸಂಭಾಷಣೆ ಆಡಿಯೋ ಬಿಡುಗಡೆ ಬಗ್ಗೆ ಕೇಳಿದಾಗ “ನಾನು ಯಾರ ಜೊತೆಯೂ ಮಾತನಾಡಬಾರದ್ದು ಮಾತನಾಡಿಲ್ಲ. ಯಾರಿಗೂ ನಾನು ಜಿಪಿಎ ಕೊಟ್ಟಿಲ್ಲ. ನಾನೊಬ್ಬ ರಾಜಕಾರಣಿ, ನನ್ನನ್ನು ಭೇಟಿ ಮಾಡಲು ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷದ ಕಾರ್ಯಕರ್ತರೂ ಬರುತ್ತಾರೆ. ಅವರು ಬಿಜೆಪಿಯವರು, ನನ್ನ ಭೇಟಿಗೆ ಸಮಯ ಕೇಳಿದ್ದರು. ನಾನು ಕೊಡಲಿಲ್ಲ. ಅರ್ಧ ನಿಮಿಷವೂ ನಾನು ಯಾರ ಬಳಿಯೂ ಮಾತನಾಡಿಲ್ಲ. ನನಗೂ ರಾಜಕೀಯ, ವ್ಯವಹಾರ ಪ್ರಜ್ಞೆ ಇದೆ. ಈ ವಿಚಾರದ ಗಂಭೀರತೆಯೂ ನನಗೆ ಅರ್ಥವಾಗುತ್ತದೆ” ಎಂದರು.

ಸರ್ಕಾರಕ್ಕೆ ಒಂದು ವರ್ಷ: ತೃಪ್ತಿದಾಯಕ ಆಡಳಿತ ನೀಡಿದ್ದೇವೆ

“ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿರುವ ಬಗ್ಗೆ ಕೇಳಿದಾಗ “ಎಲ್ಲರ ಸಹಕಾರದಿಂದ ರಾಜ್ಯದ ಜನರಿಗೆ ತೃಪ್ತಿದಾಯಕ ಆಡಳಿತ ನೀಡಿದ್ದೇವೆ. ಗ್ಯಾರಂಟಿ ಯೋಜನೆಗಳ ಜತೆಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಜನರಿಗೆ ನಮ್ಮ ಸರ್ಕಾರದ ಬಗ್ಗೆ ತೃಪ್ತಿಯಿದೆ. ಜನರ ವಿಶ್ವಾಸವನ್ನು ಗಳಿಸಿ ಒಂದು ವರ್ಷ ಪೂರೈಸಿದ್ದೇವೆ” ಎಂದರು.

“ಲೋಕಸಭೆ ಚುನಾವಣೆ ಬಂದ ಕಾರಣಕ್ಕೆ ಒಂದಷ್ಟು ಅಭಿವೃದ್ಧಿ ಕೆಲಸಗಳು ಬಾಕಿ ಉಳಿದಿದ್ದವು. ಇವು ಕಾರ್ಯಗತಗೊಳ್ಳಬೇಕು, ಟೆಂಡರ್‌ಗಳನ್ನು ಕರೆಯಲು ಸಜ್ಜಾಗಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಅವಕಾಶ ಕೊಟ್ಟಿರುವ ರಾಜ್ಯದ ಜನತೆಗೆ, ನಮಗೆ ಸಹಕಾರ ನೀಡಿರುವ ಅಧಿಕಾರಿಗಳಿಗೆ, ಮಾಧ್ಯಮಗಳಿಗೆ ಹೃದಯ ಪೂರ್ವಕ ವಂದನೆಗಳು” ಎಂದು ಹೇಳಿದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...