ಚನ್ನಪಟ್ಟಣ ಉಪಚುನಾವಣೆಗೆ ಜೆಡಿಎಸ್ ತಯಾರಿ, ನಿಖಿಲ್ ಸ್ಪರ್ಧೆಗೆ ಒತ್ತಡ ಇದೆ ಎಂದ ಕುಮಾರಸ್ವಾಮಿ

Date:

Advertisements

ಮುಂಬರುವ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಸಮಾಲೋಚನೆ ನಡೆಸಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು ಸೇರಿದಂತೆ ಚನ್ನಪಟ್ಟಣ ಕ್ಷೇತ್ರದ ಎಲ್ಲಾ ಪ್ರಮುಖ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಕುಮಾರಸ್ವಾಮಿ, “ಈಗಾಗಲೇ 5 ಜಿಲ್ಲಾ ಪಂಚಾಯತಿ, ಕ್ಷೇತ್ರ ಹಾಗೂ ಪಟ್ಟಣ ಭಾಗದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದೇವೆ. ಈ ಸಭೆಯಲ್ಲಿ ಹಳ್ಳಿ, ಹೋಬಳಿ, ಪಂಚಾಯಿತಿ ಮಟ್ಟದ ಮುಖಂಡರು ಬಂದಿದ್ದರು. ಚುನಾವಣೆಗೆ ಯಾವ ರೀತಿ ತಯಾರಿಅಡಿಕೊಳ್ಳಬೇಕು. ಅಭ್ಯರ್ಥಿ ಯಾರಾಗಬೇಕು ಎನ್ನುವುವ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಮಿತ್ರಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಕೆಲಸ ಮಾಡಬೇಕು ಎಂದು ಮುಖಂಡರಿಗೆ ನಿರ್ದೇಶನ ನೀಡಿದ್ದೇನೆ” ಎಂದು ತಿಳಿಸಿದರು.

Advertisements

“ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಉಪ ಚುನಾವಣೆ ನಡೆಯಬಹುದು. ಇನ್ನು ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಬಹುದು. ಅಂತಿಮವಾಗಿ ದೆಹಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ನಾವು ಕೂತು ಚರ್ಚೆ ಮಾಡುತ್ತೇವೆ” ಎಂದು ಕೇಂದ್ರ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

“ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಕಳೆದ ಎರಡು ಬಾರಿ ಜೆಡಿಎಸ್ ನಿಂದ ಗೆದ್ದಿದ್ದೇವೆ. ಈ ಹಿಂದಿನಿಂದಲೂ ಇದು ಜೆಡಿಎಸ್ ಭದ್ರಕೋಟೆ. ನಮ್ಮಲ್ಲಿನ ಸಂಘಟನೆಯಲ್ಲಿ ಕೆಲವೊಂದು ಲೋಪದೋಷಗಳಿಂದ ಹಿಂದೆ ಬಿದ್ದಿದ್ದೆವು.
2013ರಲ್ಲೂ ನಮಗೆ ಹೆಚ್ಚಿನ ಮತಗಳು ಬಂದಿದ್ದವು. ಚನ್ನಪಟ್ಟಣದಲ್ಲಿ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸಿದ್ದಾರೆ. ನಮ್ಮ ಸಂಘಟನೆ ದೃಷ್ಟಿಯಿಂದ ಕೂತು ಚರ್ಚೆ ಮಾಡಿದ್ದೇವೆ. ಯಾವುದೇ ಸಮಸ್ಯೆ ಆಗದ ರೀತಿ ಚುನಾವಣೆ ನಡೆಸುತ್ತೇವೆ” ಎಂದು ಸಚಿವರು ಹೇಳಿದರು.

ನಿಖಿಲ್ ಅಭ್ಯರ್ಥಿ ಆಗಬೇಕು ಎಂಬ ಒತ್ತಡ ಇದೆ

ನಿಖಿಲ್ ಕುಮಾರಸ್ವಾಮಿ ಅವರು ಉಪ ಚುನಾವಣೆಯ ಅಭ್ಯರ್ಥಿ ಆಗಬೇಕು ಎಂಬ ಬಗ್ಗೆ ಕಾರ್ಯಕರ್ತರಿಂದ ಒತ್ತಡ ಇದೆ. ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಅಂತ 95% ನಾಯಕರು, ಮುಖಂಡರ ಅಭಿಪ್ರಾಯವಿದೆ. ಆದರೆ‌, ನಾವು ಈಗ ಇರುವ ಸನ್ನಿವೇಶ ನೋದಿಕೊಂಡು ನಿರ್ಧಾರ ಕೈಗೊಳ್ಳಬೇಕು. ಏನೇನು ಬೆಳವಣಿಗೆಗಳು ಇವೆ ಅಂತ ನೋಡಬೇಕು. ನಿಖಿಲ್ ಮಂಡ್ಯದಲ್ಲಿ ‌ನಿಲ್ಲಿಸಿದಾಗ ಎಲ್ಲಾ ‌ಪಕ್ಷಗಳು ಒಂದಾಗಿ ಸೋಲಿಸಿದರು. ಸಂಘಟಿತ ಷಡ್ಯಂತ್ರ ಮಾಡಿ ಸೋಲಿಸಲಾಯಿತು. ನಾನು ಈಗ ಎನ್ ಡಿಎ ಭಾಗ. ಎನ್ ಡಿಎ ಅಭ್ಯರ್ಥಿ ಗೆಲ್ಲಬೇಕು. ಯಾರೇ ನಿಂತು ಗೆದ್ದರೂ ಅದು ಎನ್ ಡಿಎ ಗೆಲುವು, ಆ ಮೂಲಕ ಕಾಂಗ್ರೆಸ್ ವಿರೋಧಿ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೋರಾಟಕ್ಕೆ ನಾವೂ ಕೈಜೋಡಿಸಿದ ಹಾಗಾಗುತ್ತದೆ” ಎಂದು ಪರೋಕ್ಷವಾಗಿ ನಿಖಿಲ್‌ ಸ್ಪರ್ಧೆಯ ಸುಳಿವನ್ನು ನೀಡಿದರು.

“ಈ ಹಿನ್ನಲೆಯಲ್ಲಿ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರು, ಕಾರ್ಯಕರ್ತರು ಎಲ್ಲರು ಸೇರಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ ಮಾಡುತ್ತೇವೆ. ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್ ಆಗುತ್ತದೆ. ಚುನಾವಣೆ ದಿನಾಂಕ 4-5 ದಿನಗಳಲ್ಲಿ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಕೂಡಲೇ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರ ಜತೆ ಚರ್ಚೆ ಮಾಡಿ ಅಭ್ಯರ್ಥಿ ಫೈನಲ್ ಮಾಡುತ್ತೇವೆ” ಎಂದು ಕುಮಾರಸ್ವಾಮಿ ಹೇಳಿದರು.

ಪದೇ ಪದೆ ಭೇಟಿಯಿಂದ ಫಲ ಸಿಗಲ್ಲ

ಚನ್ನಪಟ್ಟಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪದೇ ಪದೆ ಭೇಟಿ ನೀಡುವ ಬಗ್ಗೆ ಮಾತನಾಡಿ, “ಅವರು ಎಷ್ಟು ಸಲ ಭೇಟಿ ಕೊಟ್ಟರೂ ಉಪಯೋಗ ಇಲ್ಲ. ಅವರು ಈ ಕ್ಷೇತ್ರಕ್ಕೆ ಕೊಟ್ಟ ಕಾಣಿಕೆ ಏನೆಂದು ಜನರಿಗೆ ಗೊತ್ತಿದೆ. ಚುನಾವಣೆ ಬಂದಿದೆ, ಅದಕ್ಕೆ ಪದೇ ಪದೆ ಬರುತ್ತಿದ್ದಾರೆ ಅಷ್ಟೇ. ಚುನಾವಣೆ ಮುಗಿದ ಮೇಲೆ ಈ ಕಡೆ ತಲೆ ಹಾಕುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

Download Eedina App Android / iOS

X