ಶತ್ರುಗಳ ನಾಶಕ್ಕೆ ಕುಮಾರಸ್ವಾಮಿ ಕದ್ದು ಮುಚ್ಚಿ ಹೋಮ, ನನ್ನದು ಬಹಿರಂಗ: ಡಿ ಕೆ ಶಿವಕುಮಾರ್

Date:

- ಗಾಂಧಿ ಭಾರತ ಕಾರ್ಯಕ್ರಮ | 100 ಕಾಂಗ್ರೆಸ್ ಕಚೇರಿ ನಿರ್ಮಾಣ:‌ ಡಿ ಕೆ ಶಿವಕುಮಾರ್
- ಜ.13ರಂದು ಸಿಎಲ್‌ಪಿ ಸಭೆ‌ ಸಿಎಂ ಜೊತೆ ಚರ್ಚೆ ಮಾಡಿ ಕರೆದಿದ್ದೇವೆ: ಸ್ಪಷ್ಟನೆ

ಶತ್ರುಗಳ ನಾಶಕ್ಕೆ ಪೂಜೆ ಮಾಡಿಸುವುದು ಕುಮಾರಸ್ವಾಮಿ ಅವರ ಅನುಭವ. ಅವರು ಕದ್ದು ಮುಚ್ಚಿ ಹೋಮ ಮಾಡುತ್ತಾರೆ. ನಾನು ಬಹಿರಂಗವಾಗಿ ಮಾಡುತ್ತೇನೆ. ದಿನ ಬೆಳಗಾದರೆ ನಾನು ದೇವರಿಗೆ ಪೂಜೆ ಮಾಡುತ್ತೇನೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

- Advertisement -

ತಮ್ಮ ಸರ್ಕಾರಿ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ರಾತ್ರಿ ನಡೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳು ‘ಶತ್ರುಗಳ ನಾಶಕ್ಕೆ ಪೂಜೆ ಮಾಡಿಸಿದ್ದಾರೆ’ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಮೇಲಿನ ರೀತಿ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

“ಪ್ರತಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ಕುಮಾರಸ್ವಾಮಿ ಆರೋಪ ನಮಗೆ ಗೊತ್ತಿಲ್ಲ. ಅವರು ತಮ್ಮ ಅನುಭವದ ಮೇಲೆ ಮಾತನಾಡುತ್ತಿರಬೇಕು” ಎಂದರು.

100 ಕಾಂಗ್ರೆಸ್ ಕಚೇರಿ ನಿರ್ಮಾಣ

ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಜ.21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಹಿರಿಯ ನಾಯಕರ ಸಭೆಯಲ್ಲಿ ಚರ್ಚಿಸಲಾಯಿತು. ಈಗಾಗಲೇ 72 ಕಡೆ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಅರ್ಜಿ ಬಂದಿವೆ. ಉಳಿದ ಕಡೆಗಳು ಸೇರಿ 100 ಕಚೇರಿ ನಿರ್ಮಾಣ ಮಾಡಲಾಗುವುದು. ಸಚಿವರು ಪಕ್ಷದ ಹಿರಿಯ ನಾಯಕರಿಗೆ ಇದರ ಜವಾಬ್ದಾರಿ ನೀಡಲಾಗಿದೆ. ಶಾಸಕರಿಗೂ ಬೇರೆ ಬೇರೆ ಜವಾಬ್ದಾರಿ ನೀಡಲಾಗಿದೆ” ಎಂದು ಹೇಳಿದರು.

ಸರ್ಕಾರದ ಬಗ್ಗೆ ಭವಿಷ್ಯ ನುಡಿಯವುದು ಬೇಡ

ಇದೇ ಅವಧಿಯಲ್ಲಿ ನೀವು ಸಿಎಂ ಆಗುತ್ತೀರಿ ಎಂಬ ವಿನಯ್ ಗುರೂಜಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ಎಂದು ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಪವರ್ ಶೇರಿಂಗ್ ಬಗ್ಗೆ ಚರ್ಚೆ ಆಗುತ್ತಿರುವಾಗ ಈ ಹೇಳಿಕೆ ಬಂದಿದೆ ಎಂದು ಕೇಳಿದಾಗ, “ಯಾವ ಪವರ್ ಇಲ್ಲ, ಶೇರು ಇಲ್ಲ. ಐದು ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತದೆ” ಎಂದರು.

ಸಂಪುಟ ಸಭೆಯಲ್ಲಿ ಜಾತಿ ಗಣತಿ ಚರ್ಚೆ

ಜಾತಿ ಗಣತಿ ವಿರೋಧಿಸಿ ಒಕ್ಕಲಿಗ ಹಾಗೂ ಲಿಂಗಾಯತ ನಾಯಕರ ಸಭೆ ನಡೆಯುವುದೇ ಎಂದು ಕೇಳಿದಾಗ, “ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಈ ಬಗ್ಗೆ ಯಾವುದೇ ಸಭೆ ಇಲ್ಲ. ಅದರ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದ್ದು, ಅಲ್ಲಿ ನಾವು ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

ನಾನು, ಸಿಎಂ ಚರ್ಚಿಸಿ ಸಿಎಲ್‌ಪಿ ಸಭೆ

ಜ.13ರಂದು ಕರೆಯಲಾಗುವ ಸಿಎಲ್‌ಪಿ ಸಭೆ ಬಗ್ಗೆ ಕೇಳಿದಾಗ, “ನಾನು ಹಾಗೂ ಸಿಎಂ ಚರ್ಚೆ ಮಾಡಿಯೇ ಕರೆದಿದ್ದೇವೆ. ಅಂದು ಇಡೀ ದಿನ ಪಕ್ಷಕ್ಕೆ ಮುಡಿಪಾಗಿಡಬೇಕು ಎಂದು ಹೇಳಿ, ಅಂದಿನ ಕಾರ್ಯಕ್ರಮ ರದ್ದು ಮಾಡಿದ್ದೇವೆ. ಬೆಳಗ್ಗೆ 11 ಗಂಟೆಗೆಭಾರತ ಜೋಡೋ ಭವನದಲ್ಲಿ ಬ್ಲಾಕ್, ಜಿಲ್ಲಾ ಅಧ್ಯಕ್ಷರ ಸಭೆ ಕರೆಯಲಾಗಿದೆ. ಸಂಜೆ 4 ಗಂಟೆಗೆ ಪದಾಧಿಕಾರಿಗಳ ಸಭೆ ಕರೆದಿದ್ದೇವೆ. ಸಂಜೆ 6 ಗಂಟೆಗೆ ಶಾಸಕರು, ಸಚಿವರ ಸಭೆ ಮಾಡಿ ಜವಾಬ್ದಾರಿ ನೀಡಲಾಗುವುದು. 14ರಂದು ನಾನು ಹಾಗೂ ಸಿಎಂ ದೆಹಲಿಗೆ ತೆರಳಲಿದ್ದು, 15ರಂದು ದೆಹಲಿಯಲ್ಲಿ ಕಾಂಗ್ರೆಸ್ ನೂತನ ಕಚೇರಿ ಉದ್ಘಾಟನೆ ಮಾಡಲಾಗುವುದು” ಎಂದರು.

ದೊಡ್ಡವರ ಬಗ್ಗೆ ಮಾತನಾಡುವುದು ಬೇಡ

ನಮ್ಮ ಸಭೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಗೊತ್ತಿಲ್ಲ. ನಾವು ಯಾರನ್ನೂ ತಡೆದಿಲ್ಲ. ಅದರ ಅವಶ್ಯಕತೆ ನಮಗಿಲ್ಲ. ದೊಡ್ಡವರ ಬಗ್ಗೆ ಮಾತನಾಡುವುದು ಬೇಡ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಮತದಾರರ ಹೆಸರು ಅಳಿಸಲು ಫಾರಂ-7 ದುರ್ಬಳಕೆ; ತನಿಖೆಗೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...