ಅವಕಾಶವಾದಿ ಜೆಡಿಎಸ್ ಪಕ್ಷ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ; ದಿನೇಶ್‌ ಗುಂಡೂರಾವ್‌ ಟೀಕೆ

Date:

ಬಿಜೆಪಿಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

- Advertisement -

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಪತ್ರಿಕೆಯೊಂದರ ವರದಿ ಉಲ್ಲೇಖಿಸಿ ಟ್ವೀಟ್ ಮಾಡಿರುವ ಸಚಿವ, “ಬಿಜೆಪಿಯ ಬಿ ಟೀಂ ಜೆಡಿಎಸ್ ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ ಎಚ್ ಡಿ ಕುಮಾರಸ್ವಾಮಿ ನಮ್ಮ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. ಜೆಡಿಎಸ್‌ಗೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

“ಕೋಮುವಾದಿ ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್‌ಗೆ ಯಾವ ಸಿದ್ಧಾಂತವಿದೆ? ಅದೊಂದು ಅವಕಾಶವಾದಿ ಪಕ್ಷ. ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಜೆಡಿಎಸ್ ಮುಂದಿರುವ ಜಾತ್ಯತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೇ. 2006ರಲ್ಲಿ ಬಿಜೆಪಿ ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯತೀತ ತತ್ವಕ್ಕೆ ಎಚ್ ಡಿ ಕುಮಾರಸ್ವಾಮಿ ಎಳ್ಳು ನೀರು ಬಿಟ್ಟಿದ್ದರು. ಆಗಲೇ ಜೆಡಿಎಸ್‌ನ ಅವನತಿ ಶುರುವಾಗಿದ್ದು. 2004ರಲ್ಲಿ 59 ಸ್ಥಾನ ಗೆದ್ದಿದ್ದ ಜೆಡಿಎಸ್ ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯತೀತ ಸಿದ್ಧಾಂತವೇ ಕಾರಣ” ಎಂದು ಕುಟುಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಪಕ್ಷಗಳು ಎಷ್ಟೇ ಅಪಪ್ರಚಾರ ನಡೆಸಿದರೂ ಜನ ಸರ್ಕಾರದ ಬೆನ್ನಿಗೆ ನಿಂತಿದ್ದಾರೆ: ಪ್ರಿಯಾಂಕ್‌ ಖರ್ಗೆ

“ಬಿಜೆಪಿಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ ಎಚ್ ಡಿ ಕುಮಾರಸ್ವಾಮಿ ಅವರ ಸುಳ್ಳು ಜಾತ್ಯತೀತತೆಯ ನಕಲಿ ಶ್ಯಾಮನ ಅವತಾರ ಕೊನೆಯಾಗಲಿ” ಎಂದು ಕಿಡಿ ಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...