ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲು ಖಚಿತ, ಕಾಂಗ್ರೆಸ್ ಗೆಲುವು ನಿಶ್ಚಿತ: ಸಿಎಂ ಸಿದ್ದರಾಮಯ್ಯ ವಿಶ್ವಾಸ

Date:

Advertisements

ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸದಿಂದ ನುಡಿದರು.

ಮಂಡ್ಯದಲ್ಲಿ ನಡೆದ ಅಭೂತಪೂರ್ವ ಪ್ರಜಾಧ್ವನಿ-2 ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಾಗರ ಉದ್ದೇಶಿಸಿ ಮಾತನಾಡಿದ ಅವರು, “ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಶಾಸಕರು. ಅವರು ಅಲ್ಲೇ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಬಹುದಿತ್ತು. ಆದರೆ ಸೋಲಿನ ಭಯದಿಂದ ಇಲ್ಲಿಗೆ ಬಂದು ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇಲ್ಲೂ ಖಚಿತವಾಗಿ ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ” ಎಂದರು.

“ನರೇಂದ್ರ ಮೋದಿಯವರ ಅಚ್ಚೆ ದಿನ್ 10 ವರ್ಷ ಕಳೆದರೂ ಭಾರತೀಯರಿಗೆ ಬಂದಿಲ್ಲ. ರಾಜ್ಯದ ಜನತೆಗೆ ಅಚ್ಚೆ ದಿನ್ ಕಾಣಿಸಿಯೇ ಇಲ್ಲ. ಮೋದಿಯವರ ಕಾರಣದಿಂದ ಏರಿಕೆಯಾಗಿದ್ದ ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ-ಕಾಳು, ಅಡುಗೆ ಎಣ್ಣೆ ಸೇರಿ ಎಲ್ಲದರ ಬೆಲೆ ಏರಿಕೆ ನೀತಿಯಿಂದ ಹೈರಾಣಾಗಿದ್ದ ರಾಜ್ಯದ ಜನರ ಬದುಕಿನ‌ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಿಂದ ರಾಜ್ಯದ ಪ್ರತಿ ಕುಟುಂಬಗಳಿಗೆ, ಪ್ರತಿ ತಿಂಗಳು 5 ರಿಂದ 6 ಸಾವಿರ ರೂಪಾಯಿ ಒದಗಿ ಬರುವಂತಹ ನೆರವಿನ ಕಾರ್ಯಕ್ರಮಗಳನ್ನು ನೀಡಿದ್ದೇವೆ” ಎಂದು ಹೇಳಿದರು.

Advertisements

“ರಾಜ್ಯದ ಜನರಿಗೆ ಅನ್ನಭಾಗ್ಯದ ಅಕ್ಕಿ ಕೊಡ ಕೊಡದಂತೆ ಮೋದಿಯವರ ಕೇಂದ್ರ ಸರ್ಕಾರ ತೊಂದರೆ ಕೊಟ್ಟರೂ ಕೂಡ ನಾವು ಅಕ್ಕಿ ಜೊತೆಗೆ ಹಣವನ್ನೂ ನಮ್ಮ ಜನರ ಬದುಕಿಗೆ ಕೊಡುತ್ತಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಂಡವರು ಯಾರು ಎನ್ನುವುದನ್ನು ನಿಮ್ಮ ಹೃದಯಕ್ಕೆ ಕೇಳಿ ಕೊಳ್ಳಿ. ಅವರಿಗೆ ಮಾತ್ರ ನಿಮ್ಮ ಮತ ನೀಡಿ. ರಾಜ್ಯದಲ್ಲಿ ಬಿಜೆಪಿಯಿಂದ ಗೆದ್ದ 27 ಸಂಸದರು ರಾಜ್ಯದ ಸಮಸ್ಯೆಗಳ ಬಗ್ಗೆ ನೆಪಕ್ಕೂ ಧ್ವನಿ ಎತ್ತದೆ ರಾಜ್ಯದ ಜನರಿಂದ ಪಡೆದ ಮತಕ್ಕೆ ಅವಮಾನ ಮಾಡಿದರು. ಈ ಅವಮಾನಕ್ಕೆ ತಕ್ಕ ಉತ್ತರ ನೀಡಿ ರಾಜ್ಯದ ಜನತೆಯ ಪರವಾಗಿ ಧ್ವನಿ ಎತ್ತುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಮಂಡ್ಯ ಜನತೆಯ ಸ್ವಾಭಿಮಾನಿ ತಾಕತ್ತನ್ನು ತೋರಿಸಿ” ಎಂದು ಕರೆ ನೀಡಿದರು.

ಶ್ರೀರಾಮನವಮಿಯ ಶುಭಾಶಯ ಕೋರಿದ ಸಿಎಂ

ಇದೇ ಸಂದರ್ಭದಲ್ಲಿ ಶ್ರೀರಾಮನವಮಿಯ ಶುಭಾಶಯಗಳನ್ನು ಮಂಡ್ಯದ ಜನತೆಗೆ ಮತ್ತು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಅವರು ಕೋರಿ ಎಲ್ಲರೂ ಭಕ್ತಿ ಶ್ರದ್ದೆ ಮತ್ತು ಸಂಭ್ರಮದಿಂದ ರಾಮನವಮಿ ಆಚರಿಸುವಂತೆ ಕೋರಿದರು.

ಭಾವನಾತ್ಮಕವಾಗಿ ಕೆರಳಿಸಿ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ

“ಭಾರತೀಯರ ಭಾವನೆಗಳನ್ನು ಭಾವನಾತ್ಮಕವಾಗಿ ಕೆರಳಿಸಿ, ನಮ್ಮ ಬದುಕಿಗೆ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ. ಜನರ ಕಷ್ಟಗಳಿಗೆ ಸ್ಪಂದಿಸುವ ನಮಗೆ ಶಕ್ತಿ ಕೊಡಿ. ನೀವು ಕೊಟ್ಟ ಶಕ್ತಿ ನಿಮ್ಮ ಮನೆ ಬಾಗಿಲಿಗೇ ವಾಪಾಸ್ ಉತ್ತಮ ಕಾರ್ಯಕ್ರಮಗಳ ರೂಪದಲ್ಲಿ ವಾಪಾಸ್ ಬರುತ್ತದೆ” ಎಂದು ಘೋಷಿಸಿದರು.

ಎಐಸಿಸಿ ವರಿಷ್ಠ ರಾಹುಲ್ ಗಾಂಧಿ, ಡಿಸಿಎಂ ಡಿಕೆ ಶಿವಕುಮಾರ್ , ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಸೇರಿ ಮೈಸೂರು, ಮಂಡ್ಯ ಜಿಲ್ಲೆಯ ಶಾಸಕರುಗಳು, ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X