ಅಧಿಕಾರಿಗಳೊಂದಿಗೆ ಕುಮಾರಸ್ವಾಮಿ ಮೊದಲ ಸಭೆ; ʼಚೀನಾದೊಂದಿಗೆ ಸ್ಪರ್ಧೆʼ ಪರಿಕಲ್ಪನೆ‌ ಬಗ್ಗೆ ಚರ್ಚೆ

Date:

ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯಗಳ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕಾರಕ್ಕೂ ಮುನ್ನ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರು ಮಂಗಳವಾರ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ನಿವಾಸದಲ್ಲಿ ಸಭೆ ನಡೆಸಿದ ಸಚಿವರು, ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನಶ್ಚೇತನದ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದರು. ಅವಕಾಶಗಳ ಬಗ್ಗೆ ಶೀಘ್ರವೇ ಸಮಗ್ರ ಮಾಹಿತಿ ಕೊಡುವಂತೆ ಅಧಿಕಾರಿಗಳಿಗೆ ಕುಮಾರಸ್ವಾಮಿ ಸೂಚಿಸಿದರು.

ಕುದುರೆಮುಖದಲ್ಲಿ ಸಿಗುತ್ತಿದ್ದ ಕಬ್ಬಿಣದ ಅದಿರು ಜಗತ್ತಿನಲ್ಲಿಯೇ ಶ್ರೇಷ್ಠ ಗುಣಮಟ್ಟದ ಅದಿರು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಜೊತೆಗೆ ಬೆಂಗಳೂರಿನಲ್ಲಿ ಉಕ್ಕು ಸಂಶೋಧನಾ ಕೇಂದ್ರ ಸ್ಥಾಪನೆ ಬಗ್ಗೆ ಸಚಿವರ ಗಮನ ಸೆಳೆದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉಕ್ಕು ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟರೆ ಕೈಗಾರಿಕೆಗಳಿಗೆ ಅನುಕೂಲವಾಗುತ್ತದೆ. ಬೃಹತ್ ಕೈಗಾರಿಕೆ ಖಾತೆಯನ್ನು ತಮಗೇ ಕೊಟ್ಟಿರುವ ಕಾರಣ ಉಕ್ಕು ಖಾತೆಗೆ ಹೆಚ್ಚು ಸಹಾಯ ಆಗುತ್ತಿದೆ. ಸಿಎಂ ಆಗಿದ್ದ ವೇಳೆ ಕರ್ನಾಟಕದಲ್ಲಿ ಕೈಗಾರಿಕೆ ಕ್ಷೇತ್ರದಲ್ಲಿ ತಾವು ಮಾಡಿದ್ದ ಕೆಲಸಗಳ ಮಾಹಿತಿಯನ್ನು ಅಧಿಕಾರಿಗಳಿಗೆ ಸಚಿವರು ನೀಡಿದರು.

ಸಭೆಯಲ್ಲಿ ‘ಚೀನಾದೊಂದಿಗೆ ಸ್ಪರ್ಧೆʼ ಪರಿಕಲ್ಪನೆ ಬಗ್ಗೆ ವಿವರಣೆ ನೀಡಿದ ಅಧಿಕಾರಿಗಳಿಗೆ ಮೆಚ್ಚುಗೆ ಸೂಚಿಸಿದರು. ಇಡೀ ದೇಶದ ಎಲ್ಲ ರಾಜ್ಯಗಳ ಅಭಿವೃದ್ಧಿ ನನ್ನ ಗುರಿ ಎಂದು ಸಚಿವರು ತಿಳಿಸಿದರು.

“ಅವಕಾಶ ಇರುವ ಕೈಗಾರಿಕೆಗಳನ್ನು ಪುನಃಶ್ಚೇತನ ಮಾಡೋಣ. ಸುಖಾ ಸುಮ್ಮನೆ ಜನರ ತೆರಿಗೆ ಹಣ ಪೋಲು ಮಾಡೋದು ಬೇಡ. ಪ್ರಧಾನಿಗಳು ಬಹಳ ವಿಶ್ವಾಸ ಇಟ್ಟು ಮಹತ್ವದ ಖಾತೆಗಳನ್ನು ಕೊಟ್ಟಿದ್ದಾರೆ. ಅವರ ನಿರೀಕ್ಷೆ ಹುಸಿ ಆಗಬಾರದು” ಎಂದರು.

ಸಭೆಯಲ್ಲಿ ಸುಕೃತಿ ಲಿಖಿ – ಉಕ್ಕು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ, ವಿನೋದ್ ಕುಮಾರ್ ತ್ರಿಪಾಠಿ – ಜಂಟಿ ಕಾರ್ಯದರ್ಶಿ, ಅಶ್ವಿನಿ ಕುಮಾರ್, ಆರ್ಥಿಕ ಸಲಹೆಗಾರರು, ಸುಭಾಷ್ ಕುಮಾರ್, ಉಪ ಕಾರ್ಯದರ್ಶಿ ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯ ದಿವಸ್ ಆಚರಣೆ | ಕಾರ್ಗಿಲ್ ಯೋಧ ಕ್ಯಾಪ್ಟನ್ ಕಾಲಿಯಾರಿಗೆ ದ್ರೋಹ ಬಗೆದ ಬಿಜೆಪಿ

ಇವತ್ತು ನಾವು ವಿಜಯ್ ದಿವಸ್ ಆಚರಿಸಿ, ನಮ್ಮ ಐನೂರು ಸೈನಿಕರ ಸಾವಿಗೆ...

ಮುಡಾ ದಾಖಲೆ ಬಹಿರಂಗ, ಮನೆ ಮುರುಕ ರಾಜಕಾರಣ ಬಿಡಿ ಎಂದು ಸಿಎಂ ಬಿಜೆಪಿಗೆ ತಿರುಗೇಟು

ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ...

ಬಿಜೆಪಿ ಪಾದಯಾತ್ರೆಯ ಪ್ರತಿ ದಿನ ಅವರ ಒಂದೊಂದು ಹಗರಣ ಬಯಲು: ಡಿ ಕೆ ಶಿವಕುಮಾರ್

ಬಿಜೆಪಿ ಪಾದಯಾತ್ರೆಯ ಪ್ರತಿ ದಿನವೂ ಅವರ ಒಂದೊಂದು ಹಗರಣ ಬಯಲು ಮಾಡುತ್ತೇವೆ...

ಏನಿದು ಮುಡಾ – ವಾಲ್ಮೀಕಿ ನಿಗಮ ಅಕ್ರಮ; ಈ ಹಿಂದೆ ಯಾವೆಲ್ಲಾ ಹಗರಣಗಳು ನಡೆದಿವೆ?

ಲೋಕಸಭಾ ಚುನಾವಣಾ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮುಡಾ ಮತ್ತು...