ಕುಮಾರಸ್ವಾಮಿಯ ಗಣಿ ಫೋರ್ಜರಿ ಹೊರಗೆ ಬಂದಿದೆ, ಮುಂದೆ ಇನ್ನೇನೆಲ್ಲಾ ಬಹಿರಂಗವಾಗಲಿವೆಯೋ?: ಸಿದ್ದರಾಮಯ್ಯ

Date:

ನೋಂದಣಿಯೇ ಆಗದ ಕಂಪನಿಗೆ 550 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿ, ಈಗ “ಸಹಿ ನನ್ನದಲ್ಲ, ಯಾರೋ ಫೋರ್ಜರಿ ಮಾಡಿದ್ದಾರೆ” ಎಂದು ಕಣ್ಣೀರು ಸುರಿಸುತ್ತಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರೇ, ನಿಮ್ಮ ಬ್ರಹ್ಮಾಂಡ ಭ್ರಷ್ಟಾಚಾರದ ಪುರಾಣ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮುಂದೆ ಇನ್ನೇನೆಲ್ಲಾ ಬಹಿರಂಗವಾಗಲಿವೆಯೋ? ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

- Advertisement -

“ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ನನ್ನ ಸಹಿ, ಟಿಪ್ಪಣಿ ಯಾವುದೂ ಇಲ್ಲ, ನನ್ನ ಅಧಿಕಾರವಧಿಯಲ್ಲಿ ನಡೆದದ್ದೇ ಅಲ್ಲ – ಹೀಗಿದ್ದರೂ ನನ್ನ ರಾಜೀನಾಮೆ ಕೇಳುತ್ತಿರುವ ಕುಮಾರಸ್ವಾಮಿಯವರೇ? ನಿಮ್ಮ ಊಟದೆಲೆಯಲ್ಲಿ ಆನೆ ಸತ್ತು ಬಿದ್ದಿದೆ ನೋಡಿ” ಎಂದು ಎಕ್ಸ್‌ ತಾಣದಲ್ಲಿ ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ನ್ಯಾ.ಎನ್ ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವುದೊಂದೇ ಬಾಕಿ. ಯಾರನ್ನು ಕಾಯುತ್ತಾ ಕೂತಿದ್ದೀರಿ? ನರೇಂದ್ರ ಮೋದಿಯವರು ಬಂದು ರಕ್ಷಿಸುತ್ತಾರಾ? ಸ್ವಂತ ಪಕ್ಷದ ಮುಖ್ಯಮಂತ್ರಿಯನ್ನೇ ಜೈಲಿಗೆ ಕಳಿಸಿದ್ದ ಪಕ್ಷ ನಿಮ್ಮ ರಕ್ಷಣೆಗೆ ಬರುತ್ತಾರೆ ಎಂದು ಅಂದುಕೊಡಿದ್ದೀರಾ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

“ಯಾರೋ ಹೇಳಿದ ಕಾಗಕ್ಕ ಗುಬ್ಬಕ್ಕನ ಕಥೆ ಕೇಳಿ ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರೇ, ನಿಮ್ಮ ಕೈಯಲ್ಲಿರುವ ಹೆಚ್ ಡಿ ಕುಮಾರಸ್ವಾಮಿಯವರ ಗಣಿ ಹಗರಣದ ದಾಖಲೆ ಪತ್ರಗಳು ಈಗ ಸಾರ್ವಜನಿಕರ ಮುಂದೆ ಇದೆ. ಇವುಗಳ ಒಂದು ಪ್ರತಿಯನ್ನು ನಿಮ್ಮ ಒಡೆಯರಿಗೆ ಕಳಿಸಿಕೊಡಿ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದಂತೆ ಕೈಕಟ್ಟಿಹಾಕಿರುವ ಹಗ್ಗ ಬಿಚ್ಚಿಕೊಳ್ಳಬಹುದು” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....