ಕುಂಭಮೇಳ ಭೇಟಿ ನನ್ನ ವೈಯಕ್ತಿಕ ವಿಚಾರ: ಡಿಸಿಎಂ ಡಿ ಕೆ ಶಿವಕುಮಾರ್

Date:

ಗಂಗೆಯಲ್ಲಿ ಮಿಂದ ತಕ್ಷಣ ಡಿ ಕೆ ಶಿವಕುಮಾರ್​ ಅವರ ಪಾಪಗಳೆಲ್ಲ ಕಳೆದುಹೋಗುತ್ತಾ? ಎಂಬ ವಿಪಕ್ಷ ನಾಯಕ ಆರ್​ ಅಶೋಕ್​ ಹೇಳಿಕೆಗೆ ಡಿಸಿಎಂ ಡಿಕೆ ಶಿಕವಕುಮಾರ್​ ತಿರುಗೇಟು ನೀಡಿದ್ದಾರೆ.

- Advertisement -

ಕುಂಭಮೇಳಕ್ಕೆ ಹೋಗುವುದು ಬಿಡುವುದು ನನ್ನ ವೈಯಕ್ತಿಕ ವಿಚಾರ. ನನ್ನ ವೈಯಕ್ತಿಕ ನಂಬಿಕೆ, ಭಕ್ತಿ ಬಗ್ಗೆ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ. ಎಲ್ಲರಿಗೂ ಅವರದ್ದೇ ಆದ ಭಕ್ತಿ, ನಂಬಿಕೆಗಳು ಇರುತ್ತವೆ ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ನಮ್ಮ ಧರ್ಮ-ಕರ್ಮ, ನಮ್ಮ ಆಚಾರ-ವಿಚಾರ ಮತ್ತು ನಮ್ಮ ನಂಬಿಕೆ. ಗಂಗೆ, ಕಾವೇರಿ, ಕೃಷ್ಣ ಮತ್ತು ಭ್ರಹ್ಮಪುತ್ರ ನದಿಗಳು ಯಾರ ಸ್ವತ್ತು ಅಲ್ಲ. ಹಾಗಾದರೆ, ಅವರು ಅಶೋಕ್ ಅಂತ ಯಾಕೆ ಹೆಸರು ಇಟ್ಟುಕೊಂಡಿದ್ದಾರೆ. ಅಶೋಕ್ ಬದಲು ಕಲ್ಲು ಮಣ್ಣು ಎಂದು ಹೆಸರು ಇಟ್ಟುಕೊಳ್ಳಬಹುದಲ್ಲ. ನನ್ನ ನಂಬಿಕೆ ಬಗ್ಗೆ ಮಾತಾಡುವ ಅಶೋಕ್​ ಅವರಿಗೆ ಏನೋ ಸಮಸ್ಯೆ ಇರಬೇಕು. ಮೊದಲು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಲಿ. ನನ್ನ ಹೆಸರು ಹೇಳದಿದ್ರೆ ಕೆಲವರಿಗೆ ನಿದ್ದೆ ಬರುವುದಿಲ್ಲ, ಉತ್ಸಾಹ ಬರಲ್ಲ ಎಂದು ಆಕ್ರೋಶಗೊಂಡರು.

“ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ. ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿದ್ರಿಸುವ ಸಚಿವರು, ಪ್ರಶ್ನಿಸದ ಸಂಸದರು- ಕರ್ನಾಟಕದ ಹಿತ ಕಾಪಾಡುವವರು ಯಾರು?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರು, ಅವರ ವಿಚಾರ ಹೇಳಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದರು.

ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ವಿಚಾರವಾಗಿ ಮಾತನಾಡಿದ ಅವರು, ಎರಡನೇ ವಿಮಾನ ನಿಲ್ದಾಣಕ್ಕೆ ನಮ್ಮ ಕೈಗಾರಿಕಾ ಸಚಿವರು ಸ್ಥಳ ಹುಡುಕಾಡುತ್ತಿದ್ದಾರೆ. ಇನ್ನು, ಈ ಬಗ್ಗೆ ನನ್ನ ಮತ್ತು ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡಿಲ್ಲ. ಅಂತಿಮ ನಿರ್ಧಾರವಾಗಿಲ್ಲ ಎಂದರು.

ಬೆಂಗಳೂರಿನಲ್ಲಿ ನೀರಿನ ದರ​ ಏರಿಕೆ ಮಾಡಬೇಕೆಂಬ ಪ್ರಸ್ತಾಪ ಬಂದಿದೆ. ಮುಂದಿನ ಸಂಪುಟ ಸಭೆಯಲ್ಲಿ ಕಾವೇರಿ ನೀರಿನ ದರ​ ಏರಿಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...