ಕೋಲಾರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎಲ್‌ ಹನುಮಂತಯ್ಯ; ಬಳ್ಳಾರಿ, ಚಾಮರಾಜನಗರಕ್ಕೆ ಅಭ್ಯರ್ಥಿ ಫೈನಲ್‌

Date:

Advertisements

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ ಹಾಗೂ ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕೊನೆಗೂ ಬಗೆಹರಿದಿದೆ.

ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್‌ ಹನುಮಂತಯ್ಯ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಮೂಲಗಳು ಖಚಿತ ಪಡಿಸಿವೆ.

ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಡಾ.ಎಲ್‌ ಹನುಮಂತಯ್ಯ ಅವರನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ, “ಬಹುತೇಕ ನನ್ನ ಹೆಸರೇ ಫೈನಲ್‌ ಆಗಿದೆ. ಘೋಷಿಸುವುದು ಬಾಕಿ ಇದೆ” ಎಂದು ತಿಳಿಸಿದರು.

Advertisements

ಆಹಾರ ಸಚಿವ ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದರು. ಇತ್ತ ರಮೇಶ್‌ ಕುಮಾರ್‌ ಬಣ ಕೂಡ ಪಟ್ಟು ಹಿಡಿದಿದ್ದು, ಅವರಿಗೆ ಟಿಕೆಟ್ ನೀಡಿದರೆ ಯಾವುದೇ ಕಾರಣಕ್ಕೂ ಕೆಲಸವೇ ಮಾಡುವುದಿಲ್ಲ ಎಂಬ ಸಂದೇಶ ಸಾರಿದ್ದರು.

ಮುನಿಯಪ್ಪ ಕುಟುಂಬ ಸದಸ್ಯರಿಗೆ ಟಿಕೆಟ್‌ ನೀಡುವುದಕ್ಕೆ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್, ಶಾಸಕ ಕೊತ್ತೂರು ಮಂಜುನಾಥ್‌ ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ಮಾದಿಗ ಸಮುದಾಯಕ್ಕೆ ಸೇರಿದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್‌ ಹನುಮಂತಯ್ಯ ಅವರನ್ನು ಕಣಕ್ಕೆ ಇಳಿಸಬೇಕು ಎಂದು ರಮೇಶ್‌ ಕುಮಾರ್ ಬಣದವರು ಒತ್ತಡ ಹೇರಿದ್ದು, ಅವರನ್ನು ಗೆಲ್ಲಿಸಿಕೊಂಡು ಬರುವ ಹೊಣೆ ತಮ್ಮದು ಎಂದು ಕೇಂದ್ರ ನಾಯಕರಿಗೆ ಭರವಸೆ‌ ನೀಡಿದ್ದರು. ರಮೇಶ್‌ ಕುಮಾರ್‌ ಬಣ ಕೋಲಾರದಲ್ಲಿ ಮೇಲುಗೈ ಸಾಧಿಸಿದೆ.

ಬಳ್ಳಾರಿಗೆ ಈ. ತುಕಾರಾಂ ಫೈನಲ್; ಶ್ರೀರಾಮುಲುಗೆ ಠಕ್ಕರ್

ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೆ ಠಕ್ಕರ್ ಕೊಡಲು ಶಾಸಕ ಈ.ತುಕಾರಾಂ ಅವರು ತಮ್ಮ ಪುತ್ರಿಯನ್ನು ಕಣಕ್ಕಿಳಿಸಲು ಬಯಸಿದ್ದರು. ಆದರೆ, ಸಿದ್ದರಾಮಯ್ಯ ಅವರು ಸಂಡೂರು ಶಾಸಕ, ಮಾಜಿ ಸಚಿವ ಈ.ತುಕಾರಾಂ ಅವರನ್ನೇ ಕಣ್ಣಕಿಳಿಸಲು ಬಯಸಿದ್ದಾರೆ.

ಬುಧವಾರ ಸಿದ್ದರಾಮಯ್ಯ ಅವರು ತುಕಾರಾಂ ಅವರಿಗೆ ನೀನು ಒಪ್ಪಲೇಬೇಕೆಂದು ಹಠ ಹಿಡಿದು ಬೆಂಗಳೂರಿಗೆ ಕರೆಸಿ ಮಾತನಾಡಿದ್ದಾರೆ. ಸಚಿವರಾದ ಸಂತೋಷ್ ಲಾಡ್, ಬಿ.ನಾಗೇಂದ್ರ, ಜಮೀರ್ ಅಹಮ್ಮದ್ , ಮಾಜಿ ಎಂಎಲ್ ಸಿ ಕೆ‌ಎಸ್.ಎಲ್ ಸ್ವಾಮಿ, ಇಬ್ಬರು ಜಿಲ್ಲಾ ಅಧ್ಯಕ್ಷರಾದ ಮಹಮ್ಮದ್ ರಫೀಕ್, ಬಿ ವಿ ಶಿವಯೋಗಿ ಮೊದಲಾದವರು ಸೇರಿ ತುಕಾರಾಂ ಅವರಿಗೆ ಸ್ಪರ್ಧೆ ಮಾಡಲು ಒಪ್ಪಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.‌

ಚಾಮರಾಜನಗರ: ಮಹದೇವಪ್ಪ ಮಗನಿಗೆ ಟಿಕೆಟ್

ಚಾಮರಾಜನಗರ ಟಿಕೆಟ್ ಹಂಚಿಕೆಯಲ್ಲಿ ನಿರ್ಮಾಣವಾಗಿದ್ದ ಗೊಂದಲಕ್ಕೆ ತೆರೆಬಿದ್ದಿದೆ. ಸಮಾಜ ಕಲ್ಯಾಣ ಸಚಿವ ಎಚ್‌ ಸಿ ಮಹದೇವಪ್ಪ ಅವರು ತಮ್ಮ ಪುತ್ರ ಸುನೀಲ್‌ ಬೋಸ್‌ಗೆ ಟಿಕೆಟ್‌ ಕೊಡಿಸುವಲ್ಲಿ ಯಶ್ವಸ್ವಿಯಾಗಿದ್ದಾರೆ. ಈ ಮಾಹಿತಿಯನ್ನು ಮಹದೇವಪ್ಪ ಆಪ್ತರು ಖಚಿತ ಪಡಿಸಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ!

ಚಿಕ್ಕಬಳ್ಳಾಪುರ ಕ್ಷೇತ್ರ ಕೂಡ ಕಾಂಗ್ರೆಸ್‌ಗೆ ಕಗ್ಗಂಟಾಗಿದೆ. ಚಿಕ್ಕಬಳ್ಳಾಪುರ ಟಿಕೆಟ್ ತಮಗೆ ನೀಡಬೇಕು ಎಂದು ಮಾಜಿ ಸಿಎಂ ವೀರಪ್ಪ ಮೊಯಿಲಿ ಪಟ್ಟು ಹಿಡಿದಿದ್ದಾರೆ. ರಕ್ಷಾ ರಾಮಯ್ಯ ಹೆಸರು ಕೂಡ ಕೇಳಿಬರುತ್ತಿದೆ. ಸಿದ್ದರಾಮಯ್ಯ ಅವರು ರಕ್ಷಾ ರಾಮಯ್ಯ ಪರ ಬ್ಯಾಟ್‌ ಮಾಡುತ್ತಿದ್ದು, ರಕ್ಷಾ ರಾಮಯ್ಯ ಅವರಿಗೆ ಟಿಕೆಟ್‌ ಲಭಿಸಲಿದೆ ಎಂದು ಮೂಲಗಳು ಹೇಳಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X