‘ಅಡ್ವಾಣಿ ನಿಧನರಾಗಿದ್ದಾರೆ’ ಎಂದು ಹೇಳಿ ಶ್ರದ್ಧಾಂಜಲಿ ಸಲ್ಲಿಸಿದ ಕೇಂದ್ರ ಸಚಿವ ವಿ ಸೋಮಣ್ಣ!

Date:

Advertisements

ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಯವರು ಇತ್ತೀಚೆಗೆಯಷ್ಟೇ ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಕೇಂದ್ರ ಸಚಿವ ವಿ.ಸೋಮಣ್ಣ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಎಡವಟ್ಟು ಮಾಡಿಕೊಂಡಿದ್ದು, ಬದುಕಿರುವ ಅಡ್ವಾಣಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಸಂಗ ಶನಿವಾರ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಹೊರವಲಯದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಅತಿಥಿಯಾಗಿ ಭಾಗವಹಿಸಿದ್ದರು.

ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿರುವ ನಡುವೆಯೇ, “ಇದೀಗ ತಾನೇ ಮಾಹಿತಿ ಬಂದಿದೆ. ಅಡ್ವಾಣಿಯವರು ಸಾವನ್ನಪ್ಪಿದ್ದಾರೆ. ನಾನು ದೆಹಲಿಗೆ ಹೋಗಬೇಕಿದೆ. ಈ ವಿಚಾರಕ್ಕೆ ದೆಹಲಿಗೆ ತೆರಳಬೇಕಾಗಿರುವ ಕಾರಣ ಕಾರ್ಯಕ್ರಮ ಮತ್ತೊಮ್ಮೆ ಮಾಡೋಣ. ಎಲ್ಲರೂ ಎದ್ದು ನಿಂತು ಮೌನಾಚರಣೆ ಮಾಡಿ” ಎಂದು ಬಹಿರಂಗ ಸಭೆಯಲ್ಲಿ ಸೋಮಣ್ಣ ಮನವಿ ಮಾಡಿಕೊಂಡಿದ್ದಾರೆ.

Advertisements

ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಜನಸಮೂಹ ಮಾತ್ರವಲ್ಲದೆ, ಗುಬ್ಬಿಯ ಬಿಜೆಪಿ-ಜೆಡಿಎಸ್ ಮುಖಂಡರು ಮೌನಾಚರಣೆ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಇಂಗ್ಲೆಂಡ್ ಚುನಾವಣೆ | ನಮ್ಮ ಜನ ರಾಜಕಾರಣಕ್ಕೆ ಪಾಠವಾಗಬಲ್ಲ ಕಾರ್ಬಿನ್ ಗೆಲುವು

ಒಂದು ನಿಮಿಷದ ಮೌನಾಚರಣೆ ಆಚರಿಸಿ ಮೊಟಕುಗೊಳಿಸಿದ ಬಳಿಕ, “ಇನ್ನೂ ಅಧಿಕೃತ ಮಾಹಿತಿ ಸಿಕ್ಕಿಲ್ಲ” ಎಂದು ಹೇಳಿದ್ದಾರೆ. ನಿಧನ ಸುದ್ದಿ ಸುಳ್ಳು ಎಂಬ ವಿಚಾರ ತಿಳಿದು, ಕೂಡಲೇ ನೆರೆದಿದ್ದವರಲ್ಲಿ ಕ್ಷಮೆ ಕೇಳಿದ್ದಾರೆ. ಆ ಬಳಿಕ ತಮ್ಮ ಕಾರ್ಯಕ್ರಮವನ್ನು ಮುಂದುವರಿಸಿದ್ದಾರೆ.

ಕೇಂದ್ರ ಸಚಿವರ ಈ ನಡೆಯಿಂದ ಇಡೀ ಕಾರ್ಯಕ್ರಮದಲ್ಲಿ ಒಮ್ಮೆಲೆ ಗೊಂದಲವುಂಟಾಗಿ, ನೆರೆದಿದ್ದವರಲ್ಲಿ ಕಸಿವಿಸಿಗೆ ಕಾರಣವಾಯಿತು. ಸಚಿವ ಸೋಮಣ್ಣನವರ ಹೇಳಿಕೆಯು ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X