ಲಡಾಖ್‌| ಒಂದು ಕುಟುಂಬದ ಐವರಿಗಾಗಿ ಮತದಾನ ಕೇಂದ್ರ ಸ್ಥಾಪನೆ!

Date:

ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ, ಚುನಾವಣಾ ಅಧಿಕಾರಿಗಳು ಲೇಹ್ ಜಿಲ್ಲೆಯ ವಾಶಿ ಎಂಬ ದೂರದ ಹಳ್ಳಿಯಲ್ಲಿ ಒಂದು ಕುಟುಂಬದ ಐದು ಸದಸ್ಯರಿಗಾಗಿ ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ.

- Advertisement -

ಈ ಬಗ್ಗೆ ಮಾಹಿತಿ ನೀಡಿದ ಲಡಾಖ್ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಯತೀಂದ್ರ ಎಂ ಮರಾಲ್ಕರ್, “ಲೇಹ್‌ನಿಂದ ಸುಮಾರು 170 ಕಿಮೀ ದೂರದಲ್ಲಿರುವ ನುಬ್ರಾದ ವಾಶಿ ಎಂಬ ದೂರದ ಹಳ್ಳಿಯಲ್ಲಿ ಟೆಂಟ್ ಅಡಿಯಲ್ಲಿ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಿಸಿ ಶೇಕಡ 100ರಷ್ಟು ಮತದಾನ ಮಾಡಿಸುವ ಚುನಾವಣಾ ಆಯೋಗದ ಪ್ರಯತ್ನಗಳ ಭಾಗ ಇದಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಇದನ್ನು ಓದಿದ್ದೀರಾ?  21 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಲಡಾಖ್ ಹೋರಾಟಗಾರ ಸೋನಮ್ ವಾಂಗ್​ಚುಕ್

ಒಂದೇ ಕುಟುಂಬದ ಐವರು ಗ್ರಾಮದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದು, ಟೆಂಟ್‌ನಲ್ಲಿರುವ ಮತಗಟ್ಟೆ ಅವರ ಮನೆ ಬಾಗಿಲಿನಲ್ಲೇ ಇದೆ. ಕುಟುಂಬದಲ್ಲಿ ಆರು ಸದಸ್ಯರು ಇದ್ದು ಅವರಲ್ಲಿ ಐವರು ಮತದಾನ ಮಾಡಲು ಅರ್ಹರಾಗಿದ್ದಾರೆ. ಇಬ್ಬರು ಪುರುಷ ಮತ್ತು ಮೂರು ಮಹಿಳಾ ಮತದಾರರು ಈ ಕುಟುಂಬದಲ್ಲಿದ್ದಾರೆ. ಈ ಕುಟುಂಬದ ಮುಖ್ಯಸ್ಥರು ರೈತರಾಗಿದ್ದಾರೆ ಎಂದು ವರದಿಯಾಗಿದೆ.

ಆಗಸ್ಟ್ 5, 2019 ರಂದು ಆರ್ಟಿಕಲ್ 370 ಅನ್ನು ರದ್ದುಗೊಳಿಸಿದ ನಂತರ ಮತ್ತು ಜಮ್ಮು & ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಜಮ್ಮು & ಕಾಶ್ಮೀರ ಮತ್ತು ಲಡಾಖ್ ವಿಭಜಿಸಿದ ನಂತರ ಇದೇ ಮೊದಲ ಬಾರಿಗೆ ಇಲ್ಲಿ ಲೋಕಸಭೆ ಚುನಾವಣೆ ನಡೆಸಲಾಗುತ್ತಿದೆ. ಲಡಾಖ್ ಲೋಕಸಭಾ ಸ್ಥಾನಕ್ಕೆ ಮೇ 20 ರಂದು 5 ನೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನು ಓದಿದ್ದೀರಾ? ರಾಜ್ಯ ಸ್ಥಾನಮಾನ ಬೇಡಿಕೆಗೆ ಆಗ್ರಹಿಸಿ ಲಡಾಖ್‌ನಲ್ಲಿ ಸಾವಿರಾರು ಜನರಿಂದ ಪ್ರತಿಭಟನೆ

ಲಡಾಖ್ ಕೇಂದ್ರಾಡಳಿತ ಪ್ರದೇಶವು ಎರಡು ಜಿಲ್ಲೆಗಳನ್ನು ಹೊಂದಿದೆ. ಒಂದು ಕಾರ್ಗಿಲ್ ಆಗಿದ್ದು ಇದು ಮುಸ್ಲಿಂ ಪ್ರಾಬಲ್ಯದ ಜಿಲ್ಲೆಯಾಗಿದೆ. ಇನ್ನೊಂದು ಬೌದ್ಧ ಪ್ರಾಬಲ್ಯದ ಲೇಹ್ ಜಿಲ್ಲೆಯಾಗಿದೆ. ಇಲ್ಲಿ 91,703 ಪುರುಷರು ಮತ್ತು 90868 ಮಹಿಳೆಯರು ಸೇರಿದಂತೆ ಒಟ್ಟು 1,82,571 ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ.

ಚುನಾವಣಾ ಆಯೋಗವು ಲಡಾಖ್‌ನಾದ್ಯಂತ ಒಟ್ಟಾಗಿ 577 ಮತಗಟ್ಟೆಗಳನ್ನು ಸ್ಥಾಪಿಸಿದೆ. ಇದರಲ್ಲಿ 33 ನಗರ ಮತ್ತು 544 ಗ್ರಾಮೀಣ ಪ್ರದೇಶಗಳಲ್ಲಿ ಸ್ಥಾಪಿಸಲಾಗಿದೆ. ಇನ್ನು ಲಡಾಖ್‌ನಲ್ಲಿ ಕೆಲವು ಮತಗಟ್ಟೆಗಳು ದೂರದ ಹಳ್ಳಿಗಳಲ್ಲಿದ್ದು ಚುನಾವಣಾ ಸಾಮಗ್ರಿಗಳು ಮತ್ತು ಸಿಬ್ಬಂದಿಗಳನ್ನು ವಿಮಾನದಲ್ಲಿ ರವಾನಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾನದ ಹಕ್ಕು ಕಳೆದುಕೊಂಡವರ ನೆರವಿಗೆ ಕಾಂಗ್ರೆಸ್ ಬೂತ್ ಮಟ್ಟದ ಅಭಿಯಾನ: ‘ಮತ ರಕ್ಷಕ’ರ ನೇಮಕಕ್ಕೆ ತೀರ್ಮಾನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮೂಲಕ ಮತದಾರರ...

SIR ನಲ್ಲಿ ಉತ್ತರ ಪ್ರದೇಶದ ಮತದಾರರ ಪಟ್ಟಿಗೆ 16.18 ಲಕ್ಷ ನಿಗೂಢ ಮತದಾರರ ಸೇರ್ಪಡೆ: ಏನಿದು ವರದಿ?

ಉತ್ತರ ಪ್ರದೇಶದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಆರಂಭಿಕ ಹಂತಗಳಲ್ಲಿ 16.18...

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...