ಲಡಾಖ್ ಪ್ರತಿಭಟನೆ | ಲೇಹ್ ಹಿಲ್ ಕೌನ್ಸಿಲ್ ಕಟ್ಟಡದ ಮೇಲೆ ಕಲ್ಲು ತೂರಾಟ, ನಾಳೆ ಕಾರ್ಗಿಲ್ ಬಂದ್

Date:

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಮತ್ತು ಆರನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ 14ನೇ ದಿನಕ್ಕೆ ಕಾಲಿಟ್ಟಿದೆ. ಲೇಹ್‌ನಲ್ಲಿ ಪ್ರಸ್ತುತ ಸ್ಥಿತಿ ಉದ್ವಿಗ್ನತೆಗೆ ತಿರುಗಿದ್ದು, ಲೇಹ್ ಹಿಲ್ ಕೌನ್ಸಿಲ್ ಕಟ್ಟಡದ ಮೇಲೆ ಕಲ್ಲು ತೂರಾಟ ನಡೆದಿದೆ. ನಾಳೆ ಕಾರ್ಗಿಲ್ ಬಂದ್‌ಗೆ ಕರೆ ನೀಡಲಾಗಿದೆ ಎಂದು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ ಮುಖಂಡ ಸಜ್ಜದ್ ಕಾರ್ಗಿಲ್ ಈದಿನ ಡಾಟ್‌ ಕಾಮ್‌ಗೆ ತಿಳಿಸಿದ್ದಾರೆ.

- Advertisement -

ಪ್ರತಿಭಟನೆ ವೇಳೆ ಇಬ್ಬರು ಮಹಿಳಾ ಪ್ರತಿಭಟನಾಕಾರರು ಅಸ್ವಸ್ಥರಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಮಂದಿಗೆ ಗಾಯವಾಗಿದ್ದು ಸದ್ಯ ಭದ್ರತಾ ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ಸದ್ಯ ಪರಿಸ್ಥಿತಿ ಉದ್ವಿಗ್ನತೆಗೆ ತಿರುಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನು ಓದಿದ್ದೀರಾ? ದೆಹಲಿ | ಲಡಾಖ್ ಭವನದಲ್ಲಿ ಉಪವಾಸ ಆರಂಭಿಸಿದ ಸೋನಮ್ ವಾಂಗ್‌ಚುಕ್

ಲಡಾಖ್‌ನ ಭೂಮಿ, ಸಂಸ್ಕೃತಿ ಮತ್ತು ಸಂಪನ್ಮೂಲಗಳ ರಕ್ಷಣೆಗಾಗಿ ಲಡಾಖ್‌ ಅನ್ನು ಆರನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು, ಲಡಾಖ್‌ಗೆ ರಾಜ್ಯತ್ವ ಸ್ಥಾನಮಾನ ನೀಡಬೇಕು, ಸ್ಥಳೀಯ ಉದ್ಯೋಗಕ್ಕಾಗಿ ಸಾರ್ವಜನಿಕ ಸೇವಾ ಆಯೋಗ(ಪಿಎಸ್‌ಎ) ರಚಿಸಬೇಕು, ಲೇಹ್ ಮತ್ತು ಕಾರ್ಗಿಲ್‌ಗೆ ತಲಾ ಒಂದು ಲೋಕಸಭೆ ಸ್ಥಾನ ನೀಡಬೇಕು ಎಂಬ ಒಟ್ಟು ಪ್ರಮುಖ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟುಕೊಂಡು 2019ರ ನಂತರದಿಂದ ಲಡಾಖ್‌ನಲ್ಲಿ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿವೆ.

ಕೇಂದ್ರ ಗೃಹ ಸಚಿವಾಲಯದೊಂದಿಗೆ ನಡೆದ ಹಲವು ಹಂತದ ಮಾತುಕತೆ ವಿಫಲವಾಗಿದ್ದು, ಸದ್ಯ ಅಕ್ಟೋಬರ್ 6ರಂದು ಲೇಹ್ ಅಪೆಕ್ಸ್ ಬಾಡಿ(ಎಲ್‌ಎಬಿ) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್(ಕೆಡಿಎ) ಮುಖಂಡರೊಂದಿಗೆ ಕೇಂದ್ರ ಮಾತುಕತೆ ನಡೆಸಲಿದೆ. ಆದರೆ ಅಷ್ಟು ತಡ ಮಾಡದೆ ಶೀಘ್ರವೇ ಮಾತುಕತೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಈದಿನ ಡಾಟ್‌ ಕಾಮ್‌ ಜೊತೆ ಮಾತನಾಡಿರುವ ಸಜ್ಜದ್ ಕಾರ್ಗಿಲಿ, “ಚಳವಳಿಯು ವೇಗ ಪಡೆಯುತ್ತಿದ್ದು, ನಾಳೆ ಕಾರ್ಗಿಲ್ ಬಂದ್ ನಡೆಯಲಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CJP ಪ್ರತಿಭಟನೆ | AISA ನಾಯಕಿ ನೇಹಾ ಬೋರಾ ವಶಕ್ಕೆ; ಪೊಲೀಸ್‌ ಬಸ್‌ ಸುತ್ತುವರಿದ ಪ್ರತಿಭಟನಾಕಾರರು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ...

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅಜ್ಜಿ ನಿಧನ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...