ಲಡಾಖ್‌ನ ಜನರು, ಸಂಸ್ಕೃತಿ, ಸಂಪ್ರದಾಯದ ಮೇಲೆ ಬಿಜೆಪಿ-ಆರ್‌ಎಸ್‌ಎಸ್‌ ದಾಳಿ: ರಾಹುಲ್ ಗಾಂಧಿ

Date:

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು, ಆರನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಸೇರಿದ್ದಂತೆ ಹಲವು ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ನಡೆಸಲಾಗುತ್ತಿರುವ ಲಡಾಖ್ ಜನರ ಪ್ರತಿಭಟನೆಗೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಬೆಂಬಲ ವ್ಯಕ್ತಪಡಿಸಿದ್ದಾರೆ. “ಅದ್ಭುತ ಜನರು, ಸಂಸ್ಕೃತಿ ಮತ್ತು ಸಂಪ್ರದಾಯಗಳು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ದಾಳಿಗೆ ಒಳಗಾಗಿವೆ” ಎಂದು ರಾಹುಲ್ ಹೇಳಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಬಿಜೆಪಿ 4 ಯುವಕರನ್ನು ಕೊಂದು ಸೋನಮ್ ವಾಂಗ್‌ಚುಕ್ ಅವರನ್ನು ಜೈಲಿಗೆ ಹಾಕುವ ಮೂಲಕ ಪ್ರತಿಕ್ರಿಯಿಸಿದೆ” ಎಂದೂ ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಸೋನಮ್ ವಾಂಗ್‌ಚುಕ್ ಬಂಧನ: ಕೇಂದ್ರ ಸರ್ಕಾರ NSA ದುರ್ಬಳಕೆ ಮಾಡಿಕೊಳ್ಳುತ್ತಿದೆಯೇ?

“ಲಡಾಖ್‌ನ ಅದ್ಭುತ ಜನರು, ಸಂಸ್ಕೃತಿ ಮತ್ತು ಸಂಪ್ರದಾಯಗಳು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ದಾಳಿಗೆ ಒಳಗಾಗಿವೆ. ಲಡಾಖಿಗಳು ಧ್ವನಿ ಎತ್ತುವಂತೆ ಕೇಳಿಕೊಂಡರು. ಬಿಜೆಪಿ 4 ಯುವಕರನ್ನು ಕೊಂದು ಸೋನಮ್ ವಾಂಗ್‌ಚುಕ್ ಅವರನ್ನು ಜೈಲಿಗೆ ಹಾಕುವ ಮೂಲಕ ಪ್ರತಿಕ್ರಿಯಿಸಿದೆ. ಕೊಲೆ ನಿಲ್ಲಿಸಿ, ಹಿಂಸೆ ನಿಲ್ಲಿಸಿ, ಬೆದರಿಕೆ ನಿಲ್ಲಿಸಿ” ಎಂದು ರಾಹುಲ್ ಗಾಂಧಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

2019ರಲ್ಲಿ 370ನೆ ವಿಧಿ ರದ್ಧತಿ ಬಳಿಕ ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಹೋರಾಟ ನಡೆಯುತ್ತಿದೆ. ಸೆಪ್ಟೆಂಬರ್ 24ರಂದು ಲೇಹ್‌ನಲ್ಲಿ ಹಿಂಸಾಚಾರ ನಡೆದಿದ್ದು, ಪೊಲೀಸ್ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಈ ಹಿಂಸಾಚಾರಕ್ಕೆ ಶಾಂತ ರೂಪದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಕಾರಣ ಎಂದು ಆರೋಪಿಸಿರುವ ಕೇಂದ್ರ ಸರ್ಕಾರ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ(ಎನ್‌ಎಸ್‌ಎ) ಅವರನ್ನು ಬಂಧಿಸಿದೆ. ಪಾಕಿಸ್ತಾನದೊಂದಿಗೆ ಸೋನಮ್ ಸಂಬಂಧ ಹೊಂದಿದ್ದಾರೆ, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸದ್ಯ ಸೋನಮ್ ಅವರನ್ನು ಜೋಧ್‌ಪುರ ಜೈಲಿನಲ್ಲಿ ಇರಿಸಲಾಗಿದೆ.

ಸಂವಿಧಾನದ ಪ್ರಕಾರ ಯಾವುದೇ ಪ್ರದೇಶದಲ್ಲಿ ಶೇಕಡ 50ಕ್ಕಿಂತ ಅಧಿಕ ಬುಡಕಟ್ಟು, ಪರಿಶಿಷ್ಟ ಪಂಗಡ ಸಮುದಾಯದ ಜನರಿದ್ದರೆ ಆ ಪ್ರದೇಶವನ್ನು ಆರನೇ ಪರಿಚ್ಛೇದದಡಿಯಲ್ಲಿ ಸೇರ್ಪಡೆ ಮಾಡಬೇಕು. ಈ ಪರಿಚ್ಛೇದ ಆದಿವಾಸಿ ಸಮುದಾಯಗಳ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಹಕ್ಕುಗಳನ್ನು ರಕ್ಷಿಸಲು ಜಿಲ್ಲಾ ಮತ್ತು ಪ್ರಾದೇಶಿಕ ಕೌನ್ಸಿಲ್‌ಗಳನ್ನು ರಚಿಸಲು ಮತ್ತು ಈ ಕೌನ್ಸಿಲ್‌ಗಳಿಗೆ ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ನೀಡುತ್ತದೆ. ಲಡಾಖ್‌ ಶೇಕಡ 97ರಷ್ಟು ಬುಡಕಟ್ಟು ಸಮುದಾಯವನ್ನು ಹೊಂದಿರುವ ಕಾರಣ ಸಂವಿಧಾನದ ಪ್ರಕಾರವಾಗಿ ಈ ಪರಿಚ್ಛೇದದಡಿ ಸೇರಿಸಬೇಕು. ಈ ಬೇಡಿಕೆ ಮುಂದಿಟ್ಟು ಲಡಾಖಿಗರು ನಿರಂತರ ಪ್ರತಿಭಟನೆ ಮಾಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...