ಲಕ್ಷ್ಮಣ ಸವದಿಗೆ ಕಾಂಗ್ರೆಸ್​ನಲ್ಲಿ ಭವಿಷ್ಯ ಇಲ್ಲ: ಅರುಣ್ ಸಿಂಗ್

Date:

  • ‘ಸವದಿ ಮುಂದೊಂದು ದಿನ ಪಶ್ಚಾತ್ತಾಪ ಪಡುತ್ತಾರೆ’
  • ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಲು 20 ವರ್ಷ ಬೇಕೆಂದ ಸಿಂಗ್

ಯಾರೋ ನಾಲ್ಕು ಮಂದಿ ಪಕ್ಷ ಬಿಟ್ಟು ಹೋದರೆ ಏನೂ ನಷ್ಟ ಆಗಲ್ಲ. ಆದರೆ, ಪಕ್ಷ ಬಿಟ್ಟು ಹೋದವರಿಗೆ ನಮ್ಮ ಪಕ್ಷದ ಬಾಗಿಲು ಶಾಶ್ವತವಾಗಿ ಬಂದ್ ಆಗಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರ್ಪಡೆಯಾಗುವ ನಿರ್ಧಾರ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಅರುಣ್ ಸಿಂಗ್ ಅವರು ಸವದಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

“ಬಿಜೆಪಿ ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲು 20 ವರ್ಷಗಳಾಗಬಹುದು. ಲಕ್ಷ್ಮಣ್ ಸವದಿ ಅವರು ಇನ್ನೂ 10 ವರ್ಷಗಳಾದರೂ ರಾಹುಲ್ ಗಾಂಧಿ ಅವರ ಮುಖ ನೋಡುತ್ತಾರೋ ಇಲ್ಲವೋ ಗೊತ್ತಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲಕ್ಷ್ಮಣ ಸವದಿ ಅವರ ನಿರ್ಧಾರ ಸ್ವಾರ್ಥದಿಂದ ಕೂಡಿದೆ ಎಂದು ಅರುಣ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

“ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾವು ಹೊಸ ಜನರೇಷನ್‌ಗೆ ಅವಕಾಶ ನೀಡಿದ್ದೇವೆ. ಬಿಜೆಪಿ ಹೊಸ ತಲೆಮಾರಿನ ಪಕ್ಷವನ್ನಾಗಿ ಮಾಡಲಿದ್ದೇವೆ. ಲಕ್ಷ್ಮಣ ಸವದಿಯವರಿಗೆ ಕಾಂಗ್ರೆಸ್​ನಲ್ಲಿ ಭವಿಷ್ಯ ಇಲ್ಲ. ಕಾಂಗ್ರೆಸ್ ಸೇರಲು ನಿರ್ಧರಿಸಿ ಬಹಳ ದೊಡ್ಡ ತಪ್ಪು‌ ಮಾಡಿದ್ದಾರೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಂವಿಧಾನ ಜಾರಿಯಾಗದಿದ್ದರೆ ಊರಲ್ಲಿ ಕುರಿ ಮೇಯಿಸುತ್ತಿದ್ದೆ : ಸಿದ್ದರಾಮಯ್ಯ

“ಲಕ್ಷ್ಮಣ್ ಸವದಿ ಮುಂದೊಂದು ದಿನ ಪಶ್ಚಾತ್ತಾಪ ಪಡುತ್ತಾರೆ. ಈ ಹಿಂದೆ ಸವದಿ ಅಥಣಿ ಕ್ಷೇತ್ರದಿಂದ ಸೋತಿದ್ದರು. ಸವದಿಯನ್ನು ಎಂಎಲ್‌ಸಿ ಮಾಡಿ ಉಪಮುಖ್ಯಮಂತ್ರಿ ಮಾಡಿದ್ದೆವು” ಎಂದು ಹೇಳಿದ್ದಾರೆ.

ಲಕ್ಷ್ಮಣ ಸವದಿ ಅವರ ಕಾಂಗ್ರೆಸ್ ಸೇರ್ಪಡೆಯಾಗಿರುವ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಸವದಿ ಅವರು ಕಾಂಗ್ರೆಸ್‌ಗೆ ಹೋಗುತ್ತಿರುವುದು ದುಃಖ ತರಿಸಿದೆ. ಅವರ ಜೊತೆ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದೇನೆ” ಎಂದಿದ್ದಾರೆ.

“ಲಕ್ಷ್ಮಣ ಸವದಿಗೆ ಕಾಂಗ್ರೆಸ್​ನಲ್ಲಿ ಭವಿಷ್ಯ ಕಾಣಿಸಿದೆ, ಹಾಗಾಗಿ ಹೋಗಿದ್ದಾರೆ. ಕಾಂಗ್ರೆಸ್​ಗೆ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳು ಗತಿಯಿಲ್ಲ. ಅದಕ್ಕಾಗಿ ಬೇರೆ ಪಕ್ಷಗಳಿಂದ ಕೆಲವರನ್ನು ಸೇರಿಸಿಕೊಳ್ಳುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮೀಸಲಾತಿ | ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ರವಿವರ್ಮ ಕುಮಾರ್

ಮುಸ್ಲಿಂರನ್ನು ಹಿಂದುಳಿದ ಪಟ್ಟಿಗೆ ಸೇರಿಸಿದ್ದಾರೆ ಅಂತ ಹೇಳಲಾಗುತ್ತಿದೆ. ಹಿಂದುಳಿದ ಮೀಸಲಾತಿ ಮುಸ್ಲಿಂರಿಗೆ...

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ...