ಶೆಟ್ಟರ್ ಬೆನ್ನಲ್ಲೇ ಬಿಜೆಪಿಗೆ ಸವದಿ?; ಅಥಣಿ ಶಾಸಕ ಹೇಳಿದ್ದೇನು?

Date:

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಗುರುವಾರ ಮರಳಿ ಬಿಜೆಪಿಗೆ ಸೇರಿದ್ದಾರೆ. ಅವರ ಸೇರ್ಪಡೆ ಬೆನ್ನಲ್ಲೇ, ಇದೀಗ ಕಾಂಗ್ರೆಸ್‌ ಶಾಸಕ ಲಕ್ಷ್ಮಣ್‌ ಸವದಿ ಕೂಡ ಬಿಜೆಪಿಗೆ ಸೇರುತ್ತಾರಾ ಎಂಬ ಚರ್ಚೆಗಳು ನಡೆಯುತ್ತಿವೆ. ಈ ನಡುವೆ, ಬಿಜೆಪಿಗರು ಪಕ್ಷಕ್ಕೆ ಮರಳುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಸವದಿ ಹೇಳಿಕೊಂಡಿದ್ದಾರೆ.

ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸವದಿ, “ಮರಳಿ ಬಿಜೆಪಿಗೆ ಬರಬೇಕೆಂದು ಒತ್ತಡವಿದೆ. ಕಹಿ ಘಟನೆಗಳನ್ನು ಮರೆದು ಪಕ್ಷಕ್ಕೆ ಹಿಂದಿರುಗಿ ಎನ್ನುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಬಿಜೆಪಿ ಎಷ್ಟೇ ಒತ್ತಡ ಹಾಕಿದರೂ, ನನ್ನ ನಿಲುವು ಬದಲಾಗುವುದಿಲ್ಲ. ನಾನು ಕಾಂಗ್ರೆಸ್ ಸೇರಿದ್ದೇನೆ. ಕಾಂಗ್ರೆಸ್‌ನಿಂದಲೇ ಜನರು ನನ್ನನ್ನು ಆಯ್ಕೆ ಮಾಡಿದ್ದಾರೆ. ಮರಳಿ ಬಿಜೆಪಿಗೆ ಹೋಗುವ ಚಿಂತೆ ಇಲ್ಲ” ಎಂದು ಸವದಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೆಸ್‌ ನಾಯಕರು ಬೆಳಗಾವಿ ರಾಜಕಾರಣದಲ್ಲಿ ನನ್ನನ್ನು ಕಡೆಗಣಿಸಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನನ್ನನ್ನು ಗೌರವದಿಂದ ನಡೆಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ನನಗೆ ಯಾವುದೇ ಅಸಮಾಧಾನವಿಲ್ಲ. ನಾವು ಕಾಂಗ್ರೆಸ್‌ ತೊರೆಯುವುದಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಒಬ್ಬರನ್ನೊಬ್ಬರು ಅದೆಷ್ಟು ಬೈದಾಡಿಕೊಂಡಿರಲ್ವಾ ,, ಮತ್ತೆ ಅಲ್ಲಿಗೆ ಹೋಗಿ ಹೆಂಗ ಮಕಾ ನೋಡ್ತೀರಿ,, ಬಹುಶಃ ಈ ಕಾರಣಕ್ಕೆ ಇರಬಹುದು ಜನರಲ್ಲಿ ರಾಜಕೀಯ ಅಂದ್ರೆ ಹೇಸಿಗೆ ಕಂಡಷ್ಟು ಅಸಹ್ಯ ಪಡುವರು,,,
    ಪಕ್ಷ ಅಭ್ಯರ್ಥಿ ಪರ ತಮ್ಮ ತಮ್ಮಲ್ಲೇ ಹೊಡೆದಾಡಿ ಓಣಿಗಳಲ್ಲಿ ಒಬ್ಬರನ್ನೊಬ್ಬರು ಮುಖ ನೋಡದಂಥ ಸ್ಥಿತಿ ನಿರ್ಮಾಣವಾಯಿತು,, ಆದರೆ ಇವರುಗಳು ಮಾತ್ರ ರಾಜಕಾರಣವನ್ನು ವ್ಯವಹಾರ ಮಾಡಿಕೊಂಡು,, ಬಳ್ಕೊಂಡು ಮಜಾ ಮಾಡುವರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ & ಗೋದಿ ಮೀಡಿಯಾ ʼಪಾಕಿಸ್ತಾನ್‌ ಜಿಂದಾಬಾದ್‌ ಎಂದರುʼ ಎಂಬ ಸುಳ್ಳನ್ನು ಹಬ್ಬಿಸಿದ 22 ಪ್ರಕರಣಗಳು

'ಪಾಕಿಸ್ತಾನ್‌ ಜಿಂದಾಬಾದ್’ ಎಂದು ಕೂಗಿರುವುದಾಗಿ ಮಾಧ್ಯಮ ಮತ್ತು ಬಿಜೆಪಿ ಸುಳ್ಳು ಹಬ್ಬಿಸುವುದು...

ಆಂಧ್ರ ಪ್ರದೇಶ | ವಿಧಾನಸಭೆಯಿಂದ 8 ಶಾಸಕರು ಅನರ್ಹ

ಆಂಧ್ರಪ್ರದೇಶದ ಎಂಟು ಹಾಲಿ ಶಾಸಕರನ್ನು ವಿಧಾನಸಭಾ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು ...

‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ

ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್...

ಮಾಧ್ಯಮದವರಿಗೆ ಪ್ರಿಯಾಂಕ್ ಖರ್ಗೆ ಮಾರ್ಮಿಕ ಪ್ರಶ್ನೆಗಳು

ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ ಈ 'ಪಾಕಿಸ್ತಾನ್ ಜಿಂದಾಬಾದ್'...