ಲಕ್ಷ್ಮಣ ಸವದಿ ಕಾಂಗ್ರೆಸ್‌ ಪರವಾಗಿದ್ದಾರೆ, ಅವರು ಪಕ್ಷ ಬಿಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ

Date:

“ಜಗದೀಶ ಶೆಟ್ಟರ್ ಅವರದು ಬೇರೆ ಪ್ರಕರಣ, ಲಕ್ಷ್ಮಣ ಸವದಿ ಅವರದು ಬೇರೆ ಕೇಸ್‌. ಒಂದು ಕೇಸ್‌ ಅನ್ನು ಇನ್ನೊಂದಕ್ಕೆ ಹೋಲಿಸಲಾಗದು. ಶಾಸಕರಾದ ಲಕ್ಷ್ಮಣ ಸವದಿ ನಮ್ಮ ಪಕ್ಷದ ಪರವಾಗಿದ್ದಾರೆ. ಅವರು ಕಾಂಗ್ರೆಸ್‌ ಬಿಡುವುದಿಲ್ಲ” ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

- Advertisement -

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಸವದಿ ಬಿಜೆಪಿ ಸೇರುತ್ತಾರೆ ಎಂಬುದು ಸುಳ್ಳು. ಎಲ್ಲ ಕೇಸ್‌ ಬೇರೆ ಬೇರೆ ಇರುತ್ತವೆ. ಜಗದೀಶ್‌ ಶೆಟ್ಟರ್‌ ಕೇಸ್‌ಗೆ ಹೋಲಿಕೆ ಬೇಡ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನದ ಆಫರ್ ನೀಡಲಾಗಿದೆಯೇ ಎಂಬ ಪ್ರಶ್ನೆಗೆ, “ಒಳ್ಳೆಯವರಿಗೆ ಅವಕಾಶವಿದೆ. ಅವರಿಗೂ ಸಾಮರ್ಥ್ಯವಿದೆ. ಆ ಬಗ್ಗೆ ಇನ್ನೂ ಸಮಯವಿದೆ. ಉತ್ತಮ ಕೆಲಸ ಮಾಡಿದ್ದಾರೆ. ಸಚಿವ ಸ್ಥಾನ ಸಿಗುವ ಅವಕಾಶಗಳು ಮುಂದಿನ ದಿನಗಳಲ್ಲಿವೆ” ಎಂದರು.

ಲೋಕಸಭೆ ಚುನಾವಣೆ ವಿಚಾರವಾಗಿ ಮಾತನಾಡಿ, ಬೆಳಗಾವಿ ಲೋಕಸಭೆ ಕ್ಷೇತ್ರದ ಟಿಕೆಟ್‌ಗೆ ಇಬ್ಬರ ಹೆಸರು ಕೊಟ್ಟಿದ್ದೇವೆ. ಆದರೆ, ಒಬ್ಬರ ಹೆಸರನ್ನು ಪಕ್ಷದ ಹೈಕಮಾಂಡ್ ಅಂತಿಮಗೊಳಿಸಬೇಕಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಜತೆಗೆ, ಇನ್ನೊಂದು ಸುತ್ತಿನ ಚರ್ಚೆ ಆಗಬೇಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ಚಿಕ್ಕೋಡಿ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ. ಪ್ರತಿ ಬಾರಿ ಒದಿಸಿಕೊಳ್ಳಲು ನಾನೇನೂ ಫುಟ್‌ಬಾಲ್‌ ಅಲ್ಲ” ಎಂದಿರುವ ಪ್ರಕಾಶ ಹುಕ್ಕೇರಿ ಮಾತಿಗೆ ಪ್ರತಿಕ್ರಿಯಿಸಿ, “ಪ್ರಕಾಶ್ ಹುಕ್ಕೇರಿ ಸ್ಪರ್ಧಿಸುವುದಿಲ್ಲ ಎಂದಾಗ ಸ್ಪರ್ಧಿಸುತ್ತಾರೆ. ಸ್ಪರ್ಧಿಸುತ್ತೇನೆ ಎಂದಾಗ ಸ್ಪರ್ಧಿಸಲ್ಲ. ಅವರ ಕೋಡ್‌ ಲಾಂಗ್ವೇಜ್‌ ನಮಗೆ ಗೊತ್ತಿದೆ” ಎಂದರು.

ಧ್ವಜ ವಿಚಾರವಾಗಿ ಮಾತನಾಡಿ, “ರಾಜ್ಯ ಅಭಿವೃದ್ಧಿಯಾಗಬೇಕು, ಸಮಾನತೆ ಬರಬೇಕು. ಈ ಧ್ವಜಗಳ ಹಾವಳಿ ಬಂದ್ ಆಗಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇರಳ ಮುಸ್ಲಿಂ ಲೀಗ್ ಐತಿಹಾಸಿಕ ಹೆಜ್ಜೆ: ಇದೇ ಮೊದಲ ಬಾರಿಗೆ ಹಿಂದೂ ನಾಯಕನಿಗೆ ಉಪಾಧ್ಯಕ್ಷ ಪಟ್ಟ

ಕೇರಳದ ಪ್ರಮುಖ ರಾಜಕೀಯ ಪಕ್ಷವಾದ 'ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್' (IUML)...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...

ಬರ ಪರಿಹಾರ | ಮೊದಲ ಕಂತು ₹1,250 ಕೋಟಿ ಬಿಡುಗಡೆ; ರೈತರ ಖಾತೆಗೆ ₹2,500

ರಾಜ್ಯದಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ತನ್ನದೇ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ....