ಎಂಎಲ್‌ಸಿ ಸ್ಥಾನಕ್ಕೆ ಲಕ್ಷ್ಮಣ ಸವದಿ ಇಂದು ರಾಜೀನಾಮೆ; ಕಾಂಗ್ರೆಸ್‌ನತ್ತ ಚಿತ್ತ

Date:

  • ಕಾಂಗ್ರೆಸ್ ಎಂಎಲ್‌ಸಿ ಜೊತೆ ಸವದಿ ಬೆಂಗಳೂರಿಗೆ
  • ಕಾಂಗ್ರೆಸ್ ನಾಯಕರ ಭೇಟಿಗೆ ಆಲೋಚಿಸುವೆ ಎಂದ ಸವದಿ

ಅಭ್ಯರ್ಥಿಗಳ ಪಟ್ಟಿ ಘೋಷಿಸುತ್ತಿದ್ದಂತೆಯೇ ಬಿಜೆಪಿಗೆ ಇನ್ನಿಲ್ಲದ ಸಂಕಷ್ಟ ಎದುರಾಗಿದೆ. ಸ್ವಪಕ್ಷದ ನಾಯಕರೇ ರಾಜ್ಯ ಸರ್ಕಾರದ ವಿರುದ್ಧ ಬಂಡಾಯ ಸಾರಿದ್ದಾರೆ. ಈ ನಡುವೆ ಲಕ್ಷ್ಮಣ ಸವದಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದು, ಕಾಂಗ್ರೆಸ್ ನಾಯಕರ ಜೊತೆಗೆ ಸಭೆ ನಡೆಸಿದರು.

- Advertisement -

ಬಿಜೆಪಿ 212 ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಹೆಸರು ಹೊರಬಿದ್ದಿದ್ದೇ ತಡ ಬಿಜೆಪಿಗೆ ಬಂಡಾಯದ ಬಿಸಿ ತಗುಲಿದೆ. ಅನೇಕ ನಾಯಕರು ಬಿಜೆಪಿ ತೊರೆದು ಬೇರೆ ಪಕ್ಷಗಳ ಕಡೆಗೆ ಮುಖ ಮಾಡಿದರೆ, ಇನ್ನು ಕೆಲವರು ರಾಜ್ಯ ಸರ್ಕಾರದ ಲೋಪದೋಷಗಳನ್ನು ಉಲ್ಲೇಖಿಸಿ ಹರಿಹಾಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಾಜಿ ಶಾಸಕ ಲಕ್ಷ್ಮಣ ಸವದಿ ಅವರಿಗೂ ಟಿಕೆಟ್ ಕೈತಪ್ಪಿದೆ. ಈ ಹಿನ್ನೆಲೆ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್​ ಸೇರುವ ಸಾಧ್ಯತೆ ಇದೆ. ಈ ಸಂಬಂಧ ಇಂದು (ಏ.14) ಕಾಂಗ್ರೆಸ್ ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಜತೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಬಿಜೆಪಿಗೆ ರಾಜೀನಾಮೆ ನೀಡಿರುವ ಲಕ್ಷ್ಮಣ ಸವದಿ ಅವರು ಇಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿರುವ ಲಕ್ಷ್ಮಣ ಸವದಿ ಅವರು, “ಇಂದು ಸಂಜೆ 4ಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಭೇಟಿಯಾಗಿ, ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವೆ. ತದನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಪಕ್ಷ ಬಿಡಲು ನಿನ್ನೆಯೇ ನಿರ್ಧರಿಸಿದ್ದೇನೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತ ಪರಿವರ್ತನೆ ಮಾಡುವ ನಾಯಕರು ನಾಳೆ ಜೆಡಿಎಸ್ ಸೇರಲಿದ್ದಾರೆ : ಎಚ್‌ ಡಿ ಕುಮಾರಸ್ವಾಮಿ

“ಬಿಜೆಪಿಯ ಯಾವೊಬ್ಬ ನಾಯಕನನ್ನೂ ಭೇಟಿಯಾಗಲ್ಲ. ಸದ್ಯ ನಾನಿನ್ನು ಬಿಜೆಪಿ ಪಕ್ಷದಲ್ಲಿಯೇ ಇದ್ಧೇನೆ. ಹಾಗಾಗಿ ಬೇರೆ ಮಾತನಾಡುವುದಿಲ್ಲ. ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ನಂತರ ಬೇರೆ ವಿಚಾರದ ಚರ್ಚೆ” ಎಂದಿದ್ದಾರೆ.

ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಅವರ ಜೊತೆಗೆ ಬೆಂಗಳೂರಿಗೆ ಆಗಮಿಸಿರುವ ಲಕ್ಷ್ಮಣ ಸವದಿ ಅವರು ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆಗೆ ಸಭೆ ನಡೆಸಿದರು.

“ಕಾಂಗ್ರೆಸ್ ನಾಯಕರ ಜೊತೆ ಕೆಲವು ವಿಚಾರ ಹಂಚಿಕೊಳ್ಳುವೆ. ಅವರು ಅದಕ್ಕೆ ಒಪ್ಪಿಗೆ ನೀಡಿದರೆ ಮಾತ್ರ ತೀರ್ಮಾನ ಮಾಡುತ್ತೇನೆ” ಎಂದಿದ್ದರು. ಇದೀಗ ಕಾಂಗ್ರೆಸ್ ನಾಯಕರ ಜೊತೆಗೆ ಅವರು ಸಭೆ ನಡೆಸಿದ್ದು, ಕಾಂಗ್ರೆಸ್ ಸೇರ್ಪಡೆ ಆಗುವುದು ಬಹುತೇಕ ಖಚಿತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...