ಲಕ್ಷ್ಮಣ ಸವದಿ ಶೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ: ಆರಗ ಜ್ಞಾನೇಂದ್ರ

Date:

Advertisements

ಲಕ್ಷ್ಮಣ ಸವದಿ ಶೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆಯುಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಸವದಿ ಅವರು ಶೀಘ್ರದಲ್ಲಿ ಬಿಜೆಪಿಗೆ ಬರುತ್ತಾರೆ. ಕಾಂಗ್ರೆಸ್ ನಲ್ಲಿ ಅವರಿಗೆ ಯಾವುದೇ ಸ್ಥಾನಮಾನ ನೀಡಿಲ್ಲ. ನಾವು ಅವರನ್ನ ಡಿಸಿಎಂ ಮಾಡಿದ್ದೆವು. ಅಲ್ಲಿಗೆ ಕರೆದುಕೊಂಡು ಹೋಗಿ, ಅವರನ್ನು ಪುಕ್ಸಟ್ಟೆ ಕೂರಿಸಿದ್ದಾರೆ” ಎಂದರು.

“ಲಕ್ಷ್ಮಣ ಸವದಿ ಬಹಳಷ್ಟು ದಿನ ಅಲ್ಲಿ ಇರುವುದಿಲ್ಲ. ಅವರು ನನ್ನ ಆತ್ಮೀಯ ಸ್ನೇಹಿತರು. ಅವರ ಬಗ್ಗೆ ನನಗೆ ಗೊತ್ತು. ಹೀಗಾಗಿ ಈ ಮಾತು ಹೇಳುತ್ತಿದ್ದೇನೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಸತ್‌ ದಾಳಿ ಆರೋಪಿಗಳಿಗೆ ಸುಳ್ಳು ಹೇಳಲು ಒತ್ತಡ; ವಿಪಕ್ಷಗಳನ್ನು ದೇಶದ್ರೋಹಿಗಳೆಂದು ಬಿಂಬಿಸುವ ವಿಫಲ ಯತ್ನ

ಬಿಜೆಪಿಯ ಹಿರಿಯ ನಾಯಕ ಅಡ್ವಾಣಿಗೆ ಭಾರತ ರತ್ನ ದೊರೆತಿರುವ ಬಗ್ಗೆ ಪ್ರತಿಕ್ರಿಯಿಸಿ, “ಅಡ್ವಾಣಿ ಅವರು ಇಡೀ ದೇಶದ ಮೂಲೆ ಮೂಲೆಗಳಲ್ಲಿ ರಥಯಾತ್ರೆ ಮೂಲಕ ದೇಶವನ್ನು ಜೋಡಿಸಿದ್ದರು. ದೇಶದಲ್ಲಿ ಸಾಂಸ್ಕೃತಿಕ ಸಂಚಲನವನ್ನು ನಿರ್ಮಾಣ ಮಾಡಿದಂತಹ ಅಡ್ವಾಣಿ ಅವರಿಗೆ ಭಾರತ ಸರ್ಕಾರ ಭಾರತ ರತ್ನ ನೀಡಿ ಪುರಸ್ಕರಿಸಿದೆ. ಅಡ್ವಾಣಿಯವರಿಗೆ ನೀಡಿರುವುದರಿಂದ ಭಾರತ ರತ್ನಕ್ಕೆ ಈಗ ಮೆರಗು ಬಂದಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

ವಿಧಾನಸಭೆ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿ ಕೆ ಶಿವಕುಮಾರ್

ವಿಧಾನಸಭೆ ಅಧಿವೇಶನದಲ್ಲಿಯೇ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂದು ಆರ್‌ಎಸ್‌ಎಸ್‌ ಗೀತೆ...

Download Eedina App Android / iOS

X