ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಶ್ಲೀಲ ಪದ ಬಳಕೆ ಆರೋಪ, ಸಿ ಟಿ ರವಿ ವಿರುದ್ಧ ಸಭಾಪತಿಗೆ ದೂರು

Date:

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ ಟಿ ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

- Advertisement -

ಸಿ ಟಿ ರವಿ ಅವರ ಮಾತು ಕೇಳಿ ಲಕ್ಷ್ಮಿ ಹೆಬ್ಬಾಳ್ಕರ್ ಕೆಂಡಾಮಂಡಲವಾಗಿದ್ದಾರೆ. ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ. ಹೆಬ್ಬಾಳ್ಕರ್ ಮಾತಿಗೆ ಕಾಂಗ್ರೆಸ್ ಸದಸ್ಯರು ಧ್ವನಿ ಗೂಡಿಸಿದ್ದು, ಹತ್ತು ಬಾರಿ ಅಸಂವಿಧಾನಿಕ ಪದ ಬಳಸಿದ್ದಾರೆ ಎಂದು ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರೆಲ್ಲರೂ ಸದನದಲ್ಲಿ ಕಿಡಿ ಕಾರಿದ್ದಾರೆ. ಸಹ ಸದಸ್ಯರನ್ನು ಕರೆತಂದು ಲಕ್ಷ್ಮಿ ಹೆಬ್ಬಾಳ್ಕರ್ ಸಭಾಪತಿ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ.

‘ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಈ ವಿಷಯದ ಚರ್ಚೆಗೆ ಅವಕಾಶ ನೀಡಬೇಕು’ ಎಂದು ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಎಲ್ಲ ಸದಸ್ಯರು ಅಂಬೇಡ್ಕ‌ರ್ ಭಾವಚಿತ್ರ ಹಿಡಿದುಕೊಂಡು ಪಟ್ಟು ಹಿಡಿದರು. ಪ್ರತಿಯಾಗಿ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ ಸೇರಿದಂತೆ ಬಿಜೆಪಿ ಸದಸ್ಯರು ಕೂಡಾ ಅಂಬೇಡ್ಕರ್ ಭಾವಚಿತ್ರ ಹಿಡಿದುಕೊಂಡು ‘ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್’ ಎಂದು ಘೋಷಣೆ ಕೂಗಿದರು.

ಸದನದಲ್ಲಿ ಕೋಲಾಹಲ ಉಂಟಾದಾಗ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿದರು. ಕಲಾಪ ಮುಂದೂಡಿಕೆಯಾದರೂ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಸದನದ ಒಳಗೆ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದರು. ಈ ಗದ್ದಲದ ಮಧ್ಯೆ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸಭಾಪತಿಗೆ ದೂರು ನೀಡಿದ ಬಳಿಕ ಸಭಾಪತಿ, ಆಡಿಯೊ ವಿಡಿಯೊ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.

ಆ ರೀತಿಯ ಪದ ಬಳಸಿಲ್ಲ: ಸಿ ಟಿ ರವಿ

ಈ ಬಗ್ಗೆ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ ಸಿ.ಟಿ ರವಿ, “‘ಲಕ್ಷ್ಮಿ ಹೆಬ್ಬಾಳ್ಳರಗೆ ನಾನು ಆಕ್ಷೇಪಾರ್ಹ ಪದ ಬಳಸಿಲ್ಲ. ನಾನು ಪದ ಬಳಸಿದ ದಾಖಲೆ ಇದ್ದರೇ ತೆಗೆಯಿರಿ. ನಾನು ಆ ರೀತಿಯ ಪದ ಬಳಸಿಲ್ಲ. ನಾನು ಕಪೋಲ ಕಲ್ಪಿತ ಹೇಳಿಕೆಗಳಿಗೆ ಉತ್ತರ ನೀಡಲ್ಲ” ಎಂದರು.

ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ

“ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನ ಪರಿಷತ್ ಸಭಾಪತಿ ಯವರಿಗೆ ದೂರು ನೀಡಿದ್ದಾರೆ. ಪೊಲೀಸ್‌ ಠಾಣೆಗೂ ದೂರು ನೀಡಲು ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...