ದ. ಕನ್ನಡ ಜಿಲ್ಲೆಯ ಕೊರಗ ಸಮುದಾಯಕ್ಕೆ ಭೂಮಿ ಮಂಜೂರು ವಿಚಾರ: ಕಂದಾಯ ಸಚಿವರೊಂದಿಗೆ ಸಮಾಲೋಚನಾ ಸಭೆ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು.

ಇಂದು(ಜೂನ್ 27) ಜಾಗೃತ ಕರ್ನಾಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದ ಪ್ರತಿನಿಧಿಗಳು ಮತ್ತು ತುಮಕೂರಿನ ಅಲೆಮಾರಿ ಸಮುದಾಯದ ಪ್ರತಿನಿಧಿಗಳ ನಿಯೋಗದೊಂದಿಗೆ ಸಚಿವರಾದ ಕೃಷ್ಣಬೈರೇಗೌಡರೊಂದಿಗೆ ಸಭೆ ಏರ್ಪಡಿಸಲಾಗಿತ್ತು.

ಕೊರಗ ಸಮುದಾಯದವರಿಗೆ ನೀಡಲೆಂದು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಗುರುತಿಸಿರುವ ಕೃಷಿ ಯೋಗ್ಯ ಭೂಮಿಯನ್ನು ಶೀಘ್ರವಾಗಿ ಮಂಜೂರು ಮಾಡುವಂತೆ ಕೊರಗ ಸಂಘದ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರ ಮುಂದೆ ತಮ್ಮ ಅಹವಾಲನ್ನು ಸಲ್ಲಿಸಿದರು.

Advertisements

ಉಡುಪಿ ಜಿಲ್ಲೆಯಲ್ಲಿ ಕೊರಗ ಸಮುದಾಯದವರಿಗೆ ಕೃಷಿ ಭೂಮಿಯ ಹಂಚಿಕೆ ಉತ್ತಮ ರೀತಿಯಲ್ಲಿ ನಡೆದಿದ್ದು, ಅದೇ ಮಾದರಿಯನ್ನು ದಕ್ಷಿಣ ಕನ್ನಡದಲ್ಲೂ ಅನುಸರಿಸುವಂತೆ ಕೊರಗ ಸಂಘದ ಪ್ರತಿನಿಧಿಗಳು ಸಚಿವರಲ್ಲಿ ಮನವಿ ಮಾಡಿದರು.

ಸಮುದಾಯದ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಈ ಹಿಂದೆ ಕೊರಗ ಸಮುದಾಯಕ್ಕೆ ಕೃಷಿ ಭೂಮಿ ಮಂಜೂರು ಮಾಡಿದ ಪ್ರಕ್ರಿಯೆಗಳನ್ನು ಜಿಲ್ಲಾಡಳಿತದೊಂದಿಗೆ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚಲೋಚನೆ ನಡೆಸಿ ಕೈಗೊಳ್ಳುವುದಾಗಿ ಭರವಸೆ ನೀಡಿದರು.

1 35

ಅತೀ ಸೂಕ್ಷ್ಮ ಹಾಗೂ ಅತೀ ಹಿಂದುಳಿದಿರುವ ಪರಿಶಿಷ್ಟ ಪಂಗಡದ ಸಮುದಾಯವಾಗಿರುವ ಕೊರಗರು ಗುಂಪು ಗುಂಪಾಗಿ ವಾಸಿಸುವ ಹಿನ್ನೆಲೆಯವರಾಗಿದ್ದು, ಕನಿಷ್ಠ 10 ರಿಂದ 15 ಕುಟುಂಬಗಳಿಗೆ ಒಟ್ಟೊಟ್ಟಿಗೆ ಯಾಗಿ ಭೂಮಿ ಮಂಜೂರು ಮಾಡಿದರೆ ತಮ್ಮ ಹಿಂದಿನ ಸಮುದಾಯ ಪರಿಕಲ್ಪನೆಯಂತೆ ಕೊರಗರು ಸ್ವತಂತ್ರವಾಗಿ ಬದುಕಿ ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ದ.ಕ. ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಸುಂದರ ಬೆಳವಾಯಿ ಅವರು ಸಭೆಯಲ್ಲಿ ಮನವಿ ಮಾಡಿದರು.

ಕಾನೂನು ವ್ಯಾಪ್ತಿಯಲ್ಲಿ ಸಾಧ್ಯವಿರುವ ಎಲ್ಲ ಪ್ರಯತ್ನವನ್ನು ಪ್ರಾಮಾಣಿಕವಾಗಿ ನಡೆಸುವುದಾಗಿ ಸಚಿವ ಕೃಷ್ಣ ಬೈರೇಗೌಡ ನಿಯೋಗಕ್ಕೆ ಭರವಸೆ ನೀಡಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಕೊರಗ ಸಮುದಾಯದ ಹಿನ್ನೆಲೆ ಹಾಗೂ ಪ್ರಸ್ತುತ ಕೊರಗ ಸಮುದಾಯದ ಸ್ಥಿತಿಗತಿಯ ಬಗ್ಗೆ ಸಭೆಗೆ ವಿವರ ನೀಡಿದರು.

ಇದನ್ನು ಓದಿದ್ದೀರಾ? Exclusive: ಒಳಮೀಸಲಾತಿ ಸಮೀಕ್ಷೆ- ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಗತಿ? ಇಲ್ಲಿದೆ ಸಂಪೂರ್ಣ ವಿವರ

ಸಮಾಲೋಚನಾ ಸಭೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು. ಎಚ್, ದ.ಕ ಜಿಲ್ಲಾ ಕೊರಗರ ಸಂಘದ ಅಧ್ಯಕ್ಷ ಸುಂದರ ಬೆಳುವಾಯಿ, ಉಪಾಧ್ಯಕ್ಷ ಕೊಗ್ಗ ರಮೇಶ್, ಪ್ರಧಾನ ಕಾರ್ಯದರ್ಶಿ ಶಶಿಕಲಾ, ಪದಾಧಿಕಾರಿಗಳಾದ ಸಂಜೀವ ಕೊಡಿಕಲ್, ಕಮಲ ಮೊಂಟೆಪದವು, ಜಾಗೃತ ಕರ್ನಾಟಕದ ರಾಜ್ಯ ಸಮಿತಿ ಸದಸ್ಯರಾದ ಬಿ.ಸಿ ಬಸವರಾಜ್, ಲಕ್ಷ್ಮಣ್ ಕುಂದರ್, ಡಾ.ವಾಸು ಎಚ್.ವಿ, ದೊಡ್ಡಿಪಾಳ್ಯ ನರಸಿಂಹಮೂರ್ತಿ ಸೇರಿ ಇತರರು ಭಾಗವಹಿಸಿದ್ದರು.

ಕೊರಗ 1
2 31
3 28
5 14
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X