ಎಚ್‌ಡಿಕೆ, ಡಿ ಸಿ ತಮ್ಮಣ್ಣ ವಿರುದ್ಧ ಭೂಕಬಳಿಕೆ ಆರೋಪ: ವರದಿ ಸಲ್ಲಿಸುವಂತೆ ಹೈಕೋರ್ಟ್‌ ತಾಕೀತು

Date:

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಮದ್ದೂರು ಮಾಜಿ ಶಾಸಕ ಡಿ.ಸಿ ತಮ್ಮಣ್ಣ ಹಾಗೂ ಇತರರ ವಿರುದ್ಧ ದಾಖಲಾಗಿರುವ ಭೂಕಬಳಿಕೆ ಪ್ರಕರಣದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮದ ಕುರಿತು ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

- Advertisement -

ಬಿಡದಿಯ ಕೇತಗಾನಹಳ್ಳಿ ಬಳಿ ಎಚ್.ಡಿ ಕುಮಾರಸ್ವಾಮಿ ಮತ್ತು ಡಿ.ಸಿ ತಮ್ಮಣ್ಣ ಹಾಗೂ ಸಂಬಂಧಿಗಳು 14 ಎಕರೆ ಭೂಕಬಳಿಕೆ ಮಾಡಿದ್ದಾರೆ ಎಂದು ಮಾಜಿ ಸಂಸದ ಜಿ. ಮಾದೇಗೌಡ ಲೋಕಾಯುಕ್ತಕ್ಕೆ ದೂರು ನೀಡಿದ್ದರು. 2014ರಲ್ಲಿ ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿತ್ತು. ಪ್ರಕರಣದಲ್ಲಿ ಆರೋಪಿಗಳಿಂದ ಒತ್ತುವರಿಯಾಗಿರುವ ಭೂಮಿಯನ್ನು ತೆರವುಗೊಳಿಸುವಂತೆ ಈ ಹಿಂದೆ ಅಧಿಕಾರಿಗಳಿಗೆ ಹೈಕೋರ್ಟ್‌ ಸೂಚಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೋರ್ಟ್‌ ನಿರ್ದೇಶನದ ಹೊರತಾಗಿಯೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲವೆಂದು ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ಸರ್ಕಾರಕ್ಕೆ ತಾಕೀತು ಮಾಡಿದೆ.

ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಾಗಿದ್ದ ವಕೀಲರು, “ಒತ್ತುವರಿ ತೆರವಿಗೆ ಈ ಹಿಂದೆಯೇ ಪ್ರಕರಣದ ಆರೋಪಿಗಳಿಗೆ ನೋಟಿಸ್ ನೀಡಲಾಗಿತ್ತು. ‘ತಾವು ಸರ್ಕಾರಿ ಜಮೀನು ಒತ್ತುವರಿ ಮಾಡಿಲ್ಲ. ಮಂಜೂರಾದ ಭೂಮಿಯನ್ನಷ್ಟೇ ಖರೀದಿ ಮಾಡಿದ್ದೇವೆ’ ಎಂದು ನೋಟಿಸ್‌ಗೆ ಉತ್ತರಿಸಿದ್ದಾರೆ. ಅಲ್ಲದೆ, ಪರಿಶೀಲನೆ ವೇಳೆ ದಾಖಲೆ ನಾಶವಾಗಿರುವುದು ಪತ್ತೆಯಾಗಿದೆ” ಎಂದು ವಾದ ಮಂಡಿಸಿದ್ದಾರೆ.

ಅವರ ವಾದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್‌, “ದಾಖಲೆಗಳು ನಾಶವಾಗಿವೆ ಎಂದರೆ ಏನರ್ಥ? ಭೂಮಿ ದಾಖಲೆಗಳಿಗೆ ಸರ್ಕಾರವೇ ಜವಾಬ್ದಾರಿಯಾಗಿರುತ್ತದೆ. ಪ್ರಕರಣದಲ್ಲಿ ಸರ್ಕಾರದ ಎಷ್ಟು ಜಮೀನು ಒತ್ತುವರಿಯಾಗಿದೆ. ಎಷ್ಟು ಜಮೀನನ್ನು ಸರ್ಕಾರ ಮರಳಿ ವಶಕ್ಕೆ ಪಡೆದುಕೊಂಡಿದೆ ಎಂಬುದರ ಕುರಿತು ವರದಿ ಸಲ್ಲಿಸಬೇಕು” ಎಂದು ನಿರ್ದೇಶನ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...