ರೈತರಿಗೆ ಶಾಶ್ವತ ಪರಿಹಾರ ನೀಡಲು ಭೂ ಮರು ಮಾಪನ: ಕಂದಾಯ ಸಚಿವ ಕೃಷ್ಣಬೈರೇಗೌಡ

Date:

Advertisements
  • ರಾಮನಗರದಲ್ಲಿ ಪ್ರಾಯೋಗಿಕ ಭೂ ಮರು ಮಾಪನಾ ಕಾರ್ಯ
  • ಶತಮಾನಗಳ ಭೂ ವ್ಯಾಜ್ಯಕ್ಕೆ ತೆರೆ ಎಳೆಯಲು ಸರ್ಕಾರ ಯತ್ನ

ಭೂ ಸರ್ವೇ ವಿಚಾರದಲ್ಲಿ ಸಾಕಷ್ಟು ಸಮಸ್ಯೆಗಳಿವೆ, ಪರಿಣಾಮ ರೈತರೂ ಸಹ ತಮ್ಮದಲ್ಲದ ತಪ್ಪಿಗೆ ಸಾಕಷ್ಟು ನೋವನ್ನು ಅನುಭವಿಸಿದ್ದಾರೆ. ಹೀಗಾಗಿ ರೈತರ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿ ಶತಮಾನಗಳ ನಂತರ ಭೂ ರೀ ಸರ್ವೇ ಪ್ರಾಯೋಗಿಕ ಪರೀಕ್ಷೆಗೆ ಚಾಲನೆ ನೀಡಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಉಯ್ಯಂಬಳ್ಳಿ ಹೋಬಳಿಯಲ್ಲಿ ಬುಧವಾರ ಭೂ ಮರು ಮಾಪನ (ರೀ ಸರ್ವೇ) ಪ್ರಾಯೋಗಿಕ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಸರ್ವೇ ನಂಬರ್ ಡಿಸ್ಪ್ಯೂಟ್ ಎಂಬುದು ಇತ್ತೀಚೆಗೆ ರೈತರ ಪಾಲಿನ ಸಾಮಾನ್ಯ ಸಮಸ್ಯೆಯಾಗಿದೆ. ತಮ್ಮದಲ್ಲದ ತಪ್ಪಿಗೆ ದಿನಂಪ್ರತಿ ಸರ್ಕಾರಿ ಕಚೇರಿಯನ್ನು ಅಲೆಯುವಂತಾಗಿದೆ” ಎಂದು ವಿಷಾದಿಸಿದರು.

“ರೈತರ ಈ ಪರಿಸ್ಥಿತಿಗೆ ಸರ್ವೇ ಇಲಾಖೆಯಲ್ಲಿನ ಸಮಸ್ಯೆಯೇ ಕಾರಣ. ಬ್ರಿಟಿಷರ ಕಾಲದಲ್ಲಿ 1925 ರಲ್ಲಿ ನಡೆದ ಭೂ ಸರ್ವೇಯನ್ನೇ ಆಧಾರವಾಗಿಟ್ಟುಕೊಂಡು ನಾವು ಈಗಲೂ ವ್ಯವಹರಿಸುತ್ತಿದ್ದೇವೆ. ಇದೇ ಕಾರಣಕ್ಕೆ ಇದೀಗ ಭೂ ರೀ ಸರ್ವೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದು, ಇದು ಯಶಸ್ವಿಯಾದರೆ ರಾಜ್ಯಾದ್ಯಂತ ಎಲ್ಲಾ ಕೃಷಿ ಮತ್ತು ಅರಣ್ಯ ಭೂಮಿಯನ್ನು ರೀ ಸರ್ವೇ ಮಾಡಲಾಗುವುದು” ಎಂದು ಮಾಹಿತಿ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಶವಾದಿ ರಾಜಕಾರಣ- ಬಿಜೆಪಿ ಎರಡೆಳೆ ನಾಲಗೆಗೆ ಇನ್ನೆಷ್ಟು ದೊಡ್ಡ ಸಾಕ್ಷಿ ಬೇಕು?

ರೀ ಸರ್ವೇ ಲಾಭವೇನು?

ಪ್ರತಿ ಹಳ್ಳಿಯ ಹಿಡುವಳಿ ಭೂಮಿ, ಗೋಮಾಳ, ಹುಲ್ ಬನ್ನಿ, ಸರ್ಕಾರಿ ಖರಾಬು, ಇನಾಮು ಮತ್ತು ಕೆರೆ ಭೂಮಿಗಳಿಗೆ ಸಂಬಂಧಿಸಿದಂತೆ ಈಗ ಸರ್ಕಾರದ ಬಳಿ ಇರುವುದು ನೂರು ವರ್ಷಗಳ ಹಳೆಯ ದಾಖಲೆ.

ಆದರೆ ಈ ನೂರು ವರ್ಷದಲ್ಲಿ ಕೃಷಿ ಮತ್ತು ಜನವಸತಿ ಪ್ರದೇಶಗಳಲ್ಲಿ ಸಾಕಷ್ಟು ಬದಲಾವಣೆಯಾಗಿವೆ. ಪ್ರತಿಯೊಂದು ಗ್ರಾಮಠಾಣಾ ಹಾಗೂ ಸರ್ವೇ ನಂಬರ್ ಗಡಿಯಲ್ಲೂ ವ್ಯತ್ಯಾಸಗಳಿವೆ. ಈ ಬಗ್ಗೆ ಸರ್ಕಾರಿ ದಾಖಲೆಗಳಲ್ಲಿ ನಿಖರ ವಿವರಣೆ ಇಲ್ಲ.

ಇದಲ್ಲದೆ, ಸರ್ಕಾರಿ ಭೂ ಒತ್ತುವರಿ ಜಮೀನು ಯಾವುದು? ಹಾಗೂ ಅರಣ್ಯ ಪ್ರದೇಶದ ಗಡಿಯ ಬಗ್ಗೆಯೂ ಸಾಕಷ್ಟು ಗೊಂದಲ ಇದೆ. ಈ ಎಲ್ಲಾ ಗೊಂದಲಗಳಿಗೂ ತೆರೆ ಎಳೆಯುವ ಸಲುವಾಗಿಯೇ ಇದೀಗ ತಾಂತ್ರಿಕ ಭೂ ರೀ ಸರ್ವೇಗೆ ಚಾಲನೆ ನೀಡಲಾಗಿದೆ.

ಡ್ರೋನ್ ತಂತ್ರಜ್ಞಾನದ ಮೂಲಕ ಭೂ ರೀ ಸರ್ವೇ ನಡೆಸಲಾಗುತ್ತಿದೆ. ಡ್ರೋನ್ ಪ್ರತಿ ಚ.ಕಿಲೊಮೀಟರ್ ಗೆ 4000 ಕ್ಕೂ ಅಧಿಕ ಫೋಟೊ ತೆಗೆಯುತ್ತದೆ. ಈ ಫೋಟೊಗಳ ಆಧಾರದಲ್ಲಿ ವೈಜ್ಞಾನಿಕವಾಗಿ ಹಿಡುವಳಿ ಭೂಮಿ, ಗೋಮಾಳ, ಹುಲ್ ಬನ್ನಿ, ಸರ್ಕಾರಿ ಖರಾಬು, ಇನಾಮು ಮತ್ತು ಕೆರೆ ಭೂಮಿಗಳನ್ನು ಗುರುತಿಸಲಾಗುವುದು. ಈ ಮೂಲಕ ರೈತರ ಸರ್ವೇ ಡಿಸ್ಪ್ಯೂಟ್ ಗಳಿಗೆ ಶಾಶ್ವತ ಪರಿಹಾರ ಹಾಗೂ ಸರ್ಕಾರಿ ಭೂಮಿ ಗುರುತಿಸಿ ಒತ್ತುವರಿ ತೆರವು ಮಾಡಲು ಸಹಕಾರಿಯಾಗುವುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X