SCSP/TSP ಅಡಿ ವಿಶ್ವವಿದ್ಯಾಲಯಗಳ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್: ಸಿದ್ದರಾಮಯ್ಯ

Date:

Advertisements
  • SCSP/TSP ಅಡಿ 230 ಕೋಟಿ ರೂ. ಒದಗಿಸುವಂತೆ ಅಧಿಕಾರಿಗಳಿ ಸೂಚನೆ
  • ಎಲ್ಲ ಸಮುದಾಯಗಳ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸಲು ಕ್ರಮ

ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಎಸ್‌.ಪಿ.ಎಸ್.ಪಿ. / ಟಿ.ಎಸ್.ಪಿ. ಅಡಿ ಲ್ಯಾಪ್‌ ಟಾಪ್‌ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಯಿತು.

ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ಸಭೆ ನಡೆಯುವಾಗಲೇ ದೂರವಾಣಿ ಮೂಲಕ ಸೂಚನೆ ನೀಡಿದರು.

Advertisements

“ವಿವಿಗಳಲ್ಲಿರುವ ಎಲ್ಲ ಸಮುದಾಯಗಳ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸಬೇಕಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಹೇಳಿದರು.

ರಾಜ್ಯದ ವಿವಿಗಳಲ್ಲಿ ಮಂಜೂರಾದ ಹುದ್ದೆಗಳ ಶೇ. 50 ಕ್ಕೂ ಹೆಚ್ಚು ಖಾಲಿ ಇದ್ದು, 1882 ಹುದ್ದೆಗಳಷ್ಟೇ ಭರ್ತಿಯಾಗಿವೆ. ವಿಶ್ವವಿದ್ಯಾಲಯಗಳ ಸಂಪನ್ಮೂಲದಿಂದಲೇ 2865 ಅತಿಥಿ ಉಪನ್ಯಾಸಕರಿಗೆ ವೇತನ ಭರಿಸುವ ಕಾರಣ, ಅವರಿಗೆ ಆರ್ಥಿಕ ಹೊರೆಯಾಗಿದೆ ಎಂಬುದನ್ನು ಕುಲಪತಿಗಳು ಮತ್ತು ಅಧಿಕಾರಿಗಳು ಮುಖ್ಯಮಂತ್ರಿಯವರ ಗಮನಕ್ಕೆ ತಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ನಿವೃತ್ತಿ ವೇತನ ವಿತರಣೆಯಲ್ಲಿ ಹಳೆಯ ವಿವಿಗಳು ವಿಭಜನೆಯಾದರೂ ಹಳೆಯ ವಿವಿಗಳು ಮಾತ್ರ ನಿವೃತ್ತಿ ವೇತನ ಪಾವತಿಸುತ್ತಿದ್ದಾರೆ. ಇದರಿಂದ ಹಳೆಯ ವಿವಿಗಳ ಆರ್ಥಿಕ ಹೊರೆ ಹೆಚ್ಚಾಗಿದೆ. ಪ್ರಸಕ್ತ ಆಯವ್ಯಯದಲ್ಲಿ ಒಟ್ಟಾರೆಯಾಗಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ 5470 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, 2474 ಕೋಟಿ ರೂ. ಹೆಚ್ಚುವರಿ ಅನುದಾನದ ಅಗತ್ಯವಿದೆ ಎಂದು ಕುಲಪತಿಗಳು ಮುಖ್ಯಮಂತ್ರಿಗಳಿಗೆ ಸಮಸ್ಯೆ ಹೇಳಿಕೊಂಡರು.

ಆಯವ್ಯಯ ಹಂಚಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ವೆಚ್ಚ ಹೆಚ್ಚಾಗುತ್ತಿದೆ. ಇದರಿಂದ ನಾವು ಗುಣಮಟ್ಟದ ಶಿಕ್ಷಣವನ್ನು ನಿರೀಕ್ಷಿಸಲು ಹೇಗೆ ಸಾಧ್ಯ? ಇದಲ್ಲದೆ ಉನ್ನತ ಶಿಕ್ಷಣ ಇಲಾಖೆಯ ಆಯವ್ಯಯದಲ್ಲಿ ಶೇ. 88 ರಷ್ಟು ಅನುದಾನ ವೇತನಕ್ಕೆ ಬಳಕೆಯಾಗುತ್ತಿದೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯು ಕೈಗಾರಿಕೋದ್ಯಮಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್‌ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X