ದಿವಗಂತ ಆರ್ ಧ್ರುವನಾರಾಯಣ ಪತ್ನಿ ವೀಣಾ ನಿಧನ

Date:

Advertisements

ಇತ್ತೀಚೆಗಷ್ಟೇ ನಿಧನರಾಗಿದ್ದ ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಅವರು ಇಂದು (ಏ.7) ನಿಧನರಾಗಿದ್ದಾರೆ.

ಬ್ರೈನ್‌ ಟ್ಯೂಬರ್‌ನಿಂದ ಬಳಲುತ್ತಿದ್ದ ಅವರು ಕಳೆದ 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಪತಿ ಧ್ರುವನಾರಾಯಣ ಅವರ ಅಕಾಲಿನ ಸಾವಿನಿಂದಾಗಿ ವೀಣಾ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು.

ತೀವ್ರ ಆನಾರೋಗ್ಯದ ಕಾರಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Advertisements

ವೀಣಾ ಅವರ ಅಂತ್ಯಕ್ರಿಯೆ ಶುಕ್ರವಾರ ಸಂಜೆ ಧ್ರುವನಾರಾಯಣ್ ಹುಟ್ಟೂರಾದ ಚಾಮರಾಜ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ನಂಜನಗೂಡಿನಿಂದ ಹಿಂದೆ ಸರಿದಿದ್ದು ಆತ್ಮಸಾಕ್ಷಿಯಿಂದ: ಡಾ. ಎಚ್‌.ಸಿ ಮಹದೇವಪ್ಪ ಸ್ಪಷ್ಟನೆ

ಧ್ರುವನಾರಾಯಣ ಅವರ ಸಮಾದಿಯ ಪಕ್ಕದಲ್ಲಿಯೇ ವೀಣಾ ಅವರ ಅಂತ್ಯಕ್ರಿಯೆಯೂ ನಡೆಯಲಿದೆ. ಕೇವಲ ಒಂದು ತಿಂಗಳ ಅಂತರದಲ್ಲೇ ಪತಿ – ಪತ್ನಿ ಇಬ್ಬರೂ ಸಾವಿಗೀಡಾಗಿದ್ದು, ಕುಟುಂಬಕ್ಕೆ ದುಃಖ ತಂದೊಡ್ಡಿದೆ.

ಧ್ರುವನಾರಾಯಣ ಅವರ ಪುತ್ರ ದರ್ಶನ್ ಅವರಿಗೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಟಿಕೆಟ್‌ ನೀಡಲಾಗಿದೆ. ತಂದೆಯ ಸಾವಿನ ನಂತರ ಚೇತರಿಸಿಕೊಂಡಿದ್ದ ದರ್ಶನ್ ಪ್ರಚಾರ ಕಾರ್ಯ ಆರಂಭಿಸಿದ್ದರು. ಆದರೆ, ಪ್ರಚಾರ ಆರಂಭಿಸಿದ ಮೂರೇ ದಿನಕ್ಕೆ ದರ್ಶನ್‌ ಅವರಿಗೆ ಮತ್ತೊಂದು ಅಘಾತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸರ್ಕಾರಿ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

Download Eedina App Android / iOS

X