ಪುನೀತ್‌ ರಾಜಕುಮಾರ್‌ ಹೃದಯಜ್ಯೋತಿ ಯೋಜನೆಗೆ ಚಾಲನೆ; ತ್ವರಿತ ಚಿಕಿತ್ಸೆ ಭರವಸೆ

Date:

ಹಠಾತ್‌ ಹೃದಯಾಘಾತವಾದಾಗ ತುರ್ತಾಗಿ ಚಿಕಿತ್ಸೆ ನೀಡುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಕರ್ನಾಟಕ ರತ್ನ ಡಾ.ಪುನೀತ್‌ ರಾಜಕುಮಾರ್‌ ಹೃದಯಜ್ಯೋತಿ ಯೋಜನೆ’ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಶುಕ್ರವಾರ ಚಾಲನೆ ನೀಡಿದರು.

- Advertisement -

ಆರೋಗ್ಯ ಇಲಾಖೆ ವತಿಯಿಂದ ಧಾರವಾಡದ ಸತ್ತೂರಿನ ಡಾ.ಡಿ.ವೀರೇಂದ್ರ ಹಗ್ಗಡೆ ಕಲಾ ಕ್ಷೇತ್ರ ಭವನದಲ್ಲಿ ಶುಕ್ರವಾರ ನಡೆದ ಕರ್ನಾಟಕ ರತ್ನ ಡಾ.ಪುನೀತ್‌ ರಾಜಕುಮಾರ್‌ ಹೃದಯಜ್ಯೋತಿ ಯೋಜನೆಗೆ ಚಾಲನೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, “ಹೃದಯಾಘಾತ ಸಂಭವಿಸಿದಾಗ ಸಮುದಾಯ, ತಾಲ್ಲೂಕು ಆಸ್ಪತ್ರೆಗಳಲ್ಲಿ ಇಸಿಜಿ ಮಾಡಿ ತಕ್ಷಣವೇ ಕೃತಕ ಬುದ್ಧಿಮತೆ (ಎಐ) ಮೂಲಕ ಆಘಾತದ ತೀವ್ರತೆ ಪತ್ತೆ ಹಚ್ಚುವ ನಿಟ್ಟಿನಲ್ಲಿ ಕಿಟ್‌ಗಳನ್ನು ಒದಗಿಸಲಾಗಿದೆ” ಎಂದರು.

“ಆಸ್ಪತ್ರೆಯ ವೈದ್ಯರು ತಜ್ಞರನ್ನು ಫೋನ್‌ನಲ್ಲಿ ಸಂಪರ್ಕಿಸಿ ತಂತ್ರಾಂಶ ಮೂಲಕ ಆಘಾತ ಪ್ರಮಾಣ ಪತ್ತೆ ಹಚ್ಚುತ್ತಾರೆ. ಆರು ನಿಮಿಷದಲ್ಲಿ ಈ ಪ್ರಕ್ರಿಯೆ ನಡೆಸುತ್ತಾರೆ. ಆಘಾತ ತೀವ್ರ ಪ್ರಮಾಣದಲ್ಲಿ ಆಗಿದ್ದರೆ ತಜ್ಞರ ಸಲಹೆ ಪಡೆದು ವೈದ್ಯರು ತಕ್ಷಣವೇ ‘ಟೆನೆಕ್ಟ್‌ಪಾಲ್ಸ್‌’ ಚುಚ್ಚುಮದ್ದು ನೀಡುತ್ತಾರೆ. ಹೃದಯದಲ್ಲಿ ‘ಬ್ಲಾಕ್‌’ ಆಗುವುದನ್ನು ಚುಚ್ಚುಮದ್ದು ತಡೆಯುತ್ತದೆ” ಎಂದು ಹೇಳಿದರು.

“ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲ ತಾಲ್ಲೂಕು ಆಸ್ಪತ್ರೆಗಳಿಗೂ ಈ ಯೋಜನೆ ವಿಸ್ತರಿಸಲಾಗುವುದು. ಪುನೀತ್‌ ರಾಜಕುಮಾರ್‌ ಅವರು ನಟ ಮಾತ್ರವಲ್ಲ ಮನುಷ್ಯತ್ವಕ್ಕೆ ಹೆಸರಾದವರು. ಯೋಜನೆಯನ್ನು ಅರ್ಥಪೂರ್ಣವಾಗಿಸಲು ಇದಕ್ಕೆ ಅವರ ಹೆಸರು ನಾಮಕರಣ ಮಾಡಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

“ಹೃದಯಾಘಾತವಾದಾಗ ಸುವರ್ಣ ಅವಧಿಯಲ್ಲಿ (ಗೋಲ್ಡನ್‌ ಹವರ್‌) ಚಿಕಿತ್ಸೆ ನೀಡಿ ಜೀವ ಉಳಿಸುವುದು ಈ ಯೋಜನೆಯ ಉದ್ದೇಶವಾಗಿದೆ. 15 ಜಿಲ್ಲೆಗಳ 71 ತಾಲ್ಲೂಕು ಆಸ್ಪತ್ರೆಗಳಿಗೆ ಈ ಯೋಜನೆ ಲಿಂಕ್‌ ಮಾಡಲಾಗಿದೆ. ಈ 71 ಆಸ್ಪತ್ರೆಗಳಿಗೆ ಚುಚ್ಚುಮದ್ದುಗಳನ್ನು ಆಸ್ಪತ್ರೆಗೆ ಪೂರೈಸಲಾಗಿದೆ” ಎಂದು ವಿವರಿಸಿದರು.

“ಜನದಟ್ಟಣೆಯ ಸಾರ್ವಜನಿಕ ಸ್ಥಳಗಳಲ್ಲಿ (ಬಸ್‌, ರೈಲು, ವಿಮಾನ ನಿಲ್ದಾಣ, ಕೋರ್ಟ್‌…) ಸ್ವಯಂ ಚಾಲಿತ ಡಿಫಿಬ್ರಿಲೇಟರ್‌ (ಎಇಡಿ) ಸಾಧನಗಳನ್ನು ಅಳವಡಿಸಲು ಸಿದ್ಧತೆ ನಡೆದಿದೆ. ಹೃದಯ ಸ್ತಂಭನ ಆದಾಗ ಶಾಖ ನೀಡಿ ಹೃದಯ ಮತ್ತೆ ಕೆಲಸ ನಿರ್ವಹಿಸುವಂತೆ ಮಾಡಲು ಬಳಸುವ ಸಾಧನ ಇದು” ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್‌.ಲಾಡ್‌, ಶಾಸಕ ಎನ್‌.ಎಚ್‌.ಕೋನರೆಡ್ಡಿ, ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್‌ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...