ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರರು ಸೇರಿದಂತೆ) ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಏಕಕಾಲದಲ್ಲಿ ರಾಜ್ಯಾದ್ಯಂತ ಚಾಲನೆ ನೀಡಲಾಯಿತು.
ರಾಜ್ಯದ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ. ರಾಜಧಾನಿ ಮತ್ತು ವಿವಿಧ ಜಿಲ್ಲೆಗಳ ʼಶಕ್ತಿ ಯೋಜನೆʼ ಜಾರಿಯ ಸಂಭ್ರಮದ ಚಿತ್ರಗಳು ಇಲ್ಲಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದ ನಂತರ ವಿಧಾನಸೌಧದಿಂದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ತೆರಳಿ ರಾಜ್ಯದ ವಿವಿಧ ಭಾಗಗಳಿಗೆ ತೆರಳುವ ಬಸ್‌ಗಳಿಗೆ ಚಾಲನೆ ನೀಡಿದರು.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ ಉದ್ಘಾಟಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್‌ವರೆಗೆ ಬಸ್ ಪ್ರಯಾಣ ಮಾಡಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಚೀಟಿ ನೀಡಿದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಸ್ ನಿಲ್ದಾಣದಲ್ಲಿ ಮೀನುಗಾರಿಕೆ ಸಚಿವ ಮಂಕಾಳ್ ವೈದ್ಯ ಅವರು ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿಕೊಡುವ ಶಕ್ತಿ ಯೋಜನೆಗೆ ಚಾಲನೆ ನೀಡಿದರು

ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದರು

ತುಮಕೂರು ಬಸ್ ನಿಲ್ದಾಣದಲ್ಲಿ ಸಚಿವ ಡಾ. ಜಿ ಪರಮೇಶ್ವರ್ ಅವರು ಮಹಿಳೆಯರಿಗೆ ಉಚಿತ ಟಿಕೆಟ್ ನೀಡುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದರು

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳರ್ ಅವರು ಉಡುಪಿಯ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು

ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸುವ ರಾಜ್ಯ ಸರ್ಕಾರದ 'ಶಕ್ತಿ' ಯೋಜನೆಗೆ ಕೋಲಾರ ಜಿಲ್ಲೆಯ ಕೆಜಿಎಫ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ಕೆಜಿಎಫ್ ಶಾಸಕಿ ರೂಪಕಲಾ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಎಚ್ ಸಿ ಮಹದೇವಪ್ಪ ಅವರು ಮೈಸೂರಿನಲ್ಲಿ ಮಹಿಳೆಯರಿಗೆ ಸಿಹಿ ಹಂಚುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದರು.