- ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡುವವರ ವಿರುದ್ಧ ಕ್ರಮ
- ಬೆಂಗಳೂರಿನಲ್ಲಿ ವೈಫೈ ಜೋನ್ ಮಾಡಲು ಚಿಂತನೆ: ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯದಲ್ಲಿ ಫೇಕ್ ನ್ಯೂಸ್ ತಡೆಗಟ್ಟಲು ಕಾನೂನು ತರುತ್ತಿದ್ದೇವೆ. ಕೆಲವು ನಾಯಕರ ಬಗ್ಗೆ ತೇಜೋವಧೆ ಮಾಡಲಾಗುತ್ತಿದೆ. ನಕಲಿ ಸುದ್ದಿ ತಡೆಗಟ್ಟಲು ಗೃಹ ಇಲಾಖೆಯಿಂದ ಕಾನೂನು ಜಾರಿ ಮಾಡಲಾಗುತ್ತದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, “ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡುವವರ ವಿರುದ್ಧ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ” ಎಂದು ಎಚ್ಚರಿಸಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿ, “ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಬೆಂಗಳೂರಿನ ಒಂದಷ್ಟು ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಬೆಂಗಳೂರಿನಲ್ಲಿ ವೈಫೈ ಜೋನ್ ಮಾಡುತ್ತೇವೆ” ಎಂದರು.
ಈ ಸುದ್ದಿ ಓದಿದ್ದೀರಾ? 100 ದಿನಗಳ ಆಡಳಿತದಲ್ಲಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ
“ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್, ಕೊರೊನಾ ಹಗರಣಗಳನ್ನು ತನಿಖೆಗೆ ವಹಿಸಿದ ವಿಚಾರವಾಗಿ ಮಾತನಾಡಿದ ಅವರು 40% ಕಮಿಷನ್, ಕೊರೊನಾ ಹಗರಣ ಬಗ್ಗೆ ತನಿಖೆಗೆ ವಹಿಸಿದ್ದೇವೆ. ಈ ಕುರಿತು ನಾನು ಮಾತನಾಡಲ್ಲ, ಬೇರೆಯವರು ಮಾತನಾಡುತ್ತಾರೆ” ಎಂದರು.
ಸುಳ್ಳು ಸುದ್ದಿ ಹರಡುವ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯಿಸಿ, “ನಗರದ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಇಬ್ಬರು ಎಕ್ಸ್ ಪರ್ಟ್ಗಳ ನೇಮಕ ಮಾಡಲಾಗಿದೆ. ತಾಂತ್ರಿಕ ಪರಿಣತಿ ಇರುವಂತಹವರನ್ನು ನೇಮಕ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಇಬ್ಬರು ಸಿಬ್ಬಂದಿಯನ್ನ ಗುರುತಿಸಿ ಸಾಮಾಜಿಕ ಜಾಲತಾಣದ ಮೇಲೆ ಕಣ್ಣಿಡಲು ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.