ಡ್ರಗ್ಸ್ ದಂಧೆಕೋರರ ಆಸ್ತಿ ಮುಟ್ಟುಗೋಲಿಗೆ ಕಾನೂನು: ಗೃಹ ಸಚಿವ ಡಾ. ಜಿ.ಪರಮೇಶ್ವರ್

Date:

ಮಾದಕ ದ್ರವ್ಯ ದಂಧೆಯಲ್ಲಿ ತೊಡಗುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಾಬಸ್‌ಪೇಟೆಯ ಕರ್ನಾಟಕ ವೇಸ್ಟೇಜ್ ಮ್ಯಾನೇಜ್‌ಮೆಂಟ್ ಪ್ರಾಜೆಕ್ಟ್ ಪ್ರದೇಶದಲ್ಲಿ ನಡೆದ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ‘ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ ಕಾರ್ಯಕ್ರಮ’ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ಪಂಜಾಬ್‌ನಲ್ಲಿ ಪ್ರತಿಯೊಬ್ಬ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಿದ್ದಾರೆ. ಮಾದಕವಸ್ತು ಬೆರೆಸಿದ ಚಾಕೋಲೆಟ್ ಮಾರುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಬೆಳಕಿಗೆ ಬಂದಿವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಡ್ರಗ್ಸ್ ವ್ಯಸನಕ್ಕೆ ದೂಡುವುದು ದಂಧೆಕೋರರ ಉದ್ದೇಶವಿರಬಹುದು. ಇದಕ್ಕೆ ಆಸ್ಪದ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು ಹಾಕಲು ಕಾನೂನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ” ಎಂದರು.

“ಡ್ರಗ್ಸ್ ದಂಧೆ ವಿಶ್ವದ ಜನ ಸಮುದಾಯದಲ್ಲಿ ಆತಂಕ ಮೂಡಿಸಿದೆ. ಮಾದಕ ವಸ್ತುಗಳು ಇಡೀ ಸಮಾಜವನ್ನು ನಾಶ ಮಾಡುತ್ತಿದೆ. ವಿಶೇಷವಾಗಿ ಯುವಕರ ಜೀವನ ಹಾಳು ಮಾಡುತ್ತಿವೆ. ಒಳ್ಳೆಯ ಸಮಾಜ ನಿರ್ಮಾಣ ಮಾಡುವ ಸಂದರ್ಭದಲ್ಲಿ ಬಹಳಷ್ಟು ದೊಡ್ಡ ಸವಾಲಾಗಿ ನಿಂತಿದೆ” ಎಂದು ಹೇಳಿದರು‌.

ಈ ಸುದ್ದಿ ಓದಿದ್ದೀರಾ? 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣ: ಎಂ ಬಿ ಪಾಟೀಲ್‌ ಭರವಸೆ

ವಿಶ್ವಕ್ಕೆ ಸವಾಲು

“ವಿಶ್ವಕ್ಕೆ ಸವಾಲಾಗಿರುವ ಡ್ರಗ್ಸ್ ದಂಧೆಯನ್ನು ಎದುರಿಸುವಲ್ಲಿ ಕೆಲ‌ ಸಣ್ಣ ರಾಷ್ಟ್ರಗಳು ಸೋತು ಕೈಚೆಲ್ಲಿ ನಿಂತಿವೆ. ಹಾಲೆಂಡ್, ಸ್ವಿಟ್ಜರ್ಲೆಂಡ್ ಸೇರಿದಂತೆ ಇನ್ನು ಕೆಲ‌ದೇಶಗಳು ಏನಾದರಾಗಲಿ ಎಂಬಂತೆ ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವುದನ್ನು ನಿಲ್ಲಿಸಿ, ಸೋಲನ್ನು ಒಪ್ಪಿಕೊಂಡಿವೆ‌. ಇಂತಹ ದುಸ್ಥಿತಿ ನಮ್ಮ ದೇಶಕ್ಕೆ ಬರಬಾರದು. ಈಗಲೇ ಎಚ್ಚೆತ್ತುಕೊಳ್ಳಬೇಕು” ಎಂದರು.

“ಪ್ರಬಲ ರಾಷ್ಟ್ರಗಳು ಯಾವುದೇ ಕಾರಣಕ್ಕು ಡ್ರಗ್ಸ್ ಯುವಕರ ಕೈಗೆ ಸಿಗಬಾರದು ಎಂಬ ನಿಟ್ಟಿನಲ್ಲಿ ಯುದ್ಧದ ರೀತಿ ಭಾವಿಸಿ ಕ್ರಮ ಕೈಗೊಂಡಿದ್ದಾರೆ. ಅದೇ ಮಾದರಿಯಲ್ಲಿ ಡ್ರಗ್ ಮಟ್ಟ ಹಾಕಬೇಕು. ಈಗಾಗಲೇ ಮಂಡ್ಯ, ಮೈಸೂರು, ಗದಗ ಜಿಲ್ಲೆಗಳು ಡ್ರಗ್ಸ್ ದಂಧೆ ನಿಯಂತ್ರಿಸುವಲ್ಲಿ ಮುಂದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಸವಾಲಾಗಿ ಸ್ವೀಕರಿಸಿ ಜಿಲ್ಲಾ ಮಟ್ಟದಿಂದಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶಿಸಿದರು‌‌.

“ವಿದೇಶದಿಂದ ಬರುವ ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿ ತೊಡಗುತ್ತಿದ್ದಾರೆ. ಆಫ್ರಿಕಾದವರು ಹೆಚ್ಚಾಗಿ ಅಕ್ರಮ ಚಟುವಟಿಕೆಯಲ್ಲಿ ತೊಡಗುತ್ತಿದ್ದು, ಇದನ್ನು ಮಟ್ಟ ಹಾಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು‌.

“ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ‌ ಘೋಷಿಸಲಾಗಿದೆ. ಡ್ರಗ್ಸ್ ಪರೀಕ್ಷಿಸುವ ಕಿಟ್, ಪೊಲೀಸರಿಗೆ ವಿಶೇಷ ತರಬೇತಿ, ಕಾನೂನು ಭದ್ರಪಡಿಸುವ ಕೆಲಸ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಇಲಾಖೆಯ ಕೆಳಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದು ಕಳೆದ ಒಂದು ವರ್ಷದ ಅಂಕಿ-ಅಂಶದಿಂದ ಗೊತ್ತಾಗುತ್ತದೆ. ಕಾರ್ಯಾಚರಣೆ ಹೀಗೆ ನಿರಂತರವಾಗಿ ಮುಂದುವರಿಯಬೇಕು” ಎಂದು ಹೇಳಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಕೇಂದ್ರ ವಲಯ ಐಜಿಪಿ ಡಾ. ಬಿ.ಆರ್.ರವಿಕಾಂತೇಗೌಡ, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ, ಎಡಿಜಿಪಿ (ಕ್ರೈಮ್) ಉಮೇಶ್, ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಗುಪ್ತ, ದಕ್ಷಿಣ ವಲಯ ಐಜಿಪಿ ಅಮಿತ್ ಸಿಂಗ್, ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಹಾಗೂ ಕೇಂದ್ರ ಮತ್ತು ದಕ್ಷಿಣ ವಲಯದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...