ಮತ ಪರಿವರ್ತನೆ ಮಾಡುವ ನಾಯಕರು ನಾಳೆ ಜೆಡಿಎಸ್ ಸೇರಲಿದ್ದಾರೆ : ಎಚ್‌ ಡಿ ಕುಮಾರಸ್ವಾಮಿ

Date:

  • ಶುಕ್ರವಾರ ಜೆಡಿಎಸ್‌ ಮಡಿಲಿಗೆ ಅನ್ಯ ಪಕ್ಷದ ಹಲವು ಮುಖಂಡರು
  • ನಾಳೆಯೇ ಜೆಡಿಎಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಎಚ್‌ಡಿಕೆ

ರಾಷ್ಟ್ರೀಯ ಪಕ್ಷಗಳಲ್ಲಿನ ಟಿಕೆಟ್ ಹಂಚಿಕೆಯ ಗೊಂದಲ ಪ್ರಾದೇಶಿಕ ಪಕ್ಷ ಜೆಡಿಎಸ್‌ ಪಾಲಿಗೆ ವರವಾಗುತ್ತಿದೆ.

- Advertisement -

ಇದಕ್ಕೆ ಪೂರಕವಾಗುವಂತೆ ಜೆಡಿಎಸ್ ಮುಖಂಡ, ಮಾಜಿ ಮು‍ಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿನ ಗಮನಾರ್ಹ ಬದಲಾವಣೆ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮತ ಪರಿವರ್ತನೆ ಮಾಡುವ ನಾಯಕರನೇಕರು ನಾಳೆ ನಮ್ಮ ಪಕ್ಷ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ.

ತಮ್ಮ ಪಕ್ಷದ ಸಾಧನೆ ಬಗ್ಗೆ ಮಾತನಾಡುತ್ತಿದ್ದ ಅನ್ಯಪಕ್ಷದ ನಾಯಕರ ಹೇಳಿಕೆಗಳಿಗೆ ಮಾರ್ಮಿಕ ತಿರುಗೇಟು ನೀಡಿದ ಕುಮಾರಸ್ವಾಮಿ, ಉತ್ತರ ಕರ್ನಾಟಕ ಭಾಗದಲ್ಲಿ ಜಾತ್ಯತೀತ ಜನತಾದಳ ಪಕ್ಷ ಮುಳುಗಿ ಹೋಗಿದೆ ಅಂತ ಹೇಳುತ್ತಿದ್ದರು.

ಆದರೆ ಇದೀಗ ನಲವತ್ತು ಜನ ಗೆಲ್ಲುವ ವಿಶ್ವಾಸವಿದೆ. ಮತ ಲೆಕ್ಕಾಚಾರ ಬದಲಾಯಿಸುವ ಅನೇಕ ನಾಯಕರು ನಮ್ಮ ಪಕ್ಷ ಸೇರುತ್ತಿದ್ದಾರೆ. ನಾಳೆ ಬೆಂಗಳೂರು ಪಕ್ಷದ ಕಚೇರಿಯಲ್ಲಿ ಇವರನ್ನು ಬರಮಾಡಿಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? :‌ ಚುನಾವಣೆ 2023 | ಒಲ್ಲದ ಮನಸ್ಸಿನಲ್ಲೇ ವರುಣಾದೆಡೆಗೆ ಸೋಮಣ್ಣ; ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿ

ಇದೇ ವೇಳೆ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ವಿಚಾರವಾಗಿಯೂ ಮಾಹಿತಿ ನೀಡಿದ ಕುಮಾರಸ್ವಾಮಿ, ನಾಳೆಯೇ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ ಮಾಡುತ್ತೇವೆ. ಇದಾದ ಎರಡು ದಿನಗಳ ಬಳಿಕ ಹಾಸನ ಟಿಕೆಟ್ ಫೈನಲ್ ಆಗಲಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...