ಸೋರುತ್ತಿದೆ ಹೊಸ ಸಂಸತ್ ಕಟ್ಟಡ; ಅಪಹಾಸ್ಯಕ್ಕೀಡಾದ ಮೋದಿ ಸರ್ಕಾರ – ವಿಡಿಯೋ ನೋಡಿ

Date:

Advertisements

ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ಸಕಲ ಪೂಜೆ-ಪುನಸ್ಕಾರಗಳೊಂದಿಗೆ ಉದ್ಘಾಟಿಸಿದ್ದ ಹೊಸ ಸಂಸತ್‌ ಭವನವು ಮಳೆಯಿಂದ ಸೋರುತ್ತಿದೆ. ಸಂಸತ್‌ ಭವನದ ಲಾಬಿಯಲ್ಲಿ ಮಳೆ ನೀರು ಸೋರುತ್ತಿದೆ. ಛಾವಣಿಯಿಂದ ನೀರು ಸೋರುತ್ತಿರುವ ಜಾಗದಲ್ಲಿ ಬಕೆಟ್‌ ಇಟ್ಟಿರುವ ವಿಡಿಯೋ ವೈರಲ್ ಆಗಿದೆ. ಮೋದಿ ಸರ್ಕಾರವನ್ನು ತರಟೆಗೆ ತೆಗೆದುಕೊಂಡಿರುವ ವಿಪಕ್ಷಗಳು, ‘ಹೊರಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ, ಸಂಸತ್ ಭವನದೊಳಗೆ ನೀರು ಸೋರುತ್ತಿದೆ’ ಎಂದು ಅಪಹಾಸ್ಯ ಮಾಡಿವೆ.

1,200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಹೊಸ ಸಂಸತ್‌ ಭವನವು ಉದ್ಘಾಟನೆಗೊಂಡು ಒಂದು ವರ್ಷ ಪೂರೈಸಿದೆಯಷ್ಟೇ. ಆಗಲೇ ಸೋರುತ್ತಿದ್ದು, ಕಳಪೆ ಕಾಮಗಾರಿಗೆ ಕನ್ನಡಿ ಹಿಡಿದಿದೆ ಎಂದು ವಿಪಕ್ಷಗಳು ಆರೋಪಿಸಿವೆ.

ಕಾಂಗ್ರೆಸ್ ನಾಯಕ, ವಿರುದುನಗರ ಸಂಸದ ಮಾಣಿಕ್ಕಂ ಟ್ಯಾಗೋರ್ ಅವರು ‘ಎಕ್ಸ್‌’ನಲ್ಲಿ ವೀಡಿಯೊ ಹಂಚಿಕೊಂಡಿದ್ದು, “ಹೊರಗೆ ಪೇಪರ್ ಸೋರಿಕೆ, ಒಳಗೆ ನೀರು ಸೋರಿಕೆ” ಎಂದು ವ್ಯಂಗ್ಯವಾಡಿದ್ದಾರೆ. ಸೋರಿಕೆಗೆ ಕಾರಣಗಳನ್ನು ತನಿಖೆ ಮಾಡಲು ವಿಶೇಷ ಸಮಿತಿಯನ್ನು ರಚಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

Advertisements

“ಹೊಸ ಸಂಸತ್‌ ಭವನ ಯಾಕೆ ಸೋರುತ್ತಿದೆ ಎಂಬುದನ್ನು ತನಿಖೆ ಮಾಡಲು ಸಮಿತಿಯನ್ನು ರಚಿಸಬೇಕು. ಸಮಿತಿಯು ಸಂಸತ್ ಭವನದ ವಿನ್ಯಾಸ ಮತ್ತು ನಿರ್ಮಾಣಕ್ಕೆ ಬಳಸಲಾದ ಸಾಮಗ್ರಿಗಳ ಮೌಲ್ಯಮಾಪನ ಮಾಡಬೇಕು. ಅಗತ್ಯ ದುರಸ್ತಿಗಳನ್ನು ಶಿಫಾರಸು ಮಾಡಬೇಕು. ತನಿಖೆಯಲ್ಲಿ ಕಂಡುಬಂದ ಅಂಶಗಳನ್ನು ಸಾರ್ವಜನಿಕವಾಗಿ ಹಂಚಿಕೊಂಡು, ಪಾರದರ್ಶಕತೆಯನ್ನು ಖಚಿತಪಡಿಸಬೇಕು” ಎಂದು ಟ್ಯಾಗೋರ್ ಆಗ್ರಹಿಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಟೀಕಿಸಿದ್ದಾರೆ. ಹೊಸ ಸಂಸತ್ ಭವನಕ್ಕಿಂತ ಹಳೆಯ ಸಂಸತ್ ಭವನವೇ ಉತ್ತಮ ಎಂದು ಹೇಳಿದ್ದಾರೆ.

“ಈ ಹೊಸ ಸಂಸತ್ತಿಗಿಂತ ಹಳೆಯ ಸಂಸತ್ತು ಉತ್ತಮವಾಗಿತ್ತು. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾದ ಹೊಸ ಸಂಸತ್ತು ಸೋರುತ್ತಿದೆ. ಈ ಸಮಸ್ಯೆಗಳು ಇತ್ಯರ್ಥವಾಗುವವರೆಗೆ ಹಳೆಯ ಸಂಸತ್ತಿಗೆ ಏಕೆ ಹಿಂತಿರುಗಬಾರದು?” ಎಂದು ಅಖಿಲೇಶ್ ಪ್ರಸ್ತಾಪಿಸಿದ್ದಾರೆ.

“1,200 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸಂಸತ್ತು ಈಗ 120 ರೂಪಾಯಿಯ ಬಕೆಟ್ ಮೇಲೆ ಅವಲಂಬಿತವಾಗಿದೆ” ಎಂದು ಆಮ್ ಆದ್ಮಿ ಪಕ್ಷ ಕೂಡ ಕೇಂದ್ರ ಸರ್ಕಾರವನ್ನು ಲೇವಡಿ ಮಾಡಿದೆ.

2020ರ ಡಿಸೆಂಬರ್ 10ರಂದು ಹೊಸ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಮಾಡಿದ್ದರು. 2023ರ ಮೇ 28ರಂದು ಹೊಸ ಸಂಸತ್ ಭವನವನ್ನು ಮೋದಿ ಅವರೇ ಉದ್ಘಾಟಿಸಿದ್ದರು. ಹೊಸ ಸಂಸತ್‌ ಭವನದಲ್ಲಿ 2023ರ ಸೆಪ್ಟೆಂಬರ್‌ನಲ್ಲಿ ಮೊದಲ ಅಧಿವೇಶನ ನಡೆದಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X