ಮೊದಲು ವಿಮಾನದಲ್ಲಿ ಸರಿಯಾಗಿ ಕೂರಲು ಕಲಿಯಿರಿ : ತೇಜಸ್ವಿ ಸೂರ್ಯರನ್ನು ವ್ಯಂಗ್ಯ ಮಾಡಿದ ಪ್ರಿಯಾಂಕ್ ಖರ್ಗೆ

Date:

‘ಕರ್ನಾಟಕ ಅಥವಾ ನನ್ನ ಇಲಾಖೆಗಳ ಬಗ್ಗೆ ಚಿಂತಿಸಬೇಡಿ, ಅದು ಸುರಕ್ಷಿತರ ಕೈಯಲ್ಲಿದೆ. ನೀವು ಮೊದಲು ವಿಮಾನದಲ್ಲಿ ಸರಿಯಾಗಿ ಕೂರಲು ಕಲಿಯಿರಿ’ ಎಂದು ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯರಿಗೆ ಟಾಂಗ್ ನೀಡಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರ ಮಾಡಿ ಟ್ವೀಟ್ ಮಾಡಿದ್ದ ಆರೋಪದ ಮೇರೆಗೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಪ್ರಿಯಾಂಕ್ ಖರ್ಗೆ ಇತ್ತೀಚೆಗೆ ದೂರು ನೀಡಿದ್ದರು. ಆ ಬಳಿಕ ಪೊಲೀಸರು ಎಫ್‌ಐಆರ್ ಕೂಡ ದಾಖಲಿಸಿದ್ದರು. ಹೀಗಾಗಿ, ಮಾಳವೀಯ ಪರವಾಗಿ, ವಕೀಲರೂ ಆಗಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೈಕೋರ್ಟಿನಲ್ಲಿ ವಾದ ಮಂಡಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಎಫ್‌ಐಆರ್‍‌ಗೆ ಮಧ್ಯಂತರ ತಡೆಯನ್ನು ನೀಡಿತ್ತು. ಆ ಬಳಿಕ ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ‘ಕನಿಷ್ಠ ಈಗಲಾದರೂ ತಮ್ಮ ಸೇಡಿನ ರಾಜಕಾರಣವನ್ನು ನಿಲ್ಲಿಸಿ. ನಿಮ್ಮ ಸಚಿವ ಸ್ಥಾನದ ಮೇಲೆ ಗಮನ ಹರಿಸಿ’ ಎಂದು ಪ್ರಿಯಾಂಕ್ ಖರ್ಗೆಯವರಿಗೆ ಟ್ಯಾಗ್ ಮಾಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದಕ್ಕೆ ಉತ್ತರ ನೀಡಿರುವ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ‘ ಕರ್ನಾಟಕ ಅಥವಾ ನನ್ನ ಇಲಾಖೆಗಳ ಬಗ್ಗೆ ಚಿಂತಿಸಬೇಡಿ. ಅದು ಸುರಕ್ಷಿತರ ಕೈಯಲ್ಲಿದೆ. ನೀವು ತಪ್ಪು ಮಾಹಿತಿ ಹರಡಿದರೆ ನಿಮ್ಮ ಸಹೋದ್ಯೋಗಿಗಳು ಮತ್ತು ನೀವು ದೇಶದ ಕಾನೂನನ್ನು ಎದುರಿಸಬೇಕಾಗುತ್ತದೆ’ ಎಂಬುದು ನೆನಪಿರಲಿ ಎಂದು ಎಚ್ಚರಿಸಿದ್ದಾರೆ.

‘ರಾಜಕೀಯ ಸೇಡಿನ’ ವಿರುದ್ಧ ನೆರವು ಪಡೆಯಲು ನೀವು ಪ್ರಾರಂಭಿಸಿದ ಸಹಾಯವಾಣಿಗೆ ಎಷ್ಟು ಜನರು ಕರೆ ಮಾಡಿದ್ದಾರೆ ಎಂಬುದನ್ನು ದಯವಿಟ್ಟು ರಾಜ್ಯಕ್ಕೆ ತಿಳಿಸುವಿರಾ? ಎಂದು ಸಂಸದರನ್ನು ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ, ‘ನೀವು ರಾಜ್ಯಕ್ಕಾಗಿ ಮಾಡಬಹುದಾದ ಪ್ರಮುಖ ಕೆಲಸಗಳು ಯಾವುದೆಂದರೆ, ನಮಗೆ ಕೇಂದ್ರ ಸರ್ಕಾರ ನೀಡಬೇಕಾದ ಹಣವನ್ನು ಬಿಡುಗಡೆ ಮಾಡಲು ಕೇಳೋದು, ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕನನ್ನು ಆರಿಸುವುದು ಮತ್ತು ನೀವು ಮೊದಲು ವಿಮಾನದಲ್ಲಿ ಕುಳಿತುಕೊಳ್ಳಲು ಕಲಿಯೋದು’ ಎಂದು ಖಡಕ್ ಉತ್ತರ ನೀಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ವಿಮಾನದಲ್ಲಿ ಪ್ರಯಾಣಿಸುವಾಗ ತುರ್ತು ನಿರ್ಗಮನದ ಬಾಗಿಲು ತೆಗೆಯಲು ಯತ್ನಿಸಿದ್ದ ಸುದ್ದಿ ಭಾರೀ ಇತ್ತೀಚೆಗೆ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

‘ಬಜೆಟ್ ಪಕ್ಷಪಾತ, ರಾಜ್ಯಗಳನ್ನು ವಿಭಜಿಸುವ ಪಿತೂರಿ’; ನೀತಿ ಆಯೋಗ ಸಭೆಯಲ್ಲಿ ಪ್ರತಿಭಟನೆಗೆ ಮಮತಾ ಸಜ್ಜು

ಜುಲೈ 27 ರಂದು ದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವುದಾಗಿ...