ತನಿಖಾ ಸಂಸ್ಥೆಗಳು ಪ್ರಜ್ವಲ್ ರೇವಣ್ಣ ಅವರಂತಹವರನ್ನು ಬಿಟ್ಟು ನಮ್ಮಂತಹವರನ್ನು ಬಂಧಿಸುತ್ತಿವೆ ಎಂದು ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೆ.ಕವಿತಾ ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ. ಇಂದು (ಮೇ 7) ರೌಸ್ ಅವೆನ್ಯೂ ಕೋರ್ಟ್‌ನಿಂದ ನಿರ್ಗಮಿಸುತ್ತಿದ್ದ ಸಂದರ್ಭದಲ್ಲಿ ಕೆ. ಕವಿತಾ ಅವರು ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಪ್ರಸ್ತಾಪ ಮಾಡಿದ್ದಾರೆ.
#WATCH | Delhi excise policy case | BRS leader K Kavitha leaves from Rouse Avenue Court, says, “Investigation agencies are leaving people like Prajwal Revanna and arresting people like us.” pic.twitter.com/LEVyiUEnrf
— ANI (@ANI) May 7, 2024
ಪ್ರಜ್ವಲ್ ರೇವಣ್ಣ ಅವರು ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆಸಿ ಅದರ ವಿಡಿಯೋ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನು ಓದಿದ್ದೀರಾ? ದೆಹಲಿ ಅಬಕಾರಿ ನೀತಿ ಪ್ರಕರಣ | ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಿಸಿದ ಕೋರ್ಟ್
ಪ್ರಸ್ತುತ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದು ಜರ್ಮನಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ಈ ಪ್ರಕರಣದ ತನಿಖೆಗಾಗಿ ರೂಪಿಸಲಾಗಿರುವ ಎಸ್‌ಐಟಿ ತಂಡವು ಸಂತ್ರಸ್ತೆಯರಿಗೆ ಸಹಾಯವಾಣಿ ಬಿಡುಗಡೆ ಮಾಡಿದ್ದು, ಪ್ರಜ್ವಲ್ ವಿರುದ್ಧ ದೂರು ದಾಖಲಿಸಲಾಗುತ್ತಿದೆ.
ಇನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ, ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕಲ್ವಕುಂಟ್ಲ ಕವಿತಾ ಅವರ ಜಾಮೀನು ಅರ್ಜಿಯನ್ನು ಸೋಮವಾರ ಕೋರ್ಟ್ ಮತ್ತೆ ವಜಾಗೊಳಿಸಿದೆ.
ಮಾರ್ಚ್ 15 ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇಡಿ ಕವಿತಾ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿಂದೆ ಸುಪ್ರೀಂ ಕೋರ್ಟ್ ಕೂಡಾ ಕವಿತಾ ಜಾಮೀನು ಅರ್ಜಿ ವಜಾಗೊಳಿಸಿದೆ. ಅದಾದ ಬಳಿಕ ದೆಹಲಿ ನ್ಯಾಯಾಲಯವು ಮಧ್ಯಂತರ ಜಾಮೀನು ನಿರಾಕರಿಸಿತ್ತು.