ಪ್ರಜ್ವಲ್ ರೇವಣ್ಣನಂತವರನ್ನು ಬಿಟ್ಟು ನಮ್ಮನ್ನು ಬಂಧಿಸುತ್ತಾರೆ: ಬಿಆರ್‌ಎಸ್ ನಾಯಕಿ ಕವಿತಾ

Date:

ತನಿಖಾ ಸಂಸ್ಥೆಗಳು ಪ್ರಜ್ವಲ್ ರೇವಣ್ಣ ಅವರಂತಹವರನ್ನು ಬಿಟ್ಟು ನಮ್ಮಂತಹವರನ್ನು ಬಂಧಿಸುತ್ತಿವೆ ಎಂದು ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೆ.ಕವಿತಾ ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ. ಇಂದು (ಮೇ 7) ರೌಸ್ ಅವೆನ್ಯೂ ಕೋರ್ಟ್‌ನಿಂದ ನಿರ್ಗಮಿಸುತ್ತಿದ್ದ ಸಂದರ್ಭದಲ್ಲಿ ಕೆ. ಕವಿತಾ ಅವರು ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಪ್ರಸ್ತಾಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರಜ್ವಲ್ ರೇವಣ್ಣ ಅವರು ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ನಡೆಸಿ ಅದರ ವಿಡಿಯೋ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನು ಓದಿದ್ದೀರಾ?  ದೆಹಲಿ ಅಬಕಾರಿ ನೀತಿ ಪ್ರಕರಣ | ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಿಸಿದ ಕೋರ್ಟ್‌

ಪ್ರಸ್ತುತ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದು ಜರ್ಮನಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ಈ ಪ್ರಕರಣದ ತನಿಖೆಗಾಗಿ ರೂಪಿಸಲಾಗಿರುವ ಎಸ್‌ಐಟಿ ತಂಡವು ಸಂತ್ರಸ್ತೆಯರಿಗೆ ಸಹಾಯವಾಣಿ ಬಿಡುಗಡೆ ಮಾಡಿದ್ದು, ಪ್ರಜ್ವಲ್ ವಿರುದ್ಧ ದೂರು ದಾಖಲಿಸಲಾಗುತ್ತಿದೆ.

ಇನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ, ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕಲ್ವಕುಂಟ್ಲ ಕವಿತಾ ಅವರ ಜಾಮೀನು ಅರ್ಜಿಯನ್ನು ಸೋಮವಾರ ಕೋರ್ಟ್ ಮತ್ತೆ ವಜಾಗೊಳಿಸಿದೆ.

ಮಾರ್ಚ್ 15 ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇಡಿ ಕವಿತಾ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿಂದೆ ಸುಪ್ರೀಂ ಕೋರ್ಟ್‌ ಕೂಡಾ ಕವಿತಾ ಜಾಮೀನು ಅರ್ಜಿ ವಜಾಗೊಳಿಸಿದೆ. ಅದಾದ ಬಳಿಕ ದೆಹಲಿ ನ್ಯಾಯಾಲಯವು ಮಧ್ಯಂತರ ಜಾಮೀನು ನಿರಾಕರಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...