ಇಸ್ರೇಲ್ ವಿರುದ್ಧ ದಾಳಿಗೆ ‘ಹಮಾಸ್’ ಜೊತೆಗೆ ಕೈ ಜೋಡಿಸಿದ ಲೆಬನಾನ್‌ನ ‘ಹಿಜ್ಬುಲ್ಲಾ’

Date:

ಇಸ್ರೇಲ್ ವಿರುದ್ಧ ಶನಿವಾರದಿಂದ ದಾಳಿ ನಡೆಸುತ್ತಿರುವ ‘ಹಮಾಸ್’ ಜೊತೆಗೆ ಕೈ ಜೋಡಿಸಿರುವ ಲೆಬನಾನ್‌ನ ‘ಹಿಜ್ಬುಲ್ಲಾ’ ಸಂಘಟನೆಯು, ಇಸ್ರೇಲ್‌ನ ವಿರುದ್ಧ ಬಾಂಬ್ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ.

- Advertisement -

ಭಾನುವಾರ ಬೆಳಗ್ಗೆ ದಕ್ಷಿಣ ಲೆಬನಾನ್‌ನ ಬಳಿ ಇರುವ ಇಸ್ರೇಲಿನ ಮೂರು ಸೇನಾ ಹೊರಠಾಣೆಗಳ ಮೇಲೆ ಶೆಲ್‌ಗಳಿಂದ ಬಾಂಬ್ ದಾಳಿ ಮಾಡಿರುವುದಾಗಿ ಲೆಬನಾನ್‌ನ ‘ಹಿಜ್ಬುಲ್ಲಾ’ ಸಂಘಟನೆ ಹೇಳಿಕೊಂಡಿದೆ. ಅಲ್ಲದೇ, ದಾಳಿ ನಡೆಸಿರುವ ವಿಡಿಯೋ ಕೂಡ ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಾಂಬ್ ಹಾಕಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇಸ್ರೇಲ್‌ನ ಸೇನಾ ಔಟ್‌ಪೋಸ್ಟ್‌ಗಳ ಮೇಲೆ ಬಾಂಬ್‌ಗಳನ್ನು ಹಾರಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ಇಸ್ರೇಲಿನ ಮಿಲಿಟರಿ ಹೊರಠಾಣೆಗಳನ್ನು ಗುರಿಯಾಗಿಸಿಕೊಂಡು ಶೆಲ್‌ ಹಾಗೂ ಕ್ಷಿಪಣಿಗಳನ್ನು ಹಾರಿಸಿದ್ದೇವೆ. ರಾಡಾರ್ ಕೇಂದ್ರವನ್ನು ನಿಷ್ಕ್ರಿಯಗೊಳಿಸಿದ್ದೇವೆ ಎಂದು ಹಿಜ್ಬುಲ್ಲಾ ಹೇಳಿಕೊಂಡಿದೆ.

ಇಸ್ರೇಲ್‌ನ ರಾಡಾರ್ ಕೇಂದ್ರವನ್ನು ನೇರವಾಗಿ ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ ಎಂಬ ವರದಿಗಳೂ ಇವೆ. ಸಿಗ್ನಲಿಂಗ್ ಟವರ್ ಗಳಿರುವ ಪ್ರದೇಶದಲ್ಲಿ ಸ್ಫೋಟಗಳು ನಡೆಯುತ್ತಿರುವುದು ವಿಡಿಯೋದಲ್ಲಿ ಕಂಡು ಬರುತ್ತಿದೆ.

ಇಸ್ರೇಲಿ ಸೇನೆಯು ಲೆಬನಾನ್‌ನ ಗಡಿಯುದ್ದಕ್ಕೂ ಬೀಡುಬಿಟ್ಟಿದ್ದು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳು ಸೈನ್ಯದ ಅಧಿಕಾರಿಗಳಿಗೆ ತಿಳಿಸಿದ್ದು, ಯುದ್ಧಕ್ಕೆ ಸಿದ್ಧರಾಗಿರಬೇಕು ಎಂದು ಆದೇಶಗಳನ್ನು ನೀಡಲಾಗಿದೆ ಎಂದು ವರದಿಯಾಗಿದೆ.

ಹಮಾಸ್ ಜೊತೆಗೆ ಹಿಜ್ಬುಲ್ಲಾ ಸಂಘಟನೆ ಕೈ ಜೋಡಿಸಿರುವುದು ಇಸ್ರೇಲ್ ಅನ್ನು ಕೆರಳಿಸಿದ್ದು, ಇದು ಮತ್ತಷ್ಟು ದೀರ್ಘ ಕಾಲದ ಯುದ್ಧದ ಮುನ್ಸೂಚನೆಯನ್ನು ನೀಡಿದೆ.

war

ಇಸ್ರೇಲ್ ಹಾಗೂ ಪ್ಯಾಲೆಸ್ತೀನಿನ ಹಮಾಸ್‌ ನಡುವೆ ನಡೆಯುತ್ತಿರುವ ಯುದ್ಧವು ಅತ್ಯಂತ ವಿನಾಶಕಾರಿ ತಿರುವು ಪಡೆಯುತ್ತಿದ್ದು, ಈವರೆಗೂ ಈ ಯುದ್ಧದಲ್ಲಿ ಕನಿಷ್ಠ 500ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಮಾಹಿತಿಯ ಪ್ರಕಾರ, ಈ ಯುದ್ಧದಲ್ಲಿ ಇದುವರೆಗೆ ಇಸ್ರೇಲ್‌ವೊಂದರಲ್ಲಿ ಕನಿಷ್ಠ 300ಕ್ಕೂ ಅಧಿಕ ಇಸ್ರೇಲಿಯನ್ನರು ಸಾವನ್ನಪ್ಪಿದ್ದು, 1750 ಜನ ಗಾಯಗೊಂಡಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಗಾಝಾ ಮೇಲೆ ಇಸ್ರೇಲ್ ನಡೆಸಿದ ಪ್ರತಿದಾಳಿಯಲ್ಲಿ 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇಸ್ರೇಲ್ ಹಿಂದೆಂದೂ ಕಂಡಿರದ ಐತಿಹಾಸಿಕ ದುರಂತವನ್ನು ಕಂಡಿದೆ. ಕೇವಲ 20 ನಿಮಿಷಗಳಲ್ಲಿ ಇಸ್ರೇಲ್ ಮೇಲೆ 5 ಸಾವಿರ ರಾಕೆಟ್​ಗಳನ್ನು ಹಾರಿಸಿರುವುದಾಗಿ ನಿನ್ನೆ ಹಮಾಸ್ ವಿಡಿಯೋ ಬಿಡುಗಡೆ ಮಾಡಿತ್ತು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...