ಜೆಎನ್‌ಯು ವಿವಿ ವಿದ್ಯಾರ್ಥಿ ಘಟಕ ಚುನಾವಣೆ: ಎಡ ಸಂಘಟನೆಗಳಿಗೆ ಭರ್ಜರಿ ಜಯ, ಎಬಿವಿಪಿಗೆ ಮುಖಭಂಗ

Date:

ದೇಶದ ಪ್ರಸಿದ್ಧ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ದೆಹಲಿಯ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದ(ಜೆಎನ್‌ಯು) ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಎಡ-ವಿದ್ಯಾರ್ಥಿ ಸಂಘಟನೆಗಳು ಈ ಬಾರಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆರ್‌ಎಸ್‌ಎಸ್‌ನ ವಿದ್ಯಾರ್ಥಿ ಘಟಕ ಎಬಿವಿಪಿಗೆ ಮುಖಭಂಗವಾಗಿದೆ.

- Advertisement -

ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ (ಜೆಎನ್‌ಯುಎಸ್‌ಯು) ಚುನಾವಣೆಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್‌ಎ), ಭಾರತ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ) ಮತ್ತು ಡೆಮಾಕ್ರಟಿಕ್ ವಿದ್ಯಾರ್ಥಿ ಒಕ್ಕೂಟ (ಡಿಎಸ್‌ಎಫ್) ಮೈತ್ರಿಕೂಟ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳನ್ನು ಗೆದ್ದಿದೆ. ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ. 67ರಷ್ಟು ಮತದಾನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನು ಓದಿದ್ದೀರಾ? ಜೈಲಿನಲ್ಲಿರುವ ಜೆಎನ್‌ಯು ವಿದ್ಯಾರ್ಥಿ ನಾಯಕ ಶಾರ್ಜೀಲ್ ಇಮಾಮ್ ಬಿಹಾರ ಚುನಾವಣೆಯಲ್ಲಿ ಸ್ಪರ್ಧೆ

ಆರ್‌ಎಸ್‌ಎಸ್‌ ವಿದ್ಯಾರ್ಥಿ ಘಟಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ. ಏಪ್ರಿಲ್‌ನಲ್ಲಿ ನಡೆದ ಕೊನೆಯ ಚುನಾವಣೆಯಲ್ಲಿ ಎಬಿವಿಪಿ ಜಂಟಿ ಕಾರ್ಯದರ್ಶಿ ಸ್ಥಾನವನ್ನು ಗೆದ್ದಿತ್ತು. ಗುರುವಾರ ನಡೆದ ಚುನಾವಣೆಯಲ್ಲಿ ಗೆಲ್ಲುವಲ್ಲಿ ವಿಫಲವಾಗಿದೆ. ಆದರೆ ಎರಡನೇ ಸ್ಥಾನದಲ್ಲಿದೆ.

ಎಡಪಂಥೀಯ ವಿದ್ಯಾರ್ಥಿ ಸಂಘಟನೆಯ ಅದಿತಿ ಮಿಶ್ರಾ ಅವರು ಎಬಿವಿಪಿಯ ವಿಕಾಶ್ ಪಟೇಲ್ ವಿರುದ್ಧ ಅಧ್ಯಕ್ಷ ಸ್ಥಾನವನ್ನು ಗೆದ್ದರೆ, ಎಲ್‌ಯುನ ಕೆ. ಗೋಪಿಕಾ, ಸುನಿಲ್ ಯಾದವ್ ಮತ್ತು ಡ್ಯಾನಿಶ್ ಅಲಿ ಉಪಾಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಕೌನ್ಸಿಲರ್ ಹುದ್ದೆಗಳ ಪೈಕಿ, ಎಡ ಸಂಘಟನೆಗಳು ಒಟ್ಟು ಸುಮಾರು 30 ಸ್ಥಾನಗಳಲ್ಲಿ ಗೆಲವು ಸಾಧಿಸಿದೆ.

ಏಪ್ರಿಲ್‌ನಲ್ಲಿ ನಡೆದ ಚುನಾವಣೆಯಲ್ಲಿ ಎಡ ಸಂಘಟನೆಗಳು ಪ್ರತ್ಯೇಕವಾಗಿ ಚುನಾವಣೆ ಕಣಕ್ಕೆ ಇಳಿದಿತ್ತು. ಎಐಎಸ್‌ಎ ಮತ್ತು ಡಿಎಸ್‌ಎಫ್ ಮೈತ್ರಿ ಮಾಡಿಕೊಂಡಿದ್ದರೆ, ಎಸ್‌ಎಫ್‌ಐ ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟ (ಎಐಎಸ್‌ಎಫ್), ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘ (ಬಿಎಪಿಎಸ್‌ಎ) ಮತ್ತು ಪ್ರಗತಿಶೀಲ ವಿದ್ಯಾರ್ಥಿ ಸಂಘ (ಪಿಎಸ್‌ಎ) ಪ್ರತ್ಯೇಕವಾಗಿ ಮೈತ್ರಿಮಾಡಿಕೊಂಡಿತ್ತು. ಆದರೆ ಈ ಚುನಾವಣೆ ವೇಳೆಗೆ ಎಲ್ಲಾ ಎಡ ಸಂಘಟನೆಗಳು ಜತೆಯಾಗಿದೆ.

ಇದನ್ನು ಓದಿದ್ದೀರಾ? ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳು ರದ್ದು; ನ್ಯಾಯಾಂಗ ಕೊಟ್ಟ ಸಂದೇಶವೇನು?

ಜೆಎನ್‌ಯುಎಸ್‌ಯು ಅಧ್ಯಕ್ಷೀಯ ಚುನಾವಣೆಯಲ್ಲಿ, ಎಡ ಮೈತ್ರಿಕೂಟದ ಅದಿತಿ ಮಿಶ್ರಾ 1,937 ಮತಗಳನ್ನು ಪಡೆದಿದ್ದರೇ, ಎಬಿವಿಪಿಯ ವಿಕಾಸ್ ಪಟೇಲ್ 1,488 ಮತಗಳನ್ನು ಪಡೆದಿದ್ದಾರ. ಅಧ್ಯಕ್ಷೆಯಾಗಿರುವ ಅದಿತಿ ಮಿಶ್ರಾ ಅವರು ಎಬಿವಿಪಿಯ ವಿಕಾಸ್ ಪಟೇಲ್ ಅವರನ್ನು 449 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಡಪಕ್ಷದ ಕೆ. ಗೋಪಿಕಾ ಬಾಬು ಅವರು 3,101 ಮತಗಳನ್ನು ಪಡೆದರೆ, ಎಬಿವಿಪಿ ಅಭ್ಯರ್ಥಿ ತಾನ್ಯಾ ಕುಮಾರಿ ಅವರು 1,787 ಮತಗಳನ್ನು ಪಡೆದರು. ಜಂಟಿ ಕಾರ್ಯದರ್ಶಿ ಚುನಾವಣೆಯಲ್ಲಿ, ಡ್ಯಾನಿಶ್ ಅಲಿ (ಎಡ) 2,083 ಮತಗಳನ್ನು ಪಡೆದರೆ, ಎಬಿವಿಪಿಯ ಅನುಜ್ ಡಮಾರಾ 1,797 ಮತಗಳನ್ನು ಪಡೆದಿದ್ದಾರೆ.

ಜೆಎನ್‌ಯು ವಿದ್ಯಾರ್ಥಿ ಚುನಾವಣೆಯಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿನಿ ಗೌರಿ School of Social Science (SSS)ನಲ್ಲಿ ಕೌನ್ಸಿಲರ್ ಸ್ಥಾನದಲ್ಲಿ ಗರಿಷ್ಠ ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ. 5 ಕೌನ್ಸಿಲರ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಗೌರಿ ಇತರರಗಿಂತ ಅತಿ ಹೆಚ್ಚು ಅಂದರೆ, ಒಟ್ಟು 1200 ಮತಗಳಲ್ಲಿ, ಸುಮಾರು 723 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. 1999ರಲ್ಲಿ ಬಳ್ಳಾರಿ ಮೂಲದ ಸಯ್ಯದ್ ನಾಸಿರ್ ಹುಸೆನ್ JNU ವಿದ್ಯಾರ್ಥಿ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ SFIಯಿಂದ ಸ್ಫರ್ಧಿಸಿ ವಿಜಯಶಾಲಿಯಾಗಿದ್ದರು. ತದನಂತರ ಕರ್ನಾಟಕದಿಂದ ಯಾರು ಕೂಡ JNU ವಿದ್ಯಾರ್ಥಿ ಚುನಾವಣೆಯಲ್ಲಿ ಗೆಲುವು ಸಾಧಿಸಿರಲಿಲ್ಲ. ಈ ಬಾರಿ ಕರ್ನಾಟಕ ಮೂಲಕ ಗೌರಿ ಅವರು ಗೆಲುವು ಸಾಧಿಸಿದ್ದಾರೆ.

ಈ ಬಾರಿ ನಡೆದ ಚುನಾವಣೆಯಲ್ಲಿ ಒಟ್ಟು 9,043 ಮತದಾರರಲ್ಲಿ ಶೇ. 67 ರಷ್ಟು ಮಂದಿ ಮತ ಚಲಾಯಿಸಿದ್ದರು. ಕಳೆದ ವರ್ಷ ಶೇ. 70ರಷ್ಟು ಮತದಾನವಾಗಿತ್ತು. ಚುನಾವಣೆಗಳಲ್ಲಿ ವಿದ್ಯಾರ್ಥಿಗಳು ಡ್ರಮ್ ಬಾರಿಸುತ್ತಾ, ಘೋಷಣೆಗಳನ್ನು ಕೂಗುತ್ತಾ ಮತ್ತು ಕ್ಯಾಂಪಸ್‌ನಾದ್ಯಂತ ಸಂಭ್ರಮಾಚರಣೆಯನ್ನು ಮಾಡಿದ್ದಾರೆ.

ಈ ಚುನಾವಣೆ ಬಗ್ಗೆ ಮಾತನಾಡಿದ ಜೆಎನ್‌ಯುಎಸ್‌ಯುನ ಮಾಜಿ ಅಧ್ಯಕ್ಷ ಸಾಯಿ ಬಾಲಾಜಿ, “ಎಬಿವಿಪಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಮತ್ತು ಅವರ ಸಿದ್ಧಾಂತ ಮತ್ತು ರಾಜಕೀಯದ ವಿರುದ್ಧ ವಿದ್ಯಾರ್ಥಿ ನೀಡಿದ ಹೇಳಿಕೆ ಇದಾಗಿದೆ” ಎಂದು ಹೇಳಿದ್ದಾರೆ.

ಕಳೆದ ಬಾರಿ (2024) ನಡೆದ ಚುನಾವಣೆಯಲ್ಲಿಯೂ ಕೂಡ ಎಡ-ವಿದ್ಯಾರ್ಥಿ ಸಂಘಟನೆಗಳೇ ಮೆಲುಗೈ ಸಾಧಿಸಿದ್ದವು. ಸುಮಾರು 30 ವರ್ಷಗಳ ಬಳಿಕ ಜೆಎನ್‌ಯುನಲ್ಲಿ ದಲಿತ ವಿದ್ಯಾರ್ಥಿ ಅಧ್ಯಕ್ಷರಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...