ಷಡ್ಯಂತ್ರದ ಹಿಂದಿರುವವರ ವಿರುದ್ಧ ಕಾನೂನು ಕ್ರಮ : ಎನ್‌ ಚಲುವರಾಯಸ್ವಾಮಿ ಎಚ್ಚರಿಕೆ

Date:

Advertisements
  • ‘ಕುತಂತ್ರದ ಹಿಂದೆ ಯಾರಿದ್ದಾರೆ ಎಂಬುದು ಜನರಿಗೂ ಗೊತ್ತು’
  • ‘ಸತ್ಯಕ್ಕೆ ದೂರವಾದ ಯಾವ ಕುತಂತ್ರಗಳು ಫಲ ನೀಡುವುದಿಲ್ಲ’

ಹೇಗಾದರೂ ಮಾಡಿ ನನ್ನನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ವ್ಯವಸ್ಥಿತವಾಗಿ ಷಡ್ಯಂತ್ರ ಮತ್ತು ಪಿತೂರಿ ನಡೆಯುತ್ತಿದೆ. ನನ್ನನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿರುವ ಈ ಕುತಂತ್ರದ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ಹೆಸರು ಹೇಳುವ ಅವಶ್ಯಕತೆಯಿಲ್ಲ ಎಂದು ಕೃಷಿ ಸಚಿವ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ತಮ್ಮ ಮೇಲಿನ ಆರೋಪದ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿರುವ ಅವರು, “ನನ್ನ ವಿರುದ್ಧ ವಿರೋಧಿಗಳು ನಡೆಸುತ್ತಿರುವ ಷಡ್ಯಂತ್ರಗಳು ಫಲ ನೀಡುವುದಿಲ್ಲ. ಜನರು ರಾಜಕೀಯವಾಗಿ ಪ್ರಬುದ್ಧರಿದ್ದು ನನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವುದು ಯಾರೆಂದು ಅವರೇ ನಿರ್ಧರಿಸುತ್ತಾರೆ” ಎಂದಿದ್ದಾರೆ.

“ಸರ್ಕಾರ ಬದಲಾವಣೆ ಆದಾಗ ಸರ್ಕಾರಿ ನೌಕರರ ವರ್ಗಾವಣೆ ಒಂದು ಸಾಮಾನ್ಯ ಪ್ರಕ್ರಿಯೆ. ಇದು ಎಲ್ಲ ಹೊಸ ಸರ್ಕಾರಗಳು ಬಂದಾಗಲೂ ಸಹಜವಾಗಿ ನಡೆದಿವೆ. ಆದರೆ ನಾನು ಮೊದಲಿನಿಂದಲೂ ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಕೊಟ್ಟಿಲ್ಲ. ನನ್ನ ಬಗ್ಗೆ ಬಹಳ ದ್ವೇಷ ಹೊಂದಿರುವ ಜನ ಹೇಗಾದರೂ ಸರಿ ನನ್ನ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತರುವ ಪ್ರಯತ್ನದ ಭಾಗವಾಗಿ ನಕಲಿ ಪತ್ರಗಳನ್ನು ಸೃಷ್ಟಿಸಿ ಸದರಿ ನಕಲಿ ಪತ್ರಗಳ ಆಧಾರದ ಮೇಲೆ ನೌಕರರನ್ನು ನೆಪವಾಗಿಸಿ ಷಡ್ಯಂತ್ರ ರೂಪಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

Advertisements

ಕಟ್ಟುನಿಟ್ಟಿನ ಕಾನೂನು ಕ್ರಮ

“ಈ ಷಡ್ಯಂತ್ರದ ಹಿಂದಿರುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಲಿದೆ. ಈಗಾಗಲೇ ರಾಜ್ಯದ ಜನತೆಗೆ ನನ್ನ ವಿರುದ್ಧ ಯಾರೆಲ್ಲ ಏನೇನು ರಾಜಕೀಯ ಮಸಲತ್ತು ನಡೆಸಿದ್ದಾರೆಂದು ತಿಳಿದಿದೆ. ಇದು ಸಹ ಅಂತಹುದೇ ಮುಂದುವರಿದ ಭಾಗ ಅಷ್ಟೇ. ನೇರವಾಗಿ ನನ್ನನ್ನು ಎದುರಿಸಲಾಗದೆ ನನ್ನ ವಿರುದ್ಧ ಈ ರೀತಿಯ ಕ್ಷುಲ್ಲಕ ರಾಜಕೀಯ ಮಾಡಲಾಗುತ್ತಿದೆ” ಎಂದು ಹರಿಹಾಯ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲಂಚ ಆರೋಪ; ತನಿಖೆಗೆ ಸಚಿವ ಚಲುವರಾಯಸ್ವಾಮಿ ಒತ್ತಾಯ

“ಕೃಷಿ ಖಾತೆಯ ಸಚಿವನಾಗಿ ರಾಜ್ಯದಲ್ಲಿ ಮಾಡಬಹುದಾದ ಬಹಳಷ್ಟು ಕೆಲಸವಿದ್ದು, ಆ ಬಗ್ಗೆ ನನಗೆ ನನ್ನದೇ ಆದ ಕನಸುಗಳಿವೆ. ನನ್ನ ಖಾತೆಯ ಇತಿ ಮಿತಿಯೊಳಗೆ ನಾನು ರೈತರಿಗೆ ನೆರವಾಗಬಹುದಾದ ಅನೇಕ ಕಾರ್ಯಕ್ರಮಗಳನ್ನು ಮಾಡಲು ಯೋಜಿಸಲಾಗಿದೆ. ಇಂತಹ ಸಂದರ್ಭದಲ್ಲಿ ನನಗೆ ಮತ್ತಷ್ಟು ಹೆಸರು ಬರುವುದೆಂಬ ಭಯ ಮತ್ತು ಹತಾಶೆಯಿಂದ ಕೆಲವರು ಈ ಷಡ್ಯಂತ್ರದ ರಾಜಕಾರಣ ನಡೆಸುತ್ತಿದ್ದಾರೆ. ಸತ್ಯಕ್ಕೆ ದೂರವಾಗಿರುವ ಅವರ ಈ ಯಾವ ಕುತಂತ್ರಗಳು ಫಲ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಕೃಷಿಯನ್ನೇ ನಂಬಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಶೇ.70 ರಷ್ಟು ಜನರು ಜೀವನ ನಡೆಸುತ್ತಿದ್ದಾರೆ. ಇಂತಹ ಮಹತ್ವದ ಕ್ಷೇತ್ರದಲ್ಲಿ ಒಂದಷ್ಟು ಸೇವೆ ಮಾಡುವ ಅವಕಾಶ ನನಗೆ ರಾಜಕೀಯವಾಗಿ ದೊರೆತಿದೆ. ನಾನೂ ಸಹ ಕೃಷಿಕ ಕುಟುಂಬದಿಂದಲೇ ಬಂದವನಾಗಿದ್ದು, ನನಗೆ ಲಭಿಸಿರುವ ಉತ್ತಮ ಅವಕಾಶ ಬಳಸಿಕೊಂಡು ಕರ್ನಾಟಕದ ರೈತರಿಗೆ ಕೃಷಿ ಮಂತ್ರಿಯಾಗಿ ಏನೆಲ್ಲಾ ಸೇವೆ ಮಾಡಲು ಸಾಧ್ಯವಿದೆಯೋ ಆ ಎಲ್ಲ ಸೇವೆ ಸಲ್ಲಿಸಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿರುವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X