ವಿಧಾನಮಂಡಲ ಅಧಿವೇಶನ ಒಂದು ದಿನ ವಿಸ್ತರಣೆ; ಸೋಮವಾರಕ್ಕೆ ಕಲಾಪ ಮುಂದೂಡಿಕೆ

Date:

Advertisements

ವಿಧಾನಮಂಡಲ ಅಧಿವೇಶನವನ್ನು ಒಂದು ದಿನದ ಕಾಲ ವಿಸ್ತರಣೆ ಮಾಡಲಾಗಿದ್ದು, ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಸಭಾಧ್ಯಕ್ಷ ಯು ಟಿ ಖಾದರ್‌ ಮುಂದೂಡಿದರು.

ಅಧಿವೇಶನವನ್ನು ಮುಂದೂಡುವ ತೀರ್ಮಾನವನ್ನು ಕಾರ್ಯ ಕಲಾಪಗಳ ಸಲಹಾ ಸಮಿತಿ ಸಭೆ (ಬಿಎಸಿ)ಯಲ್ಲಿ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನ ಕೈಕೊಳ್ಳಲಾಗಿದೆ.

ಗುರುವಾರ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಬಜೆಟ್‌ ಮೇಲೆ ಭಾಷಣ ಮಾಡಿದ್ದರು. ಇನ್ನು ಹಲವು ನಾಯಕರು ಬಜೆಟ್‌ ಮೇಲೆ ಭಾಷಣ ಮಾಡಬೇಕಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮೇಲೆ ಚರ್ಚೆಗೆ ಉತ್ತರ ನೀಡಬೇಕಿತ್ತು. ಆದರೆ ಸಮಯಾವಕಾಶದ ಕೊರತೆ ಹಿನ್ನೆಲೆಯಲ್ಲಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

Advertisements

ಮುಂದುವರಿದ ಧರಣಿ

ತೆರಿಗೆ ಅನ್ಯಾಯ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸಿರುವುದನ್ನು ವಿರೋಧಿಸಿd ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಎದುರು ಧರಣಿ ಮುಂದುವರಿಸಿದರು. ಹತ್ತು ನಿಮಿಷ ಕಲಾಪ ಮುಂದೂಡಿದ ಸಭಾಧ್ಯಕ್ಷ ಯು.ಟಿ. ಖಾದರ್, ತಮ್ಮ ಕಚೇರಿಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಮಧ್ಯೆ ಸಂಧಾನಕ್ಕೆ ಯತ್ನಿಸಿದರು.

ಆದರೆ, ಬಿಜೆಪಿ ಸದಸ್ಯರು ಪಟ್ಟು ಸಡಿಲಿಸದ ಕಾರಣ ಸಂಧಾನ ಯತ್ನ ವಿಫಲವಾಯಿತು. ಪುನಃ ಕಲಾಪ ಆರಂಭವಾದಾಗಲೂ ವಿರೋಧ ಪಕ್ಷಗಳ ಸದಸ್ಯರು ಧರಣಿ‌ ಮುಂದುವರಿಸಿದರು. ಕೇಂದ್ರ ಸರ್ಕಾರದ ವಿರುದ್ಧದ ನಿರ್ಣಯಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಜನರ ಸುರಕ್ಷತೆಗಾಗಿ ರಾಜಧಾನಿಯ 30 ಕಡೆಗಳಲ್ಲಿ ‘ಸೇಫ್ಟಿ ಐಲ್ಯಾಂಡ್’ ವ್ಯವಸ್ಥೆ ಜಾರಿ: ಸಚಿವ ಪರಮೇಶ್ವರ್​

ಎರಡು ಮಸೂದೆಗಳ ಅಂಗೀಕಾರ

ಗದ್ದಲದ ಮಧ್ಯದಲ್ಲೇ ಎರಡು ವರದಿಗಳ ಮಂಡನೆ ಮತ್ತು ಎರಡು ಮಸೂದೆಗಳ ಅಂಗೀಕಾರ ಆಯಿತು. ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಪ್ರತಿ ನಿರ್ಣಯ ಮಂಡಿಸಲು ಅವಕಾಶ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮನವಿ ಮಾಡಿದರು. ಸ್ಪೀಕರ್ ಒಪ್ಪಲಿಲ್ಲ. ಗದ್ದಲದ‌ ಮಧ್ಯೆಯೇ ತಾವು ತಂದಿದ್ದ ನಿರ್ಣಯದ ಕರಡನ್ನು ಅಶೋಕ ಓದಿದರು. ಗದ್ದಲ‌ ಮತ್ತಷ್ಟು ಜೋರಾಗುತ್ತಿದ್ದಂತೆ ಸ್ಪೀಕರ್ ಸದನದ ಕಲಾಪವನ್ನು ಸೋಮವಾರ ಬೆಳಿಗ್ಗೆ 9.30ಕ್ಕೆ ಮುಂದೂಡಿದರು.

ರಾಜ್ಯಸಭಾ ಚುನಾವಣೆ; ರೆಸಾರ್ಟ್‌ ರಾಜಕೀಯ

ಮಂಗಳವಾರ ರಾಜ್ಯಸಭೆ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಸೋಮವಾರವೇ ಅಧಿವೇಶನವನ್ನು ಮುಗಿಸಬೇಕಾಗಿದೆ. ಬಜೆಟ್‌ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಸೋಮವಾರ ಉತ್ತರ ನೀಡಲಿದ್ದಾರೆ. ಬಳಿಕ ಅನಿರ್ದಿಷ್ಟಾವಧಿಗಳ ಕಾಲ ಸದನ ಮುಂದೂಡಲಿದೆ.

ರಾಜ್ಯಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು ಸೋಮವಾರವೇ ರೆಸಾರ್ಟ್‌ ಸೇರಲಿದ್ದಾರೆ. ಅಧಿವೇಶನ ಮುಗಿದ ಬಳಿಕ ಅವರು ರೆಸಾರ್ಟ್‌ಗೆ ತೆರಳಲಿದ್ದಾರೆ. ಈ ನಿಟ್ಟಿನಲ್ಲಿ ಬಹುತೇಕ ಮಧ್ಯಾಹ್ನವೇ ಅಧಿವೇಶನ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X