ಜೂನ್ ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಸಚಿವ ಈಶ್ವರ ಖಂಡ್ರೆ

Date:

Advertisements

– ಮೈಸೂರಿನ ಕಾರಂಜಿ ಕೆರೆಯಲ್ಲಿ ಮತ್ಯ್ಸಾಗಾರ ನಿರ್ಮಾಣಕ್ಕೆ ಸಮ್ಮತಿ
– ಗದಗ ಮೃಗಾಲಯ ಅಭಿವೃದ್ಧಿಗೆ 13.20 ಎಕರೆ ಜಮೀನು ಭೂಸ್ವಾಧೀನಕ್ಕೆ ಒಪ್ಪಿಗೆ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು.

Advertisements

ಮೈಸೂರು ಚಾಮರಾಜೇಂದ್ರ ಮಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು.

ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿಸಲಾಯಿತು. ಅದೇ ರೀತಿ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರಗಳನ್ನು ನಿರ್ಮಿಸಲು ಈಗಾಗಲೇ ನಡೆದಿರುವ ಪರಿಕಲ್ಪನೆ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆ ವರದಿ ಪರಿಶೀಲಿಸಿ ಜಾಗತಿಕ ಮಾನದಂಡಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು.

ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕು ಇತ್ಯಾದಿಯಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ, ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಯಿತು. ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳೀಯ ಪಶುವೈದ್ಯಾಧಿಕಾರಿಗಳ ಸೇವೆ ಪಡೆಯಲು ಘಟನೋತ್ತರ ಅನುಮೋದನೆ ನೀಡಲಾಯಿತು.

ಈಶ್ವರ ಖಂಡ್ರೆ
ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆ

ಇತರ ನಿರ್ಣಯಗಳು

ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಾಣಿ, ಪಕ್ಷಿಗಳಿಗೆ ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರು ಒದಗಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು, ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಹರಿಸುವ ಕ್ರಮ ಕೈಗೊಳ್ಳಲು ಸಮ್ಮತಿ.

ಬನ್ನೇರುಘಟ್ಟ ಉದ್ಯಾನದಲ್ಲಿ ನೇರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು 21 ಸಾವಿರ ಮಾಸಿಕ ವೇತನ ಮೀರಿದ 153 ಸಿಬ್ಬಂದಿಗೆ ಸಿ.ಜಿ.ಎಚ್.ಎಸ್. ದರದಂತೆ ವೈದ್ಯಕೀಯ ವೆಚ್ಚ ಭರಿಸಲು ಅನುಮೋದನೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ರಣಹದ್ದು ಸಂರಕ್ಷಣಾ ಸಂತಾನೋತ್ಪತ್ತಿ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್ ಕೇಂದ್ರವಾಗಿ ಕಾರ್ಯನಿರ್ವಹಣೆಗೆ ಅನುಮೋದನೆ.

ಗದಗ ಮೃಗಾಲಯದ ವಿಸ್ತರಣೆ ಮತ್ತು ಅಭಿವೃದ್ಧಿಗೆ 13.20 ಎಕರೆ ಜಮೀನು ಭೂಸ್ವಾಧೀನಕ್ಕೆ ಒಪ್ಪಿಗೆ, ಮೃಗಾಲಯದ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಮಧ್ಯಾಹ್ನದ ಊಟ ಪೂರೈಕೆಗೆ ಸಮ್ಮತಿ ನೀಡಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X