ಅಪ್ಪ ಸಿಎಂ ಕುರ್ಚಿ ಮೇಲೆ ಕೂರುವಂತಾಗಲಿ: ಐಶ್ವರ್ಯ ಡಿಕೆಶಿ

Date:

  • ಅಪ್ಪನನ್ನು ಸಿಎಂ ಕುರ್ಚಿಯಲ್ಲಿ ನೋಡುವ ಆಸೆ ವ್ಯಕ್ತಪಡಿಸಿದ ಡಿಕೆಶಿ ಪುತ್ರಿ
  • ಬಹುಮತ ಪಡೆದು ಕಾಂಗ್ರೆಸ್ ರಾಜ್ಯದ ಆಡಳಿತ ನಡೆಸುವಂತಾಗಲಿ ಎಂದ ಐಶ್ವರ್ಯ

ರಾಜ್ಯ ವಿಧಾನಸಭಾ ಚುನಾವಣಾ ರಣಕಣದ ಜಿದ್ದಾಜಿದ್ದಿನ ಹೋರಾಟಕ್ಕೆ ತೆರೆ ಬಿದ್ದಿದೆ. ನಾಡಿನ ಜನ ಮತ ಚಲಾಯಿಸಿ ತಮ್ಮ ಆಯ್ಕೆಯನ್ನು ಮತಪಟ್ಟಿಗೆಗೆ ಸೇರಿಸಿದ್ದಾರೆ.

- Advertisement -

ಈ ನಡುವೆ ಬಂದಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವುದರ ಜೊತೆಗೆ ಅಧಿಕಾರಕ್ಕೇರುವ ಸಾಧ್ಯತೆ ದಟ್ಟವಾಗಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗುತ್ತಾರೆನ್ನುವ ವಿಚಾರ ಚರ್ಚೆ ಮುನ್ನೆಲೆಗೆ ಬಂದಿದೆ.

ಈ ಚರ್ಚೆ ನಿಧಾನಗತಿಯಲ್ಲಿ ಕಾವು ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಡಿಕೆಶಿ ಹೆಗಡೆ ತಮ್ಮ ತಂದೆ ವಿಚಾರದಲ್ಲೊಂದು ಸಂವೇದನಾತ್ಮಕ ಹೇಳಿಕೆ ನೀಡಿದ್ದಾರೆ.

ನಮ್ಮ ತಂದೆ ಹಾಗೂ ಚಿಕ್ಕಪ್ಪ ಇಬ್ಬರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಅವರ ಮುಂದೀಗ ಪಕ್ಷವನ್ನು ಅಧಿಕಾರಕ್ಕೆ ತರುವ ಸವಾಲಿದೆ. ಈ ಸನ್ನಿವೇಶ ನೋಡಿದರೆ ಅವರ ಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ದೇವರು ಆಶೀರ್ವದಿಸಿದರೆ ಜನರ ಇಚ್ಚೆಯಂತೆ ಅಪ್ಪ ಸಿಎಂ ಕುರ್ಚಿಯಲ್ಲಿ ಕೂರುವಂತಾಗಲಿ. ಹೀಗಾದಲ್ಲಿ ಇನ್ನಷ್ಟು ಅಭಿವೃದ್ದಿ ಕಾರ್ಯವನ್ನು ಅವರು ಮಾಡಲು ಸಹಕಾರಿಯಾಗುತ್ತದೆ ಎಂದು ಹೇಳಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?:ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಎದುರಾಗಿ ಆಪರೇಷನ್ ಹಸ್ತ?

ರಾಷ್ಟ್ರೀಯ ಸುದ್ದಿ ವಾಹಿನಿ ಜೊತೆ ಮಾತನಾಡುವ ವೇಳೆ ತಮ್ಮ ಈ ಅಭಿಪ್ರಾಯವನ್ನು ಐಶ್ವರ್ಯ ಶಿವಕುಮಾರ್‌ ಹೆಗಡೆ ಹೇಳಿಕೊಂಡಿದ್ದಾರೆ. ಅವರ ಈ ಹೇಳಿಕೆ ಈಗ ಮಹತ್ವ ಪಡೆದುಕೊಂಡಿದ್ದು, ರಾಜಕೀಯ ವಲಯದೊಳಗೆ ಸಣ್ಣ ಸಂಚಲನ ಮೂಡಿಸಿದೆ.ಡಿಕೆಶಿ

ಆದರೆ ಇದೇ ವಿಚಾರದಲ್ಲಿ ಮತದಾನದ ಹಿಂದಿನ ದಿನ ಮಾತನಾಡಿದ್ದ ಡಿಕೆ ಶಿವಕುಮಾರ್ ಚುನಾವಣಾ ಪ್ರಚಾರದ ವೇಳೆ ತಮ್ಮನ್ನು ಸಿಎಂ ಮಾಡುವಂತೆ ಮತಭಿಕ್ಷೆ ಕೇಳಿದ್ದರು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಸಿಎಂ ಆಯ್ಕೆ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು ಎಂದಿದ್ದರು.

ಇಂದು (ಮೇ 11) ಚುನಾವಣಾ ಜವಾಬ್ಧಾರಿ ಕಳೆದ ಬಳಿಕ ವಿಶ್ರಾಂತಿ ಪಡೆದುಕೊಂಡಿದ್ದ ಡಿಕೆ ಸಹೋದರರು ತಮ್ಮ ಹುಟ್ಟೂರು ಕನಕಪುರ ದೊಡ್ಡಾಲನಹಳ್ಳಿಗೆ ತೆರಳಿ ತಾಯಿಯೊಂದಿಗೆ ಕೆಲಕಾಲ ಕಳೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...