ಹಾಲು ಒಕ್ಕೂಟ ವ್ಯವಸ್ಥೆ ಬಗ್ಗೆ ಹೆಚ್‌ ಡಿ ಕುಮಾರಸ್ವಾಮಿ ಸಹೋದರನ ಬಳಿ ತಿಳಿದುಕೊಳ್ಳಲಿ: ಡಿ ಕೆ ಶಿವಕುಮಾರ್‌

Date:

ಕುಮಾರಸ್ವಾಮಿ ಅವರಿಗೆ ಹಾಲು ಒಕ್ಕೂಟದ ವ್ಯವಸ್ಥೆ ಬಗ್ಗೆ ಗೊತ್ತೇ ಇಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರು ತಮ್ಮ ಸಹೋದರನ ಬಳಿ ಮಾಹಿತಿ ಪಡೆಯಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

- Advertisement -

ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ಬಳಿಕ ಹಾಲಿನ ದರ ಹೆಚ್ಚಳದ ಹಣ ರೈತರಿಗೆ ಹೋಗುವುದಿಲ್ಲ, ಸರ್ಕಾರಕ್ಕೆ ಹೋಗಲಿದೆ ಎಂಬ ಕುಮಾರಸ್ವಾಮಿ ಟೀಕಿ ಬಗ್ಗೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿ ಕೇಳಿದಾಗ ಹೀಗೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹಾಲಿನ ದರ ಏರಿಕೆ ಹೆಚ್ಚಳ ವಿರೋಧಿಸಿ, ಇದು ಈಸ್ಟ್ ಇಂಡಿಯಾ ಸರ್ಕಾರ ಎಂಬ ಕುಮಾರಸ್ವಾಮಿ ಟೀಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ಏನಾದರೂ ಟೀಕೆ ಮಾಡಲಿ. ರೈತರು ಬದುಕಬೇಕಲ್ಲವೇ? ಅವರಿಗೆ ಕಾಳಜಿ ಇದ್ದರೆ, ಹಸುಗಳ ಮೇವಿನ ಬೆಲೆ ಕಡಿಮೆ ಮಾಡಿಸಲಿ. ಜಿಎಸ್ ಟಿ, ಇಂಧನ ತೈಲ ಬೆಲೆ ಕಡಿಮೆ ಮಾಡಿಸಲಿ” ಎಂದು ಕುಟುಕಿದರು.

“ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿ ಎಲ್ಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಿದ್ದಾರೆ. ಪಕ್ಷವು ಸರ್ಕಾರಕ್ಕಿಂತ ದೊಡ್ಡದು, ಹೀಗಾಗಿ ಹೈಕಮಾಂಡ್ ನಾಯಕರು ಜಿಲ್ಲಾ ಅಧ್ಯಕ್ಷರಿಗೆ ವಿಶೇಷ ಕಾರ್ಯಕ್ರಮ ನೀಡಿದ್ದಾರೆ” ಎಂದರು.

“ಸದಸ್ಯತ್ವ ಅಭಿಯಾನ ಹೇಗೆ ಮಾಡಬೇಕು, ಮತದಾರರ ಪಟ್ಟಿ ಪರಿಶೀಲನೆ, ಬಿಎಲ್‌ಓಗಳ ನೇಮಕ, ಸಾಮಾಜಿಕ ಜಾಲತಾಣಗಳ ಪರಿಣಾಮ ಬಳಕೆ, ಪಕ್ಷಕ್ಕೆ ದೇಣಿಗೆ ಸಂಗ್ರಹ ಸೇರಿದಂತೆ ಅನೇಕ ಮಾರ್ಗದರ್ಶನ ನೀಡಿದರು. ಮುಂದೆ ಗುಜರಾತಿನಲ್ಲಿ ನಡೆಯಲಿರುವ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಶಕ್ತಿ ತುಂಬುವ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದರು.

“ಜಿಲ್ಲಾ ಉಸ್ತುವಾರಿ ಸಚಿವರು, ತಮ್ಮ ಉಸ್ತುವಾರಿ ಜಿಲ್ಲೆಗೆ ಭೇಟಿ ನೀಡಿದಾಗ ಅಲ್ಲಿನ ಕಾಂಗ್ರೆಸ್ ಕಚೇರಿಗೆ ಹೋಗಿ ಕಾರ್ಯಕರ್ತರನ್ನು ಭೇಟಿ ಮಾಡಬೇಕು. ಜಿಲ್ಲಾ ಪ್ರವಾಸ ಮಾಡುವಾಗ ಜಿಲ್ಲಾ ಅಧ್ಯಕ್ಷರನ್ನು ಜತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಅಧ್ಯಕ್ಷರುಗಳು ಕೂಡ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದು, ನೀವು ಯಾರ ಮೇಲೂ ಅವಲಂಬಿತರಾಗಬೇಡಿ ನಾವು ನಿಮಗೆ ರಕ್ಷಣೆ ನೀಡುವುದಾಗಿ ಧೈರ್ಯ ತುಂಬಿದರು. ಪಕ್ಷ ಸಂಘಟನೆಗೆ ಹೊಸ ಸ್ವರೂಪ ನೀಡಲು ಮಲ್ಲಿಕಾರ್ಜುನ ಖರ್ಗೆ ಅವರು ಕೈಗೊಂಡಿರುವ ಹೊಸ ಕ್ರಮಗಳನ್ನು ನಾನು ಸ್ವಾಗತಿಸುತ್ತೇನೆ” ಎಂದರು.

ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ನಾವು ಈ ಪತ್ರ ನೋಡುತ್ತೇವೆ, ಪರಿಶೀಲನೆ ಮಾಡಿ, ಚರ್ಚಿಸುತ್ತೇವೆ. ಆನಂತರ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...