ಸ್ವಾತಂತ್ರ್ಯದ 100ನೇ ವರ್ಷಾಚರಣೆ ವೇಳೆಗೆ ಭಾರತ ವಿದ್ಯಾವಂತರ ದೇಶವಾಗಲಿ: ರಾಜ್ಯಪಾಲ ಗೆಹ್ಲೋಟ್

Date:

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜಭವನದ ಅಂಗಳದಲ್ಲಿ ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.

ರಾಜಭವನದ ಅಂಗಳದಲ್ಲಿರುವ ಮಹಾತ್ಮಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಮುಖ್ಯ ಭದ್ರತಾ ಅಧಿಕಾರಿ ಎಸಿಪಿ ನಿಂಗಾರೆಡ್ಡಿ ನೇತೃತ್ವದ ಪೊಲೀಸ್ ತಂಡದಿಂದ ಗೌರವ ರಕ್ಷೆ ನೀಡಲಾಯಿತು.

ರಾಜ್ಯದ ಜನತೆ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, “ಕರ್ನಾಟಕದ ಜನತೆಗೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಆಗಸ್ಟ್ 15 ನಮಗೆ ಐತಿಹಾಸಿಕ ದಿನ ಮತ್ತು ನಮಗೆ ಸ್ವಾತಂತ್ರ್ಯ ನೀಡಿದ ಆ ಮಹಾಪುರುಷರು ಮತ್ತು ಹುತಾತ್ಮರನ್ನು ಸ್ಮರಿಸುವ ದಿನ. ಈ ದಿನ ಅವರಿಂದ ‌ಸ್ಫೂರ್ತಿ ಪಡೆದು ಹೊಸ ಹಾದಿ ಮತ್ತು ಹೊಸ ಸಂಕಲ್ಪದೊಂದಿಗೆ ಮುನ್ನಡೆಯಲು ಅವಕಾಶವಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕರ್ನಾಟಕ ದೇಶದ ಪ್ರಗತಿಪರ ರಾಜ್ಯ. ಕರ್ನಾಟಕ ರಾಜ್ಯವು ಅಭಿವೃದ್ಧಿ ಉಪಕ್ರಮಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಗುರಿಯೊಂದಿಗೆ ಮೂಲ ಸೇವೆಗಳಿಗೆ ಪ್ರವೇಶ ಸೇರಿದಂತೆ ವಿವಿಧ ನವೀನ ಮತ್ತು ಅಂತರ್ಗತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನಮ್ಮ ರಾಜ್ಯವು ಪ್ರವರ್ತಕವಾಗಿದೆ” ಎಂದು ತಿಳಿಸಿದರು.

“ಮಹಿಳೆಯರು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ನಿರುದ್ಯೋಗಿ ಯುವಕರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರದಿಂದ 5 ಖಾತರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ. ಸ್ವಾತಂತ್ರ್ಯಾನಂತರ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿ ಸರ್ವತೋಮುಖ ಅಭಿವೃದ್ಧಿಯಾಗಿದ್ದು, ದೇಶದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ ಪ್ರಮುಖ ದೇಶಗಳಲ್ಲಿ 5 ನೇ ಸ್ಥಾನದಲ್ಲಿದೆ. ಸ್ವಾತಂತ್ರ್ಯದ 100 ನೇ ವರ್ಷಾಚರಣೆಯ ಸಂದರ್ಭದಲ್ಲಿ ಭಾರತವು ಶೇ.100 ವಿದ್ಯಾವಂತರಾಗಿ, ಆರ್ಥಿಕವಾಗಿ ಸದೃಢವಾಗಬೇಕು ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿರಬೇಕು ಎಂಬುದು ಭಾರತದ ಜನರ ನಿರೀಕ್ಷೆಯಾಗಿದೆ. ಇದಕ್ಕಾಗಿ ನಾವೆಲ್ಲರೂ ದೇಶಕ್ಕಾಗಿ ನಮ್ಮ ಕರ್ತವ್ಯಗಳನ್ನು ಭಕ್ತಿ ಮತ್ತು ಸಮರ್ಪಣಾ ಭಾವದಿಂದ ನಿರ್ವಹಿಸಬೇಕಾಗಿದೆ” ಎಂದು ಹೇಳಿದರು.

“ಪ್ರಸ್ತುತ ದೇಶ ಮತ್ತು ವಿಶ್ವದಲ್ಲಿ ಪರಿಸರ ಅಸಮತೋಲನದ ಗಂಭೀರ ಸಮಸ್ಯೆ ಇದೆ. ಪರಿಸರವನ್ನು ರಕ್ಷಿಸುವ ಮತ್ತು ಸುಧಾರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ‘ಅಮ್ಮನ ಹೆಸರಲ್ಲಿ ಒಂದು ಮರ’ ಅಭಿಯಾನದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಮಹತ್ವದ ಕೆಲಸ ಮಾಡಬೇಕು. ಪ್ಯಾರಿಸ್‌ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪದಕಗಳನ್ನು ಗೆದ್ದು ಉತ್ತಮ ಪ್ರದರ್ಶನ ನೀಡಿದ ಎಲ್ಲ ಭಾರತೀಯ ಕ್ರೀಡಾಪಟುಗಳಿಗೆ ಅಭಿನಂದನೆಗಳು” ಎಂದರು.

“ನಮ್ಮ ದೇಶದ ಆರ್ಥಿಕತೆಯನ್ನು ಬಲಪಡಿಸಲು, ಪರಿಸರವನ್ನು ಸಂರಕ್ಷಿಸಲು ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಮತ್ತು ದೇಶದ ಭವಿಷ್ಯದ ಪೀಳಿಗೆಗಳು ನಮ್ಮ ಬಗ್ಗೆ ಉತ್ತಮ ಗ್ರಹಿಕೆಯನ್ನು ಬೆಳೆಸಿಕೊಳ್ಳುವಂತೆ ಶ್ರಮಿಸೋಣ” ಎಂದು ರಾಜ್ಯಪಾಲರು ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿಗಳಾದ ಪ್ರಭುಶಂಕರ್, ರಾಜ್ಯಪಾಲರ ಆಪ್ತ ಕಾರ್ಯದರ್ಶಿಗಳಾದ ಪಂಕಜ್ ಮೆಹ್ತಾ, ಉಪ ಕಾರ್ಯದರ್ಶಿಗಳ ಯೋಗೇಶ್ ಉಪಧ್ಯಾಯ್,ಎಡಿಸಿ ಸಾಬುಥಾಮಸ್, ಎಡಿಸಿ ಸಂದೀಪ್ ಶರ್ಮಾ, ಒಎಸ್ ಡಿಗಳಾದ ಶಂಕರ್ ಲಾಲ್ ಗುಜರ್, ಆದರ್ಶ್ ಪಾಸ್ವಾನ್ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಲವರ ಪಾಲಿಗೆ ಕರಾಳ ದಿನವಾದ ಗಣೇಶ ಚತುರ್ಥಿ; ಜೂನ್‌, ಜುಲೈ, ಆಗಸ್ಟ್‌ನಲ್ಲೇ ಹೆಚ್ಚು ರಸ್ತೆ ಅಪಘಾತ

ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದರಿಂದ ಅಪಘಾತಗಳಲ್ಲಿ ಸಾವನ್ನಪ್ಪುವವರ...

ಜೈವಿಕ ತಂತ್ರಜ್ಞಾನ ನೀತಿ 2024-2029 ಅನಾವರಣ; 1,000ಕ್ಕೂ ಹೆಚ್ಚು ನವೋದ್ಯಮ ಸ್ಥಾಪನೆಯ ಗುರಿ

ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ...

ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಗಾಳಿ ಕಲುಷಿತ : ಎಚ್ಚರಿಕೆ ನೀಡಿದ ಗ್ರೀನ್ ಪೀಸ್ ವರದಿ

ಕರ್ನಾಟಕ ರಾಜ್ಯದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಹಾಗು ಮೈಸೂರಿನ...

ಹರಿಯಾಣ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ ಸೇರಿದ ದಿನವೇ ವಿನೇಶ್ ಫೋಗಟ್‌ಗೆ ಟಿಕೆಟ್

ಹರಿಯಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಶುಕ್ರವಾರ ರಾತ್ರಿ ತನ್ನ...