ಯುಪಿಎ, ಎನ್‌ಡಿಎ ಅವಧಿಯಲ್ಲಿ ಎನ್‌ಡಿಆರ್‌ಎಫ್ ಹಣ ಎಷ್ಟು ಬಂದಿದೆ ಎಂಬುದು ಬಹಿರಂಗವಾಗಲಿ: ಬೊಮ್ಮಾಯಿ

Date:

ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಮತ್ತು ಎನ್‌ಡಿಎ ಕಾಲದಲ್ಲಿ ಎಷ್ಟು ಎನ್‌ಡಿಆರ್‌ಎಫ್ ಹಣ ಬಂದಿದೆ ಎಂಬುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯ ಸರ್ಕಾರ ಅಧೋಗತಿಗೆ ಹೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಇದು ರಾಜಕೀಯ ತಂತ್ರಗಾರಿಕೆ” ಎಂದು ಟೀಕಿಸಿದರು.

“ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್‌ಡಿಎ ಅವಧಿಯಲ್ಲಿ ಎನ್‌ಡಿಆರ್‌ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎಂದು ಬಹಿರಂಗಪಡಿಸಲಿ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದೇ ವೇಳೆ ಮೋದಿ ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, “ಇನ್ನು ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಪರೋಕ್ಷವಾಗಿ ಕಾಂಗ್ರೆಸ್‌ಗೆ ಕಪಾಳಕ್ಕೆ ಹೊಡೆಯುತ್ತಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ; ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು

ಸೆಲೆಬ್ರಿಟಿಗಳು ಬರುತ್ತಾರೆ

“ಲೋಕಸಭೆ ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು ಎಲ್ಲ ಕಡೆ ಬರುತ್ತಾರೆ. ರಾಷ್ಟ್ರೀಯ ನಾಯಕರ ಜೊತೆ ಸೆಲೆಬ್ರೆಟಿಗಳು ಕೂಡಾ ಪ್ರಚಾರಕ್ಕೆ ಬರುತ್ತಾರೆ. ಎರಡು ಮೂರು ದಿನಗಳಲ್ಲಿ ರಾಷ್ಟ್ರೀಯ ನಾಯಕರ ಪ್ರಚಾರ ಪ್ರವಾಸದ ನಿರ್ಧಾರ ಆಗುತ್ತದೆ. ಧಾರವಾಡ ಹಾಗೂ ನಮ್ಮ ಕ್ಷೇತ್ರಕ್ಕೂ ಪ್ರಚಾರಕ್ಕೆ ಬರುತ್ತಾರೆ. ನಮ್ಮ ಕ್ಷೇತ್ರಕ್ಕೆ ಯಡಿಯೂರಪ್ಪ, ವಿಜಯೇಂದ್ರ ಸೇರಿ ಎಲ್ಲರೂ ಪ್ರಚಾರಕ್ಕೆ ಬರುತ್ತಾರೆ” ಎಂದು ಹೇಳಿದರು.

ರೆಡ್ಡಿ ಆಗಮನ ಬಲ ತಂದಿದೆ

ಮಾಜಿ ಸಚಿವ ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದಿರುವುದು ಬಲ ಬಂದಿದೆ. ಮೂರ್ನಾಲ್ಕು ಜಿಲ್ಲೆಗಳಲ್ಲಿ ಅವರ ಪ್ರಭಾವ ಇದೆ ಎಂದರು. ಇನ್ನು ಬಿಜೆಪಿಗೆ ಬಂದರೆ ಎಲ್ಲರೂ ಶುದ್ಧವಾಗುತ್ತಾರೆ ಅನ್ನುವ ಸಚಿವ ಸಂತೋಷ್ ಲಾಡ್ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಅದು ಅವರ ಅನುಭವದ ಮಾತು” ಎಂದು ಲಾಡ್ ಗೆ ತಿರುಗೇಟು ನೀಡಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು: ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿ

ಮೇಕೆಗಳನ್ನು ಮೇಯಿಸುತ್ತಿದ್ದಾಗ ಹುಲಿ ಯೊಂದು ಹಠಾತ್ ದಾಳಿ ನಡೆಸಿ ಮಹಿಳೆಯನ್ನು ಹೊತ್ತೊಯ್ದ...

ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ 6 ಜನರ ಸಾವು

ಇಂದು ಮುಂಜಾನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...