ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲಿ, ಅಗತ್ಯ ನೆರವು ಒದಗಿಸುವೆ: ಸಿಎಂ ಸಿದ್ದರಾಮಯ್ಯ

Date:

Advertisements

ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, “ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಕೊಳ್ಳಿ” ಎನ್ನುವ ಸೂಚನೆ ನೀಡಿದರು.

Advertisements

“ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ. ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ” ಎಂದರು.

“ನಾನು ಸೇರಿ ಮಂತ್ರಿಗಳು, ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಉಪ ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ” ಎಂದು ಹೇಳಿದರು.

“ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್ ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಗಾಯಾಳುಗಳ ಜೀವ ಉಳಿಸಲು ಗೋಲ್ಡನ್ ಹವರ್ ಬಹಳ ಮುಖ್ಯ ಎನ್ನುವುದನ್ನು ಪರಿಗಣಿಸಿ ಸರ್ಕಾರ ಈ ಕಾರ್ಯಕ್ಕೆ ಮುಂದಾಗಿದೆ” ಎಂದರು.

ನಾನು ಬಜೆಟ್‌ನಲ್ಲಿ ಹೇಳಿದ್ದನ್ನು ಜಾರಿ ಮಾಡಿ: ಸಿಎಂ ಸೂಚನೆ

“ಬಜೆಟ್‌ನಲ್ಲಿ ಘೋಷಿಸಿರುವ ಎಲ್ಲ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ” ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ವೇದಿಕೆಯಿಂದಲೇ ಸೂಚನೆ ನೀಡಿದರು.

“ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಹಣ ಬಿಡುಗಡೆ ಮಾಡಿದ್ದೇನೆ. ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ” ಎಂದು ಸಚಿವರಿಗೆ ಸೂಚನೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. E Thara Yava Rajakaraniyu Heluvudilla, Nijavada Badavara Kaalaji Hondiruva CM Siddaramaiha ravarige Nanna Anantha Anantha Namaskaragalu. Idu Rajya Aluva Nayaka.
    Bari Jaathi, Dharma, Hizab, Ankondu 10 varsha Karnatakavannu Goodsi Gundatara Madralla. Ivaranna Nodi Kaliyabeku.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X