- ಎನ್‌ಡಿಎ ಭಾಗವಾಗಿ ಅಧಿಕೃತವಾಗಿ ಗುರುತಿಸಿಕೊಂಡ ಜೆಡಿಎಸ್
- ‘ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆ ವಿಸರ್ಜಿಸಿದ್ದಾರೆ’
ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಕೊನೆಗೂ ಒಮ್ಮತಕ್ಕೆ ಬಂದಿದ್ದು, ಎನ್‌ಡಿಎ ಭಾಗವಾಗಿ ಜೆಡಿಎಸ್ ಗುರುತಿಸಿಕೊಂಡಿದೆ. ಈ ವಿಚಾರವಾಗಿ ಕಾಂಗ್ರೆಸ್ ಟ್ವೀಟ್ ಮಾಡಿ ಜೆಡಿಎಸ್‌ಅನ್ನು ಕಾಲೆಳೆದಿದೆ.
“ಜೆಡಿಎಸ್ ಇಂದು ಅಧಿಕೃತವಾಗಿ ಎನ್‌ಡಿಎ ಮೈತ್ರಿಕೂಟದೊಳಗೆ ವಿಲೀನವಾಗಿದೆ. ಇನ್ಮುಂದೆ ಜೆಡಿಎಸ್ ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು” ಎಂದಿದೆ.
“ಕೇವಲ ‘ಜೆಡಿ’ ಎಂದು ಇಟ್ಟುಕೊಳ್ಳಬಹುದು ಇಲ್ಲವೇ ‘ಕೆಡಿ’ ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ! ಕೆಡಿ ಅಂದರೆ ‘ಕಮಲ ದಳ’. ಪಕ್ಷ ವಿಸರ್ಜಿಸುತ್ತೇನೆ ಎಂದವರು ಕೊನೆಗೆ ಜಾತ್ಯತೀತತೆಯನ್ನು ವಿಸರ್ಜಿಸಿದ್ದಾರೆ” ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.