ಕುಮಾರಸ್ವಾಮಿ ಹಿಟ್ ಅಂಡ್ ರನ್ ಬಿಟ್ಟು, ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ: ಡಿ ಕೆ ಶಿವಕುಮಾರ್ ಸವಾಲು

Date:

ಕುಮಾರಸ್ವಾಮಿ ಜೀವನ ಬರೀ ಹಿಟ್ ಅಂಡ್ ರನ್ ಮಾಡುವುದೇ ಆಗಿದೆ. ಅವರು ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವ ಬದಲು ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ, ಇಲ್ಲವೇ ಅವರ ಶಾಸಕರಿಂದ ಸದನದಲ್ಲಿ ಚರ್ಚೆ ಮಾಡಿಸಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸವಾಲು ಹಾಕಿದರು.

ಕಸ ವಿಲೇವಾರಿ ಟೆಂಡರ್ ನಲ್ಲಿ 15 ಸಾವಿರ ಕೋಟಿ ರೂ. ಲಂಚ ಪಡೆಯಲಾಗಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಸೋಮವಾರ ಗಮನ ಸೆಳೆದಾಗ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿ, “ಕುಮಾರಸ್ವಾಮಿ ಹತಾಶೆಯಲ್ಲಿದ್ದಾರೆ. ಅವರು ಬಹಿರಂಗ ಚರ್ಚೆಗೆ ಬರಲಿ” ಎಂದರು.

ಬಿಜೆಪಿ ಹಗರಣಗಳ ಪಿತಾಮಹ

ಅಧಿವೇಶನದಲ್ಲಿ ಹಗರಣಗಳ ಬಗ್ಗೆ ಬಿಜೆಪಿ ಸದನದ ಹೊರಗೆ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಅವರು ಸದನದ ಹೊರಗೆ ಯಾಕೆ ಹೋರಾಟ ಮಾಡುತ್ತಿದ್ದಾರೆ? ಸದನದ ಒಳಗೆ ಹೋರಾಟ ಮಾಡಲಿ. ಅವರು ಏನು ಹೇಳಬೇಕೋ ಸದನದ ಒಳಗೆ ಹೇಳಲಿ. ನಾವು ಏನು ಉತ್ತರ ಕೊಡಬೇಕೋ ಕೊಡುತ್ತೇವೆ. ನಮಗೂ ಅವರ ಬಗ್ಗೆ ಗೊತ್ತಿದೆ. ಎಲ್ಲವನ್ನೂ ಒಂದೊಂದಾಗಿ ಬಿಚ್ಚಿಡುತ್ತೇವೆ” ಎಂದು ಶಿವಕುಮಾರ್ ತಿಳಿಸಿದರು.

“ಮುಡಾ ಹಗರಣ ಸೇರಿದಂತೆ ಹಲವಾರು ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಬಿಜೆಪಿ ಭ್ರಷ್ಟಾಚಾರದ ತಂದೆ. ಅವರ ಆಡಳಿತ ಅವಧಿಯಲ್ಲಿ ಭ್ರಷ್ಟಾಚಾರದ ಸರಮಾಲೆಯೇ ನಡೆದಿದೆ. ಭ್ರಷ್ಟಾಚಾರ ರಹಿತ ಆಡಳಿತ ಮತ್ತು ಆಡಳಿತ ಶುದ್ಧೀಕರಣ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ” ಎಂದರು.

“ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿರುವುದು ನೋಡಿ ಮೈ ಪರಚಿಕೊಳ್ಳುತ್ತಿದ್ದಾರೆ. ಅವರುಗಳು ಹಣ್ಣನ್ನು ತಿಂದು ಸಿಪ್ಪೆಯನ್ನು ನಮ್ಮ ಮೇಲೆ ಎಸೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಪಾರ್ಲಿಮೆಂಟಿನಲ್ಲಿ ಏನು ಬೇಕಾದರೂ ಮಾಡಿಕೊಳ್ಳಲಿ. ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಕ್ತಿ ಯೋಜನೆಗೆ 2 ವರ್ಷ: 474.82 ಕೋಟಿ ಮಹಿಳೆಯರ ಉಚಿತ ಪ್ರಯಾಣ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೊಜನೆ'...

ತೋತಾಪುರಿ ಮಾವು ಖರೀದಿ ಮೇಲೆ ನಿರ್ಬಂಧ, ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ್ದು, ಚಿತ್ತೂರು...

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ ಅಲರ್ಟ್‌

ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶಿಸಿ ಎರಡು ವಾರಗಳು ಕಳೆದಿವೆ. ರಾಜ್ಯದ ನಾನಾ...

Download Eedina App Android / iOS

X