ಮುನಿರತ್ನ ಬಗ್ಗೆ ಒಕ್ಕಲಿಗ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು ಮಾತನಾಡಲಿ: ಡಿ ಕೆ ಶಿವಕುಮಾರ್‌

Date:

ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ಆಡಿರುವ ಮಾತಿನ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು ಮಾತನಾಡಬೇಕು. ಅದರ ಬಗ್ಗೆ ಆರ್ ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು ಎಂದು ಡಿಸಿಎಂ ಡಿ‌ ಕೆ ಶಿವಕುಮಾರ್ ಹೇಳಿದರು.

- Advertisement -

ಅಮೆರಿಕ ಪ್ರವಾಸದಿಂದ ಮರಳಿರುವ ಅವರು, ಮಂಗಳವಾರ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, “ಶಾಸಕ ಮುನಿರತ್ನ ಅವಹೇಳನ ಬಗ್ಗೆ ಮಾತನಾಡಲು ದೊಡ್ಡ ದೊಡ್ಡ ನಾಯಕರಿದ್ದಾರೆ. ಇಂತಹ ವಿಚಾರದಲ್ಲಿ ಬಿಜೆಪಿಯವರೇ ಮಾತನಾಡುವುದು ಸೂಕ್ತ. ಮುನಿರತ್ನ ಮಾತನಾಡಿರುವುದು ಸರಿಯೋ ತಪ್ಪೋ? ಒಳ್ಳೆಯದೋ, ಕೆಟ್ಟದ್ದೋ ಎಂಬುದನ್ನು ತಿಳಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಪೊಲೀಸರ ಬಂಧನಕ್ಕೆ ಮುಂಚಿತವಾಗಿ ನನ್ನ ವಿಚಾರದಲ್ಲಿ ಅಣ್ಣ- ತಮ್ಮರ ಆಟ ಶುರುವಾಗಿದೆ ಎನ್ನುವ ಮುನಿರತ್ನ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರ ಗೊತ್ತಿಲ್ಲ. ನನಗೆ ಇನ್ನು ಸರಿಯಾಗಿ ಮಾಹಿತಿ ಗೊತ್ತಿಲ್ಲ. ಸಾಂವಿಧಾನಿಕ ಹುದ್ದೆ ಹೊಂದಿರುವ ಆರ್ ಅಶೋಕ್, ವಿಜಯೇಂದ್ರ, ಕೇಂದ್ರ ಸಚಿವರು ಇದ್ದಾರೆ. ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಲಿ”ಎಂದರು.

ರಾಹುಲ್ ಗಾಂಧಿ ಅವರ ಭೇಟಿಗೆ ಯಾರ ಅನುಮತಿ ಬೇಕು?

ಅಮೆರಿಕದಲ್ಲಿ ರಾಹುಲ್ ಗಾಂಧಿ ಅವರ ಭೇಟಿ ಹಾಗೂ ಚರ್ಚೆಯ ವಿಚಾರದ ಬಗ್ಗೆ ಕೇಳಿದಾಗ, “ನಮ್ಮ ಪಕ್ಷದ ನಾಯಕರನ್ನು ಭೇಟಿಯಾಗಲು ಯಾರ ಅನುಮತಿ ಕೇಳಬೇಕು? ರಾಹುಲ್ ಗಾಂಧಿ ಅವರ ಬಳಿ ಏನು ಮಾತನಾಡಿದೆ ಎಂದು ನಿಮಗೆ (ಮಾಧ್ಯಮದವರಿಗೆ) ಹೇಳಲಾಗುತ್ತದೆಯೇ? ನನ್ನ ತಮ್ಮ, ಹೆಂಡತಿ ಮತ್ತು ಸ್ವಾಮೀಜಿಯವರ ಬಳಿ ಏನು ಮಾತನಾಡುತ್ತೇನೆ ಎಂಬುದನ್ನು ನಿಮ್ಮ ಬಳಿ ಹೇಳಲು ಆಗುತ್ತದೆಯೇ?” ಎಂದು ಹೇಳಿದರು.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ಪ್ರಕರಣದ ಬಗ್ಗೆ ಪ್ರಶ್ನಿಸಿದಾಗ, “ಸರ್ಕಾರ, ಪೊಲೀಸ್ ಇಲಾಖೆಯು ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೊ ಅದನ್ನು ಮಾಡುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...