ದೇಶದ ಸಾಲ ಎಷ್ಟಿದೆ ಅಂತ ಪ್ರಲ್ಹಾದ್ ಜೋಶಿ ಆದಿಯಾಗಿ ಬಿಜೆಪಿಯವರೇ ಜನರಿಗೆ ತಿಳಿಸಲಿ: ಸಚಿವ ಸಂತೋಷ್ ಲಾಡ್

Date:

Advertisements

ಪ್ರಲ್ಹಾದ ಜೋಶಿ ಸಾಹೇಬರ ಅಭಿವೃದ್ಧಿ ಕೆಲಸ ಕ್ಷೇತ್ರದಲ್ಲಿ ಹಳ್ಳ ಹಿಡಿದಿದೆ. ದೇಶದ ಸಾಲ ಎಷ್ಟಿದೆ ಅಂತ ಪ್ರಹ್ಲಾದ್​ ಜೋಶಿ ಹಾಗೂ ಬಿಜೆಪಿ ಅವರೇ ದೇಶದ ಜನರಿಗೆ ತಿಳಿಸಲಿ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಕಳೆದ ಹತ್ತು ವರ್ಷದಲ್ಲಿ ಪ್ರಧಾನಿ ಮೋದಿ ಏನು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬುವುದು ನನಗಂತೂ ಗೊತ್ತಿಲ್ಲ. ರೈತರ ಸಾಲ ಮನ್ನಾ, ಆದಾಯ ದ್ವಿಗುಣ ಮಾಡುತ್ತೇನೆ ಅಂದಿದ್ದರು. ಯಾವ ರೈತರ ಆದಾಯ ದ್ವಿಗುಣ ಆಗಿದೆ” ಎಂದು ಪ್ರಶ್ನಿಸಿದರು.

“ಚುನಾವಣೆ ಬಂದಿದ್ದಕ್ಕೆ ಹಿಂದು-ಮುಸ್ಲಿಂ ವಿಷಯ ತರುತ್ತಿದ್ದಾರೆ. ಈ ದೇಶದಲ್ಲಿ ಅಜಿಮ್ ಪ್ರೇಮ್‍ಜಿ ಹೆಚ್ಚು ದಾನ ಮಾಡಿದ್ದಾರೆ. ಅವರೊಬ್ಬ ಮುಸ್ಲಿಂ ಸಮುದಾಯದವರು. 30 ಬಿಲಿಯನ್ ಡಾಲರ್ ಅವರು ದಾನ ಮಾಡಿದ್ದಾರೆ” ಎಂದರು.

Advertisements

“ಚುನಾವಣೆ ಬಂದಾಗ ಹಿಂದು-ಮುಸ್ಲಿಂ ಆಗುತ್ತೆ ಅಂತ ನಮಗೆ ಗೊತ್ತೇ ಇದೆ. ರಾಮ ಮಂದಿರ, ಹಿಂದು-ಮುಸ್ಲಿಂ, ಖಲಿಸ್ಥಾನ, ಪಾಕಿಸ್ತಾನ ವಿಚಾರ ಬರುತ್ತೆ. ನಾವು ಯಾವ ದೇಶಕ್ಕೆ ಹೋಲಿಕೆ ಮಾಡಬೇಕು? ಎಲ್ಲಾ ಸರಕುಗಳು ಚೈನಾದಿಂದ ಬರುತ್ತಿವೆ. ಮೇಕ್ ಇನ್ ಇಂಡಿಯಾ ಎಲ್ಲಿದೆ? ಮೇಕ್ ಇನ್ ಇಂಡಿಯಾಗೆ 450 ಕೋಟಿ ಖರ್ಚ ಆಯ್ತು. ಇದರ ಬಗ್ಗೆ ಬಿಜೆಪಿಯವರು ಮಾತನಾಡುತ್ತಾರಾ? ಭಾರತ ಪಾಸ್ ಪೋರ್ಟ್ ಪವರ್ 85ನೇ ಸ್ಥಾನಕ್ಕಿದೆ. ಪವರ್ ಫುಲ್ ಪ್ರಧಾನಿ ಇದ್ದಾರೆ ಅಂದರೇ, ಮೊದಲನೆ ಸ್ಥಾನದಲ್ಲಿ ಇರಬೇಕಿತ್ತಲ್ಲ” ಎಂದು ಲೇವಡಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರ ವಿರುದ್ಧ ʼರಾಷ್ಟ್ರೀಯ ಭದ್ರತಾ ಕಾಯ್ದೆʼ ಅಸ್ತ್ರ ಪ್ರಯೋಗ; ಪ್ರಜಾಪ್ರಭುತ್ವದ ಅಣಕ

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರೇ ರಾಷ್ಟ್ರೀಯ ಸ್ವಯಂಸೇವಕ ಸಂಘ ಅನ್ನು ಬ್ಯಾನ್ ಮಾಡಿದ್ದರು. ನಾನು ಸುಳ್ಳು ಹೇಳುತಿಲ್ಲ, ಬೇಕಿದ್ದರೆ ಬಿಜೆಪಿಯವರನ್ನು ಕೇಳಿ. ದಾಖಲೆ ತೆಗದು ನೋಡಲಿ. ಇದೀಗ ಅವರೇ ಸರ್ದಾರ್ ವಲ್ಲಭಭಾಯಿ ಪಟೇಲ್​​ರ ಪ್ರತಿಮೆ ನಿರ್ಮಾಣ ಮಾಡಿದ್ದಾರೆ. ಸರ್ದಾರ್ ವಲ್ಲಭಭಾಯಿ ಪಟೇಲ್​ ಅವರ ಪ್ರತಿಮೆ ನಿರ್ಮಾಣವಾಯ್ತು, ಮುಂದೇನು? ಇವರ ಸಿದ್ಧಾಂತವೆ ನನಗೆ ಅರ್ಥವಾಗುತಿಲ್ಲ. ಆರ್​ಎಸ್​ಎಸ್​, ಬಿಜೆಪಿಯವರು ಯಾರ ಪರ ಇದ್ದಾರೋ? ಯಾರ ವಿರುದ್ಧ ಇದಾರೋ? ಅರ್ಥವಾಗುತ್ತಿಲ್ಲ” ಎಂದರು.

“ಸರ್ದಾರ್ ವಲ್ಲಭಭಾಯಿ ಪಟೇಲ್​ ಅವರ ಪ್ರತಿಮೆಯನ್ನು ನಿರ್ಮಾಣ ಮಾಡಿದ್ದು ಚೈನಾದವರು. ಸರ್ದಾರ್ ವಲ್ಲಭಭಾಯಿ ಪಟೇಲ್​ ಅವರ ಎಲ್ಲಾದರೂ ಒಂದು ಪೋಸ್ಟರ್ ಇದೆಯಾ? ಸರ್ದಾರ್ ವಲ್ಲಭಭಾಯಿ ಪಟೇಲ್​ ಅವರನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ” ಎಂದು ವಾಗ್ದಾಳಿ ಮಾಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X