ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಗ್ಯಾರಂಟಿ ಖಾತರಿ ಬಗ್ಗೆ ಹೇಳಲಿ: ಮಾಜಿ ಸಿಎಂ ಎಚ್‌ಡಿಕೆ ಒತ್ತಾಯ

Date:

  • ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮುಖ್ಯಮಂತ್ರಿಗಳೇ ಜನರಿಗೆ ಮಾಹಿತಿ ನೀಡಲಿ
  • ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ ಎಂದ ಮಾಜಿ ಮುಖ್ಯಮಂತ್ರಿ

ಜನರಿಗೆ ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳ ಖಾತರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಭರವಸೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ಕುಟುಕಿರುವ ಅವರು, ಘೋಷಿತ ಯೋಜನೆಗಳ ಬಗ್ಗೆ ಜನರಿಗೆ ನಿಖರ ಮಾಹಿತಿ ನೀಡಿ ಎಂದು ಹೇಳಿದ್ದಾರೆ. ಕುಮಾರಸ್ವಾಮಿಯವರ ಟ್ವೀಟ್ ಸಾರಾಂಶ ಈ ಕೆಳಗಿನಂತಿದೆ:

ಕಾಂಗ್ರೆಸ್‌ಗೆ 135 ಸೀಟು ಕೊಟ್ಟ ಜನತೆಯ ‘ಗ್ಯಾರಂಟಿ ಬೇಡಿಕೆ’ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್ ಸರಕಾರದ ಜವಾಬ್ದಾರಿ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ?

ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ.

ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ. ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಮೇಷ ಎಂದರೆ ಜನ ಒಪ್ಪುವರೇ?

ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ.

ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ ‘ಗ್ಯಾರಂಟಿ ಜಾಹೀರಾತು’ಗಳು ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ.

ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ.

ಈ ಸುದ್ದಿ ಓದಿದ್ದೀರಾ?: ಕಾಂಗ್ರೆಸ್‌ ಗ್ಯಾರಂಟಿ | ಯೋಜನೆ ಜಾರಿಗೆ ಪ್ರಾಥಮಿಕ ಅಂದಾಜು ಮೊತ್ತದ ಪಟ್ಟಿ ಸಲ್ಲಿಸಿದ ಆರ್ಥಿಕ ಇಲಾಖೆ

ಅದು ಬಿಟ್ಟು ‘ಕೆಲ ಸಚಿವರು, ಶಾಸಕ’ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ..

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮನೆಯ ಯಜಮಾನಿಗೆ ರೂ. 1 ಲಕ್ಷ ಜಮೆ, ರೈತರ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ

"ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ....

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...