ಸಿಎಂ ರಾಜೀನಾಮೆ ನೀಡಲಿ, ಪ್ರಕರಣ ಸಿಬಿಐ ತನಿಖೆಗೆ ವಹಿಸಲಿ: ಆರ್‌ ಅಶೋಕ್‌ ಆಗ್ರಹ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹೈಕೋರ್ಟ್‌ ಆದೇಶ ಬಂದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು ಅಥವಾ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದ ಕೂಡಲೇ ರಾಜೀನಾಮೆ ಕೊಡಬೇಕಿತ್ತು. ಎಫ್‌ಐಆರ್‌ ಆದ ಬಳಿಕ ಪೊಲೀಸರ ಮುಂದೆ ನಿಲ್ಲಲು ಸಿದ್ದರಾಮಯ್ಯಗೆ ಸಾಧ್ಯವೇ ಇಲ್ಲ. ಕಪ್ಪು ಚುಕ್ಕೆ ಇಲ್ಲ, ನಾನು ಸಜ್ಜನ, ಮಾದರಿ ಎಂದು ಅವರು ಹೇಳಿಕೊಳ್ಳುತ್ತಾರೆ. ಈ ಅವಕಾಶ ಅವರಿಗೆ ಬಂದಿದೆ. ಕೂಡಲೇ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿ ರಾಜ್ಯಕ್ಕೆ ಮಾದರಿಯಾಗಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವುದರ ಜೊತೆಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತನಿಖೆಗೆ ಲೋಕಾಯುಕ್ತಕ್ಕೆ ಆದೇಶಿಸಲಾಗಿದೆ. ಬಿಜೆಪಿಯಿಂದ ಸದನದಲ್ಲಿ ಈ ಕುರಿತು ಹೋರಾಟ ಮಾಡಿದಾಗ, ಇದು ಬಿಜೆಪಿ ಪ್ರೇರಿತ, ಇದು ಷಡ್ಯಂತ್ರ ಎಂದು ಸಚಿವರು ಆರೋಪ ಮಾಡಿದ್ದರು. ರಾಜಭವನಕ್ಕೆ ಮುತ್ತಿಗೆ ಹಾಕಿದ ಶಾಸಕರು, ಬಾಂಗ್ಲಾ ಮಾದರಿ ಹೋರಾಟ ಮಾಡುತ್ತೇವೆಂದು ಬೆದರಿಕೆ ಹಾಕಿದ್ದರು. ಈಗ ಇದು ತನಿಖೆಗೆ ಸೂಕ್ತ ಎಂದು ನ್ಯಾಯಾಂಗದಿಂದಲೇ ತಿಳಿದುಬಂದಿದೆ. ಅದಕ್ಕೆ ಸ್ಪಷ್ಟವಾದ ಕಾರಣವನ್ನೂ ನ್ಯಾಯಾಲಯ ಹೇಳಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳಾರತಿ ಎತ್ತಬೇಕಾದ್ದು ಕಾವೇರಿಗಲ್ಲ, ಕಾಂಗ್ರೆಸ್ಸಿಗರಿಗೆ

“ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೇರೆ ದಾರಿಯಿಲ್ಲ. ಅವರು ಯಾವುದಕ್ಕೆ ಕಾಯುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ. ಬಿಜೆಪಿಯವರು ಪ್ರಕರಣ ದಾಖಲಿಸಿಲ್ಲ. ದೂರು ದಾಖಲಿಸಿದ್ದು ಆರ್‌ಟಿಐ ಕಾರ್ಯಕರ್ತರು ಹಾಗೂ ಹೋರಾಟಗಾರರು. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎಂದು ಆಪಾದನೆ ಮಾಡಿದ್ದರು. ಈಗ ನ್ಯಾಯಾಲಯಕ್ಕೆ ಯಾವ ರೀತಿಯ ಆಪಾದನೆ ಮಾಡುತ್ತಾರೆ” ಎಂದು ಪ್ರಶ್ನೆ ಮಾಡಿದರು.

“ಎರಡೂ ಕೋರ್ಟ್‌ಗಳಲ್ಲಿ ಅವರಿಗೆ ಹಿನ್ನಡೆಯಾಗಿದೆ. ಮೇಲಿನ ಕೋರ್ಟ್‌ಗೆ ಹೋಗುವ ಅವಕಾಶ ಇದ್ದೇ ಇದೆ. ಬಿಜೆಪಿ ಏನೂ ಹೇಳಿಲ್ಲ, ಎಲ್ಲವನ್ನೂ ಕೋರ್ಟ್‌ ಹೇಳಿದೆ. ಲೋಕಾಯುಕ್ತ ತನಿಖೆಗೆ ವಹಿಸಿರುವುದರಿಂದ ಎಫ್‌ಐಆರ್‌ ಆಗಲಿದೆ. ಲೋಕಾಯುಕ್ತ ಸ್ವತಂತ್ರ ಸಂಸ್ಥೆಯಾದರೂ ಪೊಲೀಸರು, ಪೊಲೀಸ್‌ ಇಲಾಖೆಯಡಿಯಲ್ಲೇ ಬರುತ್ತಾರೆ” ಎಂದರು.

ಪ್ರತಿಭಟನೆ

“ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ಒತ್ತಾಯಿಸಿದ್ದೇವೆ. ಪಕ್ಷದ ಎಲ್ಲ ಮುಖಂಡರು ಸೇರಿ ಗುರುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟಿಸಲಿದ್ದೇವೆ” ಎಂದು ಆರ್‌.ಅಶೋಕ್‌ ಇದೇ ವೇಳೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...