ಕುಡಿಯುವ ನೀರಿಗಾಗಿಯಾದರೂ ಸರ್ಕಾರ ಹೋರಾಟ ಮಾಡಲಿ: ಬೊಮ್ಮಾಯಿ ಆಗ್ರಹ

Date:

Advertisements
  • ‘ವಾಸ್ತವದ ಆಧಾರದಲ್ಲಿ ಸುಪ್ರೀಂ ಕೋರ್ಟ್ ಸೂಚನೆ ನೀಡಬೇಕಿತ್ತು’
  • ‘ತಮಿಳುನಾಡು ಡ್ಯಾಮ್‌ಗಳಲ್ಲಿನ ನೀರಿನ ಮಟ್ಟ ಲೆಕ್ಕ ಹಾಕಬೇಕು’

15 ದಿನ ಸಿಡಬ್ಲುಎಂಎ ಆದೇಶ ಪಾಲನೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿರುವುದು ದುರದೃಷ್ಟಕರ. ಮತ್ತೊಮ್ಮೆ ಕರ್ನಾಟಕ ತನ್ನ ವಸ್ತುಸ್ಥಿತಿಯನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಬೇಕಿದೆ. ಸಿಡಬ್ಲುಎಂಎ ಆದೇಶ ಅಂತಿಮವಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ಕಾವೇರಿ ವಿಚಾರದಲ್ಲಿ ತನಗೆ ಸಂಬಂಧ ಇಲ್ಲ ಎನ್ನುವುದು ಸರಿಯಲ್ಲ. ಕೇವಲ ಕರ್ನಾಟಕದ ಡ್ಯಾಮ್‌ಗಳ ನೀರಿನ ಮಟ್ಟ ಲೆಕ್ಕ ಹಾಕುವುದಲ್ಲ. ತಮಿಳುನಾಡು ಡ್ಯಾಮ್‌ಗಳಲ್ಲಿನ ನೀರಿನ ಮಟ್ಟವನ್ನೂ ಲೆಕ್ಕ ಹಾಕಬೇಕು” ಎಂದು ಆಗ್ರಹಿಸಿದರು.

“ಕಾವೇರಿ ವಿಚಾರದಲ್ಲಿ ಸುಪ್ರೀಂ ಕೊರ್ಟ್ ಎರಡು ರಾಜ್ಯಗಳ ವಾದ ಕೇಳಿ ಸಿಡಬ್ಲುಎಂಎ ಆದೇಶ ಎತ್ತಿ ಹಿಡಿದಿದೆ.
ಸಿಡಬ್ಲುಎಂಎ ಮೊದಲ ಆದೇಶ ಬಂದಾಗಲೇ ರಾಜ್ಯ ಸರ್ಕಾರ ಸುಪ್ರೀಂ ‌ಕೋರ್ಟ್ ಮುಂದೆ ಮೇಲ್ಮನವಿ ಸಲ್ಲಿಸಬೇಕಿತ್ತು. ಸರ್ಕಾರ ಎರಡು ಬಾರಿ ನೀರು ಬಿಟ್ಟು ಈಗ ಸುಪ್ರೀಂ ಕೊರ್ಟ್ ಮುಂದೆ ಹೋಗಿದೆ. ಸುಪ್ರೀಂಕೋರ್ಟ್ ಸಂಪೂರ್ಣವಾಗಿ ಸಿಡಬ್ಲುಎಂಎ ಮೇಲೆ ಅವಲಂಬನೆ ಆಗಿದೆ. ಸಿಡಬ್ಲುಆರ್‌ಸಿ, ಸಿಡಬ್ಲುಎಂಎ ಎರಡೂ ಧೋರಣೆ ಸರಿಯಿಲ್ಲ. ಸಿಡಬ್ಲುಎಂಎ ಇಲ್ಲಿನ ವಾಸ್ತವ ಪರಿಸ್ಥಿತಿಯನ್ನು ನೋಡಬೇಕು. ಕೇವಲ ಅಂಕಿ ಅಂಶಗಳನ್ನು ಇಟ್ಟುಕೊಂಡು ಆದೇಶ ಮಾಡುತ್ತಿವೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರಿಂದ ಆಡಳಿತ: ಕುಮಾರಸ್ವಾಮಿ ಕಿಡಿ

ಕುಡಿಯುವ ನೀರಿಗಾಗಿ ಹೋರಾಟ ಮಾಡಲಿ

“ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಹೇಳಿದೆ. ತಮಿಳುನಾಡು ಈಗಾಗಲೇ ಅಕ್ರಮವಾಗಿ ನೀರು ಬಳಕೆ ಮಾಡಿಕೊಂಡಿದೆ. ಅದನ್ನು ಸುಪ್ರೀಂಕೋರ್ಟ್ ಗಮನಕ್ಕೆ ತರಬೇಕು. ರಾಜ್ಯ ಸರ್ಕಾರ ಕೇವಲ ನಮ್ಮಲ್ಲಿ ನೀರಿಲ್ಲ ಅಂತ ಹೇಳುವುದಷ್ಟೇ ಅಲ್ಲ. ಬೆಂಗಳೂರು ಒಂದು ಅಂತಾರಾಷ್ಟ್ರೀಯ ನಗರ ಇಲ್ಲಿ ಎಲ್ಲ ಭಾಗದ ಜನರು ಬರುತ್ತಾರೆ. ಬೆಂಗಳೂರಿಗೆ ಕುಡಿಯಲು ಪ್ರತ್ಯೇಕವಾಗಿ ನೀರು ಇಟ್ಟಿದ್ದಾರೆ. ಅದನ್ನು ಸುಪ್ರೀಂ ಕೋರ್ಟ್ ಮುಂದೆ ವಾದ ಮಾಡಬೇಕು” ಎಂದು ಹೇಳಿದರು.

ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಲಿ

“ತಮಿಳುನಾಡಿಗೆ ನವೆಂಬ‌ರ್‌ನಲ್ಲಿ ಮತ್ತೊಂದು ಹಿಂಗಾರು ಮಳೆ ಬರುತ್ತದೆ. ಆದರೆ, ಕರ್ನಾಟಕಕ್ಕೆ ಮುಂಗಾರು ಮುಗಿಯುವ ಹಂತದಲ್ಲಿದೆ. ಇದೆಲ್ಲವನ್ನು ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಿಕೊಡಬೇಕು. ಕುಡಿಯುವ ನೀರಿಗಾಗಿಯಾದರು ಉಳಿಸಿಕೊಳ್ಳಲು ರಾಜ್ಯ ಸರ್ಕಾರ ಹೋರಾಟ ಮಾಡಬೇಕು. ಇದರಲ್ಲಿ ನಮಗೆ ರಾಜಕಾರಣ ಮಾಡಲು ಇಷ್ಟ ಇಲ್ಲ. ಈಗಾಗಲೇ ರೈತರ ಬೆಳೆ ಒಣಗಿ ಹೋಗುತ್ತಿದೆ. ರಾಜ್ಯ ಸರ್ಕಾರ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X